ಉಡುಪಿಯಲ್ಲೂ ಮಂಗನ ಕಾಯಿಲೆ ಭೀತಿ; ಜಿಲ್ಲೆಯಲ್ಲಿ ಹೈ ಅಲರ್ಟ್​ ಘೋಷಣೆ

ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಣಿಪಾಲದಲ್ಲಿ ಹೊರ ಜಿಲ್ಲೆಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿಗೂ ಸೋಂಕು ತಗುಲಿಲ್ಲ ಎಂದು ಹೇಳಿದ್ದಾರೆ.

Latha CG | news18india
Updated:January 11, 2019, 5:57 PM IST
ಉಡುಪಿಯಲ್ಲೂ ಮಂಗನ ಕಾಯಿಲೆ ಭೀತಿ; ಜಿಲ್ಲೆಯಲ್ಲಿ ಹೈ ಅಲರ್ಟ್​ ಘೋಷಣೆ
ಸಾಂದರ್ಭಿಕ ಚಿತ್ರ
Latha CG | news18india
Updated: January 11, 2019, 5:57 PM IST
ಉಡುಪಿ,(ಜ.11): ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಕಾರ್ಕಳಗಳಲ್ಲಿ ಮಂಗನ ಕಾಯಿಲೆಯಿಂದ ಈ ಹಿಂದೆ ಹೆಚ್ಚು ಸಾವು ನೋವು ಸಂಭವಿಸಿವೆ. ಇದು ಭಯಾನಕ ರೋಗವಾಗಿದ್ದು,ಈಗ ಉಡುಪಿಯಲ್ಲೂ ಸಹ ಮಂಗನ ಕಾಯಿಲೆ ಭೀತಿ ಶುರುವಾಗಿದೆ. ಹೀಗಾಗಿ ಉಡುಪಿ ಜಿಲ್ಲೆಯಲ್ಲಿ ಹೈ ಅಲರ್ಟ್​ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಉಡುಪಿ ಆರೋಗ್ಯಾಧಿಕಾರಿ ರೋಹಿಣಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 10 ಮಂಗಗಳು ಸಾವನ್ನಪ್ಪಿವೆ. ಸಾವನ್ನಪ್ಪಿದ ಮಂಗಗಳ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. 5 ಮಂಗಗಳ ಸ್ಯಾಂಪಲ್​ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ ಎಂದರು.

ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮಣಿಪಾಲದಲ್ಲಿ ಹೊರ ಜಿಲ್ಲೆಗಳ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಯಾವುದೇ ವ್ಯಕ್ತಿಗೂ ಸೋಂಕು ತಗುಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಲೆನಾಡಿನಲ್ಲಿ ಮಂಗನ ಕಾಯಿಲೆ ಭೀತಿ: ಶಿವಮೊಗ್ಗದಲ್ಲಿ ಮಹಾಮಾರಿಗೆ ಐವರು ಬಲಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮಂಗನ ಕಾಯಿಲೆಗೆ 5 ಮಂದಿ ತುತ್ತಾಗಿದ್ದರು. ಜಿಲ್ಲೆಯ ಒಟ್ಟು 59 ಜನರು ಶಂಕಿತ ಮಂಗನ ಕಾಯಿಲೆಯಿಂದ ಮಣಿಪಾಲದ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರಲ್ಲಿ 21 ಜನರಿಗೆ ಮಂಗನ ಕಾಯಿಲೆ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ಮುಂದುವರೆಸಿದ್ದಾರೆ. 34 ಮಂದಿಗೆ ಮಂಗನ ಕಾಯಿಲೆ ಇಲ್ಲ ಎಂಬ ವರದಿ ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಕಾರ್ಕಳದಲ್ಲಿಯೂ ಗುರುವಾರ ಮತ್ತೊಂದು ಮಂಗನ ಶವ ಪತ್ತೆಯಾಗಿತ್ತು. ಎರಡು ದಿನಗಳ ಹಿಂದೆ ಕುಂದಾಪುರ ತಾಲೂಕಿನ ಸಿದ್ದಾಪುರ, ಹೊಸಂಗಡಿ ಹಾಗೂ ಶಿರೂರಿನಲ್ಲಿ 4 ಮಂಗಗಳ ಶವ ಪತ್ತೆಯಾಗಿದ್ದವು. ದಿನದಿಂದ ದಿನಕ್ಕೆ ಮಂಗಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
Loading...

First published:January 11, 2019
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...