ಬೆಂಗಳೂರು(ಅಕ್ಟೋಬರ್. 22): ಸಿಲಿಕಾನ್ ಸಿಟಿಯಲ್ಲಿ ಮಳೆಯ ಆರ್ಭಟ ಇಂದು ಸಂಜೆ ಜೋರಾಗಿದ್ದು, ಹಲವೆಡೆ ಧಾರಾಕಾರ ಮಳೆಯಾಗಿದೆ. ನಗರದ ಮಲ್ಲೇಶ್ವರ, ಶಾಂತಿನಗರ, ಜಯನಗರ, ಯಶವಂತಪುರ, ನಂದಿನಿ ಲೇಔಟ್, ಕೆ.ಆರ್.ಮಾರ್ಕೆಟ್, ಬನಶಂಕರಿ, ಬಸವನಗುಡಿ, ಹೆಬ್ಬಾಳ, ಶೇಷಾದ್ರಿಪುರಂ, ಶಿವಾನಂದ ಸರ್ಕಲ್ ಸೇರಿದಂತೆ ಹಲವಡೆ ಅರ್ಧ ಗಂಟೆ ಕಾಲ ಮಳೆ ಸುರಿದಿದೆ. ಕೆಲಸ ಮುಗಿಸಿ ಮನೆಗೆ ಹೊರಡುತ್ತಿದ್ದವರಿಗೆ ಮಳೆ ಆಘಾತವನ್ನುಂಟು ಮಾಡಿದೆ. ಮಳೆಯಲ್ಲಿ ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. ಮಳೆಯಿಂದಾಗಿ ರಸ್ತೆ ಬದಿಯ ಬಸ್ ನಿಲ್ದಾಣದಲ್ಲಿ ವಾಹನ ಸವಾರರ ಆಶ್ರಯ ಪಡೆದಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಎಂದು ಮುನ್ಸೂಚನೆ ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಇದನ್ನೂ ಓದಿ : ಮಲ್ಪೆ ಕಡಲಲ್ಲಿ ಸಿಕ್ಕಿತು ಬರೋಬ್ಬರಿ 750 ಕೆಜಿ ತೂಕದ ಬಲು ಅಪರೂಪದ ದೈತ್ಯ ಮೀನು
ಇನ್ನೆರಡು ದಿನ ಬೆಂಗಳೂರಿನಲ್ಲಿಯೂ ಭಾರೀ ಮಳೆ ಆಗುವ ಸಾಧ್ಯತೆಯಿದೆ. ತಗ್ಗುಪ್ರದೇಶದ, ಇಳಿಜಾರು ಪ್ರದೇಶಗಳಲ್ಲಿ ವಾಸಿಸುವ ಜನರು ಹುಷಾರ್ ಆಗಿರಬೇಕು ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ