ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ; ಹವಾಮಾನ ಇಲಾಖೆ ಎಚ್ಚರಿಕೆ

ಏಪ್ರಿಲ್ 25 ರಂದು ಬೆಳಗ್ಗೆಯೇ ರಾಜಧಾನಿ ಬೆಂಗಳೂರು, ಕೊಡಗು ಸೇರಿದಂತೆ ಮತ್ತೆ ಹಲವಾರು ಕಡೆಗಳಲ್ಲಿ ಆರ್ಭಟಿಸಿದ್ದ ಮಳೆ ಸಾಕಷ್ಟು ಹಾನಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಏಪ್ರಿಲ್ 25); ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಏಪ್ರಿಲ್ 21 ರಂದೇ ಎಚ್ಚರಿಕೆ ನೀಡಿದ್ದ ಹವಾಮಾನ ಇಲಾಖೆ ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿತ್ತು. ಅದರಂತೆ ಏಪ್ರಿಲ್ 22 ರಂದು ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಿಂಚು ಗುಡುಗಿನೊಂದಿಗೆ ಬಿರುಗಾಳಿ ಸಹಿತ ಭಾರೀ ಮಳೆಯಾಗಿತ್ತು.ಇನ್ನೂ ಏಪ್ರಿಲ್ 25 ರಂದು ಬೆಳಗ್ಗೆಯೇ ರಾಜಧಾನಿ ಬೆಂಗಳೂರು, ಕೊಡಗು ಸೇರಿದಂತೆ ಮತ್ತೆ ಹಲವಾರು ಕಡೆಗಳಲ್ಲಿ ಆರ್ಭಟಿಸಿದ್ದ ಮಳೆ ಸಾಕಷ್ಟು ಹಾನಿಗೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದೂ ಸಹ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಸಿದ್ದು ಸಂಜೆಯ ಹೊತ್ತಿನಲ್ಲಿ ಮಳೆ ಆರ್ಭಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ : ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆಗೆ ಮುಂದಾದ ಕೇಂದ್ರ; ಹೊಸ ಆದೇಶದಲ್ಲಿ ಯಾರಿಗೆಲ್ಲಾ ಸಿಹಿ?
First published: