ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ರಾಜ್ಯಾದ್ಯಂತ ಮಳೆ (Rain) ಸುರಿಯುತ್ತಿದೆ. ಬಿರು ಬೇಸಿಗೆಯಲ್ಲಿ (Summer) ಅಬ್ಬರಿಸಿದ ವರುಣನಿಂದಾಗಿ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮೇ ತಿಂಗಳ (May Month) ಬಿಸಿಲಲ್ಲವೇ, ಇಂದು ಮಳೆ ಕಡಿಮೆಯಾಗುತ್ತೆ, ನಾಳೆ ಮಳೆ ನಿಲ್ಲುತ್ತೆ ಅಂತಿದ್ದ ಜನರಿಗೆ ಇದೀಗ ಶಾಕ್ (Shock) ಎದುರಾಗಿದೆ. ಯಾಕೆಂದ್ರೆ ಭಾರತೀಯ ಹವಾಮಾನ ಇಲಾಖೆ (Indian Meteorological Department) ಬೆಂಗಳೂರು (Bengaluru), ಕರಾವಳಿ (Coastal) ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯ (Heavy Rain) ಮುನ್ಸೂಚನೆ ನೀಡಿದೆ. ನಾಳೆಯಿಂದ ಅಂದರೆ ಮೇ 18ರಿಂದ ಮೇ 21ರವರೆಗೆ ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮೇ 18ರಿಂದ 21ರವರೆಗೆ ಮಳೆ ಅಬ್ಬರ
ನಾಳೆಯಿಂದ ಅಂದರೆ ಮೇ 18ರಿಂದ ಮೇ 21ರವರೆಗೆ ರಾಜ್ಯದ ಕರಾವಳಿ ಭಾಗ ಸೇರಿದಂತೆ ಹಲವೆಡೆ ಭಾರಿ ಮಳೆ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಅಂತ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಜೊತೆಗೆ ಗಂಟೆಗೆ 30-40 kmph ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ.
ರಾಜ್ಯದ ಹಲವು ಭಾಗಗಳಲ್ಲಿ ಅಲರ್ಟ್ ಘೋಷಣೆ
ರಾಜ್ಯದ ಬಹುತೇಕ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆಯಿಂದ ಸೂಚನೆ ನೀಡಿದೆ.
ಇದನ್ನೂ ಓದಿ: Explained: ಸಿಡಿಲು-ಮಿಂಚಿನಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳುವುದು ಹೇಗೆ? ಇಲ್ಲಿದೆ ನೋಡಿ ಅತ್ಯುತ್ತಮ ಮಾಹಿತಿ
ಬೆಂಗಳೂರಿನಲ್ಲಿ ಹೈ ಅಲರ್ಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತೆ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿಲಾಗಿದೆ. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಹೋಗಿ, ಹೊರ ಹೋಗುವಾಗ ಎಚ್ಚರಿಕೆಯಿಂದ ಇರಿ ಅಂತ ಹವಾಮಾನ ಇಲಾಖೆ ತಿಳಿಸಿದೆ.
ಯಾವ್ಯಾವ ಜಿಲ್ಲೆಗಳಲ್ಲಿ ಅಲರ್ಟ್?
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಅತ್ತ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ಗ್ರಾ., ಮೈಸೂರು, ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ದಿನ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಮೇ.18 ರಂದು ರೆಡ್ ಅಲರ್ಟ್ ಘೋಷಣೆ, ಮೇ.17 ಮತ್ತು ಮೇ 19 ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರತಿದಿನ ತಲಾ 100 ಮಿ.ಮೀ ರಿಂದ 150 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.
ಜಿಲ್ಲಾಡಳಿತದಿಂದ ಎಚ್ಚರಿಕೆ ಸಂದೇಶ
ಭಾರೀ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಇನ್ನು ಪ್ರವಾಸಿಗರು, ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಉಡುಪಿಯಲ್ಲೂ ಹೈ ಅಲರ್ಟ್
ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಮೇ 17 ಮತ್ತು ಮೇ 19 ಆರೆಂಜ್ ಅಲರ್ಟ್ ಘೋಷಣೆ, ಮೇ 18 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಾರ್ವಜನಿಕರು ನದಿ, ಸಮುದ್ರ ಇಳಿಯದಂತೆ ಕಟ್ಟೆಚ್ಚರ ವಹಿಸಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: Explained: ಪ್ರತಿ ಮಳೆಗಾಲದಲ್ಲೂ ಬೆಂಗಳೂರು ಮುಳುಗುವುದೇಕೆ? ಈ ಬಾರಿಯೂ ತಪ್ಪೋದಿಲ್ವ ಜನರಿಗೆ ಸಂಕಷ್ಟ?
ಮೈಸೂರಿನಲ್ಲಿ ಮಳೆ ಅಬ್ಬರ, ಜನ ತತ್ತರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಳೆಯ ಆರ್ಭಟ ಜೋರಾಗಿದೆ. ಭಾರಿ ಮಳೆಗೆ ಮನೆಗಳಿಗೆ ಯುಜಿಡಿ ನೀರು ನುಗ್ಗಿದೆ. ಶಾರದಾದೇವಿ ನಗರದ 45 ನೇ ವಾರ್ಡ್ ನಲ್ಲಿ ಘಟನೆ. ನಡೆದಿದ್ದು, ಇಲ್ಲಿನ ನಿವಾಸಿಗಳು ರಾತ್ರಿ ಇಡೀ ಪರದಾಡಿದ್ದಾರೆ. ಆನಂದ ನಗರ ರಾಜಕಾಲುವೆ ಒತ್ತುವರಿ ಪರಿಣಾಮ 60 ಅಡಿ ಅಗಲವಿದ್ದ ರಾಜಕಾಲುವೆ 15 ಅಡಿಗೆ ತಲುಪಿದೆ. ಪಾಲಿಕೆ ಸದಸ್ಯೆ ನಿರ್ಮಲಾ ಹರೀಶ್ ವಿರುದ್ಧ ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ