Karnataka Weather Today: ಬೆಂಗಳೂರಲ್ಲಿ 2 ದಿನ ಅಬ್ಬರಿಸಲಿರುವ ವರುಣ; ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ರೈನ್ ಅಲರ್ಟ್

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರದವರೆಗೆ ಅಂದರೆ ಇಂದು-ನಾಳೆ ವರುಣ ಅಬ್ಬರಿಸಲಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
Karnataka Rains Today: ರಾಜ್ಯಾದ್ಯಂತ ಮುಂಗಾರು ಮಳೆ (Monsoon) ಮತ್ತಷ್ಟು ಚುರುಕಾಗಿದ್ದು, ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಹಲವು ಭಾಗದಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಅ.22ರಂದು ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ಬೆಳಗಾವಿ, ಧಾರವಾಡ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಅ.23 ರಿಂದ ಅ.25ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಅಬ್ಬರಿಸಲಿರುವ ವರುಣ

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರದವರೆಗೆ ಅಂದರೆ ಇಂದು-ನಾಳೆ ವರುಣ ಅಬ್ಬರಿಸಲಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಅ. 22 ಮತ್ತು 23ರಂದು ಹೆಚ್ಚು ಮಳೆ ಬೀಳುವ ಸಂಭವವಿದೆ. ಅ. 1 ರಿಂದ 20ರವರೆಗೆ ನಗರದಲ್ಲಿ 209 ಮಿ.ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ರಸ್ತೆಗಳು ಗುಂಡಿ ಬಿದ್ದು, ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ.

 ಇಂದೂ ಯೆಲ್ಲೋ ಅಲರ್ಟ್‌ ಇದೆ

ಈ ವಾರ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇಂದು ಯೆಲ್ಲೋ ಅಲರ್ಟ್‌ ಇರಲಿದ್ದು, ಸಾಧಾರಣದಿಂದ ಭಾರೀ ಮಳೆ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದ ಲಕ್ಷ ದ್ವೀಪ ಭಾಗದಲ್ಲಿ ಹಾಗೂ ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮಳೆಗೆ ಮೂಲ ಕಾರಣ ಎನ್ನಲಾಗುತ್ತಿದೆ. ಇದರ ಜತೆಯಲ್ಲಿ ಒಂದು ವಾರದ ಬಳಿಕ ಮುಂಗಾರು ಮಳೆ ಕಡಿಮೆಯಾಗಿ ರಾಜ್ಯಕ್ಕೆ ಹಿಂಗಾರು ಪ್ರವೇಶ ಪಡೆಯಲಿದೆ ಎನ್ನುವುದು ಇಲಾಖೆಯ ಲೆಕ್ಕಾಚಾರ.

ಇದನ್ನೂ ಓದಿ: Uttarakhand rains: ವೈಮಾನಿಕ ಸಮೀಕ್ಷೆ ನಡೆಸಿದ ಅಮಿತ್​ ಶಾ; ಕೇದಾರನಾಥ​, ಗಂಗೋತ್ರಿ ಯಾತ್ರೆ ರದ್ದು

ಎಲ್ಲೆಲ್ಲಿ ಆರೆಂಜ್ ಅಲರ್ಟ್?

ಮುಂದಿನ ವಾರ ಮಳೆಯ ಪ್ರಮಾಣ ಕಡಿಮೆಯಾಗಲಿದೆ. ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದ ಹೊತ್ತಿಗೆ ಮತ್ತೆ ನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ರಾಜ್ಯದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು, ಮಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ ಇದ್ದು, ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕಳೆದ 24 ಗಂಟೆಗಳಲ್ಲಿ ಹವಾಮಾನ ಹೇಗಿತ್ತು?

ಅಲ್ಪ ವಿರಾಮದ ಬಳಿಕ ಕೇರಳದಲ್ಲಿ ಮತ್ತೆ ಮಳೆಯಾಗಿದೆ. ಕೇರಳದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಈಗಾಗಲೇ ಎಚ್ಚರಿಸಿದೆ. ಈ 8 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಪತ್ತನಂತಿಟ್ಟ, ಕೋಟಯಂ, ಇಡುಕ್ಕಿ, ಪಾಲಕ್ಕಾಡ್‌, ಮಲಪ‍್ಪುರ, ಕೋಯಿಕ್ಕೋಡ್‌, ವಯನಾಡ್‌ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ತಿರುವನಂತಪುರ, ಕೊಲ್ಲಂ, ಆಲಪ್ಪುಳ, ತ್ರಿಶ್ಶೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಆರೆಂಜ್‌ ಅಲರ್ಟ್ ಎಂದರೆ ಭಾರಿ ಮಳೆ ಮತ್ತು ಯೆಲ್ಲೋ ಅಲರ್ಟ್‌ ಎಂದರೆ ಅಲ್ಲಲ್ಲಿ ಸಾಮಾನ್ಯ ಮಳೆಯಾಗಲಿದೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್​ ಶಾ ಉತ್ತರಾಖಂಡ್​​ನಲ್ಲಿ ಮನೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ. ಜೊತೆ ಉತ್ತರಾಖಂಡ ಪ್ರವಾಹದಲ್ಲಿ ಸಿಲುಕಿದ್ದ 96 ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ಸಚಿವ ಆರ್​.ಅಶೋಕ್​ ಮಾಹಿತಿ ನೀಡಿದ್ದಾರೆ.
Published by:Kavya V
First published: