ಬೆಂಗಳೂರು(ಡಿ..06): ಹವಾಮಾನ ವೈಪರೀತ್ಯದಿಂದಾಗಿ ಬೆಂಗಳೂರು (Bengaluru) ಸೇರಿದಂತೆ ಕರ್ನಾಟಕದೆಲ್ಲಡೆ ಭಾರೀ ಮಳೆಯಾಗುವ (Heavy Rain) ಆತಂಕ ನಿರ್ಮಾಣವಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಬ್ಬರ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಹೌದು ಡಿಸೆಂಬರ್ 8 ರಿಂದ 10ರವರೆಗೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಡಿಸೆಂಬರ್ 6 ರಂದು ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ಕೋಲಾರ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ.
ಇದನ್ನೂ ಓದಿ: Protein Deficiency: ಪ್ರೋಟೀನ್ ಕೊರತೆ ಇದ್ರೆ ಈ ಹಣ್ಣುಗಳೇ ಪರಿಹಾರವಂತೆ
ದಕ್ಷಿಣ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ಭಾನುವಾರ 5.8 ಕೀಲೋ ಮೀಟರ್ ಎತ್ತರದಷ್ಟು ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ಸೋಮವಾರ ಈಶಾನ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಈ ಹವಾಮಾನ ವೈಪರೀತ್ಯವು ಪಶ್ಚಿಮ ವಾಯುವ್ಯ ದಿಕ್ಕಿನ ಮೂಲಕ ಸಾಗಿ ಡಿಸೆಂಬರ್ 7ರಂದು ವಾಯುಭಾರ ಕುಸಿತವಾಗಿ ಮಾರ್ಪಾಡಾಗುತ್ತದೆ.
ಅಲ್ಲಿಂದ ಆಗ್ನೇಯ ಭಾಗದತ್ತ ಚಲಿಸಿದ್ದು, ಡಿಸೆಂಬರ್ 8 ರಂದು ತಮಿಳುನಾಡು, ದಕ್ಷಿಣ ಆಂಧ್ರಪ್ರದೇಶ ಕರಾವಳಿ ಭಾಗಕ್ಕೆ ಅಪ್ಪಳಿಸಲಿದೆ. ಇದರ ಪರಿಣಾಮವಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಇದನ್ನೂ ಓದಿ: Children: ಪೋಷಕರೇ ಗಮನಿಸಿ, ಮಕ್ಕಳಲ್ಲಿ ಹೆಚ್ಚಾಗ್ತಿದೆ ಲೈಂಗಿಕ ಆಸಕ್ತಿ; ಕೊರೊನಾ ನಂತರ ಕೆಟ್ಟ ಚಟಕ್ಕೆ ಬಿದ್ದ ವಿದ್ಯಾರ್ಥಿಗಳು
ಮುಂದಿನ ಐದು ದಿನಗಳಲ್ಲಿ ಡಿಸೆಂಬರ್ 10ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದೆಂದು ರಾಜ್ಯ ಹವಾಮಾನ ಕೇಂದ್ರದ ವರದಿ ತಿಳಿಸಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇತ್ತ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲೂ ಮಳೆಯಬ್ಬರ ಕಂಡು ಬರಲಿದೆ ಎಂದು ತಜ್ಞರು ತಿಳಿಸಿದ್ದಾರೆ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ