Karnataka Weather Today: ರಾಜ್ಯದಲ್ಲಿ ವರುಣನ ಆರ್ಭಟಕ್ಕೆ ಜನ ತತ್ತರ- ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

Rainfall: ರಾಜಧಾನಿ ಬೆಂಗಳೂರು ಸಹ ನಿನ್ನೆ ಸುರಿದ ಮಳೆಗೆ ಮಲೆನಾಡಿನಂತಾಗಿತ್ತು. ನಿನ್ನೆ ನಗರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು.  ಅಕ್ಚೋಬರ್ 10ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today ಬೆಂಗಳೂರು(ಅ.07): ರಾಜ್ಯದಲ್ಲಿ ವರುಣನ(Rainfall) ಆರ್ಭಟ ಕಡಿಮೆಯಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ. ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದ್ದು , ಮುಂದಿನ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ರಾಜ್ಯದಲ್ಲಿ ಮುಂದಿನ ಕೆಲ ದಿನಗಳ ಕಾಲ  ಭರ್ಜರಿ ಮಳೆಯಾಗಲಿದೆ(Heavy rainfall) ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ.  ಬಂಗಾಳ ಕೊಲ್ಲಿಯಲ್ಲಿ(Bay Of Bengal) ವಾಯುಭಾರ ಕುಸಿತ ಹಿನ್ನೆಲೆಯಲ್ಲಿ  ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದಿಂದ ತಮಿಳುನಾಡು ಮತ್ತು ಕೇರಳದಾದ್ಯಂತ ಆಗ್ನೇಯ ಅರಬ್ಬಿ ಸಮುದ್ರದವರೆಗೆ  ಮುಂಗಾರು ವಿಸ್ತರಿಸಿದ್ದು, ಇದು ಭಾರೀ ಮಳೆಗೆ ಕಾರಣವಾಗಿದೆ.

ಕರ್ನಾಟಕದಲ್ಲಿ ಮುಂಗಾರು ಅವಧಿಯಲ್ಲಿ 852 ಮಿ. ಮೀ. ಮಳೆಯಾಗಬೇಕಿತ್ತು. ಆದರೆ 787 ಮಿ. ಮೀ. ಮಳೆಯಾಗಿದೆ. ಈಗ ಮುಂಗಾರು ಅಂತ್ಯಗೊಂಡಿದ್ದರೂ ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ?

ಅಲ್ಲದೇ ಇಂದು ಸಹ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದ್ದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಧಿಕ ಮಳೆಯ ನಿರೀಕ್ಷೆ ಇರುವ ಕಾರಣ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್

ಇದನ್ನೂ ಓದಿ: ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರು ಸಹ ನಿನ್ನೆ ಸುರಿದ ಮಳೆಗೆ ಮಲೆನಾಡಿನಂತಾಗಿತ್ತು. ನಿನ್ನೆ ನಗರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತ್ತು.  ಅಕ್ಚೋಬರ್ 10ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆಯಾಗಿದೆ?

ಕಳೆದ 24 ಗಂಟೆಗಳಲ್ಲಿ, ಕೇರಳ ತಮಿಳುನಾಡು, ಕರ್ನಾಟಕದ ಕೆಲವು ಭಾಗಗಳು ಮತ್ತು ಪಶ್ಚಿಮ ಬಂಗಾಳ, ಅಸ್ಸಾಂ, ವಿದರ್ಭ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಇನ್ನುಳಿದಂತೆ, ಈಶಾನ್ಯ ಭಾರತ, ಗೋವಾ, ಮಧ್ಯ ಮಹಾರಾಷ್ಟ್ರ, ಕೋಸ್ಟಲ್ ಆಂಧ್ರ ಪ್ರದೇಶ, ಆಗ್ನೇಯ ಮಧ್ಯ ಪ್ರದೇಶ, ಛತ್ತೀಸ್‌ಗಢ, ಒಡಿಶಾ ಮತ್ತು ಹರಿಯಾಣದ ಪ್ರತ್ಯೇಕ. ಪಶ್ಚಿಮ ಉತ್ತರ ಪ್ರದೇಶ, ತೆಲಂಗಾಣ, ದೆಹಲಿ ಮತ್ತು ಮರಾಠವಾಡದಲ್ಲಿ ಭಾರೀ ಮಳೆಯಾಗಿದೆ.

ಮುಂದಿನ 24 ಗಂಟೆಗಳಲ್ಲಿ ಎಲ್ಲೆಲ್ಲಿ ಮಳೆ?

ಮುಂದಿನ 24 ಗಂಟೆಗಳಲ್ಲಿ, ಕರ್ನಾಟಕ, ಕೇರಳದ ಕೆಲವು ಭಾಗಗಳು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತಮಿಳುನಾಡು, ಮಹಾರಾಷ್ಟ್ರದ ಕೆಲವು ಭಾಗಗಳು ಮತ್ತು ಮಣಿಪುರ, ಮಿಜೋರಾಂ ಮತ್ತು ತ್ರಿಪುರಾಗಳ ಪ್ರತ್ಯೇಕ ಪಾಕೆಟ್‌ಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  ಜೊತೆಗೆ ಪಶ್ಚಿಮ ಬಂಗಾಳ, ಸಿಕ್ಕಿಂ, ಉಳಿದ ಈಶಾನ್ಯ ಭಾರತ, ಒಡಿಶಾ, ಮಧ್ಯಪ್ರದೇಶ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಸಾಧಾರಣ ಮಳೆಯಾಗಬಹುದು.

ಇದನ್ನೂ ಓದಿ: ಕೊಡಗಿನ ತಲಕಾವೇರಿ ತೀರ್ಥೋದ್ಭವದಲ್ಲಿ ಭಾಗವಹಿಸಲು ಜಿಲ್ಲೆಯ ಭಕ್ತರಿಗೆ ಮುಕ್ತ ಅವಕಾಶ

ದೇಶದ ಬಹುತೇಕ ಭಾಗಗಳಲ್ಲಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. "ಜೂನ್‌ನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತಲೂ ಶೇ. 7ರಷ್ಟು ಕಡಿಮೆಯಾಗಿತ್ತು. ಆಗಸ್ಟ್ ತಿಂಗಳಲ್ಲಿ ಶೇ. 24ರಷ್ಟು ಕಡಿಮೆಯಾಗಿದೆ. ಆದರೆ ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯ ಕಾರಣದಿಂದಾಗಿ ಕೊರತೆ ಪ್ರಮಾಣ ನೀಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕರು ತಿಳಿಸಿದ್ದಾರೆ.
Published by:Sandhya M
First published: