Heavy Rain: ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ; ಸಾಕಪ್ಪ ಸಾಕು ನಿಲ್ಲೋ ಮಳೆರಾಯ

10 ಜಿಲ್ಲೆಗಳಿಗೆ ಮಳೆಯ ಅಲರ್ಟ್​ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಹಾಸನದಲ್ಲಿ ಭಾರೀ ಮಳೆಯಾಗೋ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರಿನಲ್ಲಿ ಮಳೆಯ ಮುನ್ಸೂಚನೆ

  • Share this:
ರಾಜ್ಯದಲ್ಲಿ ಮಳೆಯ (Rainfall) ಅಬ್ಬರ ನಿಲ್ಲೋ ಲಕ್ಷಣಗಳೇ ಕಾಣುತ್ತಿಲ್ಲ. ಎಲ್ಲಿ ನೋಡಿದ್ರು ಮಳೆ, ನೀರು ಕಂಡು ಜನರೇ ಬೇಸತ್ತು ಹೋಗಿದ್ದಾರೆ. ಈ ಬಾರಿ ಮಳೆ ಸೃಷ್ಟಿ ಮಾಡಿರೋ ಅವಾಂತರ ಅಷ್ಟಿಷ್ಟಲ್ಲ. ಅನೇಕರು ಪ್ರಾಣ ಕಳೆದುಕೊಂಡಿದ್ರೆ ನೂರಾರು ಜನ ಮನೆ –ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಇನ್ನೆರಡು ದಿನಗಳ ಕಾಲ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ತಿಳಿಸಿದೆ. 10 ಜಿಲ್ಲೆಗಳಿಗೆ ಮಳೆಯ ಅಲರ್ಟ್ (Alart)​ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕೊಡಗು, ಬೀದರ್, ಕಲಬುರ್ಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ಶಿವಮೊಗ್ಗ ಹಾಗೂ ಹಾಸನದಲ್ಲಿ (Hassan) ಭಾರೀ ಮಳೆಯಾಗೋ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲೂ ಮಳೆ ಮಳೆ

ಬೆಂಗಳೂರಿನಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸಿಟಿಯಲ್ಲಿ ಮಧ್ಯಾಹ್ನದವರೆಗೂ 3.7 ಮಿ.ಮೀ ಮಳೆಯಾಗಲಿದೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಭಾಗದಲ್ಲಿ 0.6 ಮಿ.ಮೀ ಮಳೆ ಹಾಗೂ ಬೆಂಗಳೂರು HAL ಭಾಗದಲ್ಲಿ 2.7 ಮಿ.ಮೀ ಮಳೆ ಪ್ರಮಾಣ ದಾಖಲಾಗಲಿದೆ.

ಕರಾವಳಿ, ಮಲೆನಾಡು ಭಾಗದಲ್ಲಿ ಮಳೆ ಆರ್ಭಟ

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 2 ದಿನ ವ್ಯಾಪಕ ಮಳೆಯಾಗಿದ್ದು, ಉಳಿದೆಡೆ ಸಾಧಾರಣ ಮಳೆ ಬೀಳಲಿದೆ. ನಂತರದ ದಿನಗಳಲ್ಲಿ ಮಳೆಯು ಉತ್ತರ ಭಾರತದತ್ತ ಹೊರಳಲಿದ್ದು, ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

ಈಗಾಗಲೇ ಮುಂಗಾರು ಆರ್ಭಟ ತುಸು ಕಡಿಮೆಯಾಗುತ್ತಿದೆ. ಮುಂದಿನ 2 ರಿಂದ 3 ದಿನ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ನಂತರದ ದಿನದಲ್ಲಿ ಉತ್ತರ ಭಾರತದತ್ತ ಮುಂಗಾರು ಚಲಿಸಲಿದ್ದು ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಮಳೆಗಾಲ ಆಗಿರುವುದರಿಂದ ಕಡಿಮೆಯಾಗಿರುವ ಮಳೆಯು ಕೆಲ ದಿನಗಳ ಬಳಿಕ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: Kodagu Rains: ವರುಣಾರ್ಭಟ; ಕಾವೇರಿಯ ರುದ್ರ ಪ್ರತಾಪ, ಸಂಪರ್ಕ ಕಡಿತ, ಮನೆ ಕುಸಿತ , ಜನಜೀವನ ಅಸ್ತವ್ಯಸ್ತ

ಇಂದು 10 ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾನುವಾರ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಸನ, ಯಾದಗಿರಿ, ಕಲಬುರಗಿ, ಬೀದರ್‌ ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಬೆಳಗಾವಿ, ರಾಯಚೂರು, ವಿಜಯಪುರ, ಚಾಮರಾಜನಗರ, ದಾವಣಗೆರೆ ಮತ್ತು ಮೈಸೂರು ಜಿಲ್ಲೆಗಳಿಗೆ ಯಲ್ಲೊ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ

ಕೊಡಗಿನಲ್ಲಿ ಮಳೆಯ ಆರ್ಭಟ

ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಯಿಂದ ಗ್ರಾಮದ 400 ಕುಟುಂಬ ಜಲ ದಿಗ್ಬಂಧನವಾಗಿರುವಂತಹ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಚೆರಿಯಪರಂಬು ಗ್ರಾಮದಲ್ಲಿ ನಡೆದಿದೆ. ಕೊಡಗು ಜೀವ ಪಣಕ್ಕಿಟ್ಟು ಗ್ರಾಮಸ್ಥರು ಪ್ರವಾಹ ದಾಟುತ್ತಿದ್ದಾರೆ. ಪೊಲೀಸ್ ಠಾಣೆಯಿಂದ ಗ್ರಾಮಸ್ಥರು ಮರಳು ತೆಪ್ಪ ತಂದಿದ್ದು, ಅದರ ಮೂಲಕ ಗ್ರಾಮಸ್ಥರು ಹೋಗುತ್ತಿದ್ದಾರೆ. ಸ್ಥಳೀಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನದಲ್ಲೂ ಕೊಚ್ಚಿ ಹೋಗಿದೆ ಹೆದ್ದಾರಿ

ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿದೆ. ನಿರಂತರ ಮಳೆಯಿಂದ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪದ ರಸ್ತೆ ತಡೆಗೋಡೆ ಕುಸಿತವಾಗಿದೆ. ನಿರಂತರ ಮಳೆಗೆ ಸುಮಾರು 25. ಮೀಟರ್ ಉದ್ದಕ್ಕೆ ಬೃಹತ್ ತಡೆಗೋಡೆ ಕೊಚ್ಚಿಹೋಗಿದೆ.

ಇದನ್ನೂ ಓದಿ: Landslides: ಕೊಡಗಿನಲ್ಲಿ ಮುಂದುವರೆದ ಮಳೆ ಅಬ್ಬರ; ಕರಿಕೆ ರಸ್ತೆ, ಸಂಪಾಜೆಯ ಕಲ್ಲಾಳದಲ್ಲಿ ಭೂಕುಸಿತ


ಚತುಷ್ಪತ ರಸ್ತೆ ನಿರ್ಮಾಣಕ್ಕಾಗಿ ಕೋಟ್ಯಾಂತರ ರೂ ವೆಚ್ಚದಲ್ಲಿ ನಿರ್ಮಿಸಿದ್ದ ತಡೆಗೋಡೆ ನಾಶವಾಗಿದೆ. ಸತತ 6 ದಿನಗಳಿಂದ ಮಲೆನಾಡಲ್ಲಿ ಮಳೆ ಆರ್ಭಟ ನಿಂತಿಲ್ಲ. ಈ ಹಿಂದೆ ದೋಣಿಗಲ್ ಸಮೀಪ ಭೂ ಕುಸಿತವಾಗಿದ್ದ ಸ್ಥಳದಿಂದ ಒಂದು ಕಿಲೋಮೀಟರ್ ಹಿಂದೆ ತಡೆಗೋಡೆ ಕೊಚ್ಚಿ ಹೋಗಿದೆ. ಮತ್ತಷ್ಟು ಮಳೆ ಹೆಚ್ಚಾದರೆ ಮುಖ್ಯ ರಸ್ತೆಗೆ ಹಾನಿಯಾಗೋ ಆತಂಕ ಎದುರಾಗಿದೆ.


Published by:Pavana HS
First published: