BJP Core Committee: ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನರ್ ರಚನೆ ಮಾಡಿದ ಹೈ ಕಮಾಂಡ್​

ಈ ಹಿಂದೆ ಕಮಿಟಿಯಲ್ಲಿದ್ದ ಸಚಿವ ಅರವಿಂದ ಲಿಂಬಾವಳಿ, ಶಾಸಕ ಸಿ.ಎಂ. ಉದಾಸಿ ಅವರನ್ನು ಕೈ ಬಿಡಲಾಗಿದೆ

ನಳಿನ್ ಕುಮಾರ್ ಕಟೀಲ್

ನಳಿನ್ ಕುಮಾರ್ ಕಟೀಲ್

  • Share this:
    ಬೆಂಗಳೂರು (ಮಾ. 25):  ರಾಜ್ಯ ಬಿಜೆಪಿ ಕೋರ್​ ಕಮಿಟಿಯನ್ನು ಪುನರ್​ ರಚನೆ ಮಾಡಿ ಹೈ ಕಮಾಂಡ್​ ಆದೇಶ ಹೊರಡಿಸಿದೆ. ಕೋರ್ ಕಮಿಟಿಗೆ ಡಿಸಿಎಂಗಳಾದ ಡಾ. ಅಶ್ವಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವ ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಹೆಸರು ಸೇರ್ಪಡೆ ಮಾಡಲಾಗಿದೆ. ಇನ್ನು ​ಇದೇ ವೇಳೆ ಈ ಹಿಂದೆ ಕಮಿಟಿಯಲ್ಲಿದ್ದ ಸಚಿವ ಅರವಿಂದ ಲಿಂಬಾವಳಿ, ಶಾಸಕ ಸಿ.ಎಂ. ಉದಾಸಿ ಅವರನ್ನು ಕೈ ಬಿಡಲಾಗಿದೆ. ಕೋರ್ ಕಮಿಟಿ ಸದಸ್ಯರಾಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಶೇಷ ಆಹ್ವಾನಿತರಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ

    ನಳಿನ್​ ಕುಮಾರ್​ ನೇತೃತ್ವದ ಕೋರ್‌ ಕಮಿಟಿಯಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಡಿವಿ ಸದಾನಂದ ಗೌಡ ಇದ್ದಾರೆ. ಇನ್ನು ಸಚಿವರಾದ ಜಗದೀಶ್ ಶೆಟ್ಟರ್ , ಕೆ.ಎಸ್ ಈಶ್ವರಪ್ಪ, ಡಿಸಿಎಂಗಳಾದ ಗೋವಿಂದ ಕಾರಜೋಳ , ಸಿ.ಎನ್ ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಆರ್‌. ಅಶೋಕ್ , ಶ್ರೀರಾಮುಲು ಇದ್ದಾರೆ.

    ವಿಶೇಷ ಆಹ್ವಾನಿತರಾಗಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​, ರಾಷ್ಟ್ರೀಯ ಉಪಾಧ್ಯಕ್ಷೆ ಅರುಣಾ, ರಾಷ್ಟ್ರೀ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಇದ್ದಾರೆ.

    ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭೆ ಚುನಾವಣೆಗೂ ಮುನ್ನ ಈ ಬದಲಾವಣೆ ಮಾಡಲಾಗಿದೆ. ಬಿಜೆಪಿ ಉಪ ಚುನಾವಣೆಯಲ್ಲಿ ಗೆಲುವಿನ ತಂತ್ರಗಾರಿಕೆ ಹೆಣೆಯುತ್ತಿದ್ದು, ಕಳೆದ ಉಪಚುನಾವಣೆಗಳ ಜಯವನ್ನು ಮತ್ತೆ ಪಡೆಯುವ ಹವಣಿಕೆಯಲ್ಲಿದೆ.
    Published by:Seema R
    First published: