Karnataka Weather Today: ಅಕ್ಟೋಬರ್ 16ವರೆಗೆ ಮುಂದುವರೆಯಲಿದೆ ಮಳೆಯ ಆರ್ಭಟ- ಬೆಂಗಳೂರಿನ ಇಂದಿನ ಹವಾಮಾನ ಹೀಗಿದೆ..

Rainfall: ಅಲ್ಲದೇ ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು ಇಂದು ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದ್ದು ‘ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.14):ನೈಋತ್ಯ ಮಾನ್ಸೂನ್ ಗೆ(Southwest Monsoon.) ಹೋಲಿಸಿದರೆ ಕರ್ನಾಟಕದಲ್ಲಿ ಈಶಾನ್ಯ ಮಾನ್ಸೂನ್( Northeast Monsoon) ಅವಧಿಯಲ್ಲಿ ಹೆಚ್ಚು ಮಳೆಯಾಗುತ್ತದೆ. ವಾಸ್ತವವಾಗಿ, ಈಶಾನ್ಯ ಮಾನ್ಸೂನ್ ಆರಂಭವಾಗುವ ಮುನ್ನವೇ ಕರ್ನಾಟಕದ(Karnataka) ಹಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದೆ. ಮೈಸೂರು, ಮಂಡ್ಯ, ಬೆಂಗಳೂರು, ಹಾಸನ, ಚಾಮರಾಜನಗರ ಸೇರಿದಂತೆ ದಕ್ಷಿಣ ಒಳ ಕರ್ನಾಟಕದ ಕೆಲವು ಕಡೆ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದೆ(Rainfall). ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿರುವ ಬೆಂಗಳೂರು(Bengaluru) ನಗರದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ.ಉತ್ತರ ಒಳನಾಡಿನಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹೋಲಿಸಿದರೆ ಕಡಿಮೆ ಮಳೆಯಾಗಲಿದೆ, ಆದರೂ ಕೆಲವೊಮ್ಮೆ ಅಧಿಕ ಮಳೆಯಾಗುವ ನಿರೀಕ್ಷೆಯನ್ನ  ತಳ್ಳಿಹಾಕುವಂತಿಲ್ಲ.

ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿನ ಕಡಿಮೆ ಒತ್ತಡದ ಪ್ರದೇಶದ ಕಾರಣ, ರಾಜ್ಯದ ಕರಾವಳಿ ಭಾಗಗಳಲ್ಲಿ ಕೂಡ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೈಕ್ಲೋನಿಕ್ ಸರ್ಕ್ಯುಲೇಷನ್ ಅರೇಬಿಯನ್ ಸಮುದ್ರದ ಮೇಲೆ ಕರ್ನಾಟಕ ಕರಾವಳಿಯಲ್ಲಿದೆ ಮತ್ತು ಇನ್ನೊಂದು ಪರಿಚಲನೆಯು ಬಂಗಾಳ ಕೊಲ್ಲಿಯಲ್ಲಿದೆ, ಇದರ ಪ್ರಭಾವದ ಕಾರಣ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದ್ದು, ಅದು ಅಧಿಕ ಮಳೆಗೆ ಕಾರಣವಾಗಲಿದೆ.

ರಾಜ್ಯದ ಇಂದಿನ ಹವಾಮಾನ ಹೇಗಿರಲಿದೆ? 

ಅಲ್ಲದೇ ರಾಜ್ಯದಲ್ಲಿ ಮಳೆ ಇನ್ನಷ್ಟು ಬಿರುಸಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು ಇಂದು ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದ್ದು ‘ಆರೆಂಜ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದೂ ಕೂಡ ರಾಜ್ಯದ ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಅಧಿಕ ಮಳೆಯ ನಿರೀಕ್ಷೆ ಇರುವ ಕಾರಣ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಇನ್ನು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 16ರವರೆಗೆ ಅತ್ಯಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ.

ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ ಈ ವಾರದ ಅಂತ್ಯದವರೆಗೆ ಮುಂದುವರೆಯುವ ಸಾಧ್ಯತೆ ಇದ್ದು, ಅಕ್ಟೋಬರ್ 20ರಿಂದ ಈಶಾನ್ಯ ಮಾನ್ಸೂನ್ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಎರಡು ದಿನಗಳ ಕಾಲ  ಸಿಲಿಕಾನ್ ಸಿಟಿಯಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆ?

ಕಳೆದ 24 ಗಂಟೆಗಳಲ್ಲಿ, ಕರಾವಳಿ ಕರ್ನಾಟಕ, ಕೇರಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗಿದೆ. ತಮಿಳುನಾಡು, ದಕ್ಷಿಣ ಒಳನಾಡು ಕರ್ನಾಟಕ, ಲಕ್ಷದ್ವೀಪ, ಕರಾವಳಿ ಆಂಧ್ರಪ್ರದೇಶ, ಉತ್ತರ ಕೊಂಕಣ ಮತ್ತು ಗೋವಾ, ಉತ್ತರ ಮಧ್ಯ ಮಹಾರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ನ ಕೆಲ ಪ್ರದೇಶಗಳಲ್ಲಿ ಅಧಿಕ ಮಳೆಯಾಗಿದೆ ಎಂದು ಇಲಾಖೆ ತಿಳಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ  ಸಾಮಾನ್ಯ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಹವಾಮಾನ ಹೇಗಿರಲಿದೆ?  

ಇದನ್ನೂ ಓದಿ: ಮನೆ-ಮನೆ ದಸರೆಯಲಿ ಮೈಸೂರಿನ ಗತಕಾಲದ ಕಥೆ; ಕಣ್ಮನ ಸೆಳೆಯುತ್ತಿದೆ ಬೊಂಬೆ ಪ್ರದರ್ಶನ

ಮುಂದಿನ 24 ಗಂಟೆಗಳಲ್ಲಿ, ನೈಋತ್ಯ ಮುಂಗಾರು ಅಂತ್ಯವಾಗುತ್ತಿದ್ದು, ಅಕ್ಟೋಬರ್ 14 ರೊಳಗೆ ಅಂದರೆ ಇಂದು ಪೂರ್ಣವಾಗಿ ಕೊನೆಯಾಗುವ ನಿರೀಕ್ಷೆಯಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಕರಾವಳಿ ಕರ್ನಾಟಕ ಮತ್ತು ಕೇರಳದ ಭಾಗಗಳು ಮತ್ತು ತಮಿಳುನಾಡು, ಲಕ್ಷದ್ವೀಪ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಪ್ರತ್ಯೇಕ ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.  ಪಶ್ಚಿಮ ಬಂಗಾಳ, ಈಶಾನ್ಯ ಭಾರತದ ಕೆಲವು ಭಾಗಗಳು, ಕರಾವಳಿ ಒಡಿಶಾ, ಕರಾವಳಿ ಆಂಧ್ರ ಪ್ರದೇಶ ಮತ್ತು ಕೊಂಕಣ ಮತ್ತು ಗೋವಾದ ಪ್ರತ್ಯೇಕ ಪಾಕೆಟ್‌ಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಸೂಚನೆ ನೀಡಿದೆ.
Published by:Sandhya M
First published: