Karnataka Weather Today: ಅ.26ಕ್ಕೆ ಹಿಂಗಾರು ಪ್ರವೇಶ; ಇಂದು-ನಾಳೆ ರಾಜ್ಯದ ಈ ಭಾಗಗಳಲ್ಲಿ ಮಳೆ ಸಾಧ್ಯತೆ

ಈ ವಾರ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇಂದು ನಾಳೆ 2 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಇರಲಿದ್ದು, ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today: ರಾಜ್ಯದಲ್ಲಿ ಸದ್ಯ ಮುಂಗಾರು ಮಳೆ (Heavy rainfall) ಅಬ್ಬರಿಸುತ್ತಿದ್ದು ಇದೇ ತಿಂಗಳು 26ರ ನಂತರ ದೇಶಾದ್ಯಂತ ಮುಂಗಾರು (Monsoon) ತಗ್ಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಮುಂಗಾರು ತಗ್ಗುವ ಬೆನ್ನಲ್ಲೇ ಹಿಂಗಾರು ಮಳೆ ಅ.26ರಿಂದ ಶುರುವಾಗಲಿದೆ. ಈ ಬಾರಿ ಮುಂಗಾರು ಮಳೆ ಹಿಂದೆ ಸರಿಯುವಿಕೆ ತಡವಾಗಿದೆ. ಮುಂಗಾರು ಮಾರುತಗಳು ದೇಶದ ಹಲವು ಭಾಗಗಳಲ್ಲಿ ಸಕ್ರಿಯವಾಗಿವೆ. ಪ್ರಸ್ತುತ ಮುಂಗಾರು ಮಾರುತವು ಕೊಹಿಮ್​, ಸಿಲ್ಚಾರ್​, ಕೃಷ್ಣನಗರ, ಬರಿಪಾಡ, ಮಲ್ಕನ್​ಗಿರಿ, ನಲ್ಗೊಂಡ ಪ್ರದೇಶಗಳಿಂದ ಹಾದು ಹೋಗುತ್ತಿದೆ. ಇನ್ನು ಅರಬ್ಬಿ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಕರವಾಳಿ ಭಾಗದಲ್ಲಿ ಮಳೆ (Rainfall) ಯಾಗುವ ಸಾಧ್ಯತೆಗಳಿವೆ.

ಕರ್ನಾಟಕದಲ್ಲಿ ಎಲ್ಲೆಲ್ಲೆ ಮಳೆಯಾಗಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಇಂದುನಾಳೆಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

2 ದಿನಗಳ ಕಾಲ ಯೆಲ್ಲೋ ಅಲರ್ಟ್‌

ಈ ವಾರ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇಂದು ನಾಳೆ 2 ದಿನಗಳ ಕಾಲ ಯೆಲ್ಲೋ ಅಲರ್ಟ್‌ ಇರಲಿದ್ದು, ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.

ಇದನ್ನೂ ಓದಿ: Astrology: ವಿದ್ಯಾರ್ಥಿಗಳಿಗೆ ಈ ದಿನ ಕೊಂಚ ಆಲಸ್ಯ ಹೆಚ್ಚು; ಇಲ್ಲಿದೆ 12 ರಾಶಿಗಳ ದಿನಭವಿಷ್ಯ

ಎಲ್ಲೆಲ್ಲಿ ಆರೆಂಜ್ ಅಲರ್ಟ್?

ಮುಂದಿನ ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದ ಹೊತ್ತಿಗೆ ಮತ್ತೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಮಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ಹವಾಮಾನ ಹೇಗಿತ್ತು?

ಉತ್ತರ ಖಂಡ, ಕೇರಳ ಸೇರಿದಂತೆ ದೇಶದ ವಿವಿಧ ಭಾಗದಲ್ಲಿ ಅವಾಂತರ ಸೃಷ್ಟಿಸಿರುವ ನೈರುತ್ಯ ಮುಂಗಾರು ಮಳೆ ಅಕ್ಟೋಬರ್​ 26ರ ಬಳಿಕ ದೇಶದಲ್ಲಿ ಕ್ಷೀಣವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ನೈರುತ್ಯ ಮುಂಗಾರು ಕ್ಷೀಣಿಸಿದ ಬಳಿಕ ಇದು ಈಶಾನ್ಯ ಮಾನ್ಸೂನ್​ ಆರಂಭವಾಗಲಿದೆ ಎಂದು ಐಎಂಡಿ ತಿಳಿಸಿದೆ. ಈಶಾನ್ಯ ಭಾರತದ ಕೆಲ ಪ್ರದೇಶ, ಉತ್ತರ ಬಂಗಾಳ ಕೊಲ್ಲಿ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಉಳಿದ ಭಾಗಗಳು, ಮಧ್ಯ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಆಂಧ್ರಪ್ರದೇಶ ಮತ್ತು ತೆಲಂಗಾಣದ ಭಾಗಗಳಿಂದ ನೈರುತ್ಯ ಮುಂಗಾರು ಕ್ಷೀಣವಾಗಲಿದೆ. ಗೋವಾ, ಕರ್ನಾಟಕದ ಕೆಲವು ಭಾಗಗಳು ಮತ್ತು ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು ಅಕ್ಟೋಬರ್ 23ರಿಂದ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ. ದೇಶದೆಲ್ಲೆಡೆ ಅ. 26ರ ಬಳಿಕ ನೈರುತ್ಯ ಮಾನ್ಸೂನ್​ ಕ್ಷೀಣಿಸಲಿದೆ.
Published by:Kavya V
First published: