ಬೆಂಗಳೂರು(ಸೆಪ್ಟೆಂಬರ್. 29): ಬೆಂಗಳೂರು ನಗರದ್ಯಾದ್ಯಂತ ಮಧ್ಯಾಹ್ನದಿಂದ ರಾತ್ರಿಯವರೆಗೆ ಬಿಟ್ಟು ಬಿಡದೇ ಬಾರೀ ಮಳೆಯಾಗಿದೆ. ಮಳೆಯಿಂದಾಗಿ ನಗರದ ಜನಜೀವನ ಅಸ್ತವ್ಯಸ್ತ ಆಗಿದೆ. ಟ್ರಾಫಿಕ್ ನಲ್ಲಿ ಸಿಲುಕಿದ ವಾಹನ ಸವಾರರು ಪರದಾಡಿದರು. ಮೆಜೆಸ್ಟಿಕ್, ನಾಗರಬಾವಿ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿನಗರ, ಆರ್ ಆರ್ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಆಗಿದೆ. ಇನ್ನು, ಅಬ್ಬರದ ಮಳೆಗೆ ರಸ್ತೆಗಳೆಲ್ಲ ಬಹುತೇಕ ನದಿಗಳಂತಾಗಿವೆ. ಸದ್ಯ ಮನೆಯಿಂದ ಯಾರು ಹೊರಗೆ ಬಾರದೇ ಇರುವುದರಿಂದ ಅಷ್ಟೊಂದು ಸಮಸ್ಯೆ ಉಂಟಾಗಿಲ್ಲ. ಭಾರೀ ಮಳೆಯಿಂದಾಗಿ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಇನ್ನು, ಅಬ್ಬರದ ಮಳೆಗೆ ರಸ್ತೆಗಳೆಲ್ಲ ಬಹುತೇಕ ನದಿಗಳಂತಾಗಿವೆ. ಸದ್ಯ ಮನೆಯಿಂದ ಯಾರು ಹೊರಗೆ ಬಾರದೇ ಇರುವುದರಿಂದ ಅಷ್ಟೊಂದು ಸಮಸ್ಯೆ ಉಂಟಾಗಿಲ್ಲ. ಭಾರೀ ಮಳೆಯಿಂದಾಗಿ ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಶಿವನಾಂದ ವೃತ್ತದ ರೈಲ್ವೇ ಅಂಡರ್ ಪಾಸ್‍ನಲ್ಲಿ ಪರಿಸ್ಥಿತಿ ಕೆಟ್ಟದಾಗಿತ್ತು. ಬೈಕ್ ಸವಾರರೊಬ್ರು ದಾರಿ ಗೊತ್ತಾಗದೇ ಕೆಳಗೆ ಬಿದ್ದರು. ಆಟೋವೊಂದು ಕೆಟ್ಟು, ಚಾಲಕ ತಳ್ಳಿಕೊಂಡು ಹೋದರು. ಕೆಲಸ ಮುಗಿಸಿ ಮನೆಯತ್ತ ಹೊರಟಿದ್ದ ಜನರು ಮಳೆಯಲ್ಲಿ ಸಿಲುಕಿ ಪರದಾಡಿದರು.
ಮಲೆನಾಡು, ಕರಾವಳಿಯಲ್ಲಿ ಕಳೆದೊಂದು ವಾರದಿಂದ ಮಳೆ ಕಡಿಮೆಯಾಗಿತ್ತು. ಆದರೆ, ನಾಳೆ ಉತ್ತರ ಕರ್ನಾಟಕ ಮತ್ತು ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಘೋಷಣೆ - ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ್
ಅಕ್ಟೋಬರ್ 1 ರಿಂದ 3ರವರೆಗೆ ಸಾಧಾರಣ ಮಳೆಯಾಗಲಿದೆ. ರಾಜ್ಯದ ಬಹುತೇಕ ಕಡೆ ಮಳೆಯಾಗಲಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಬೆಂಗಳೂರು, ಕೋಲಾರ, ಬಳ್ಳಾರಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ