ನ.1ರಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ; ಭದ್ರತೆ, ರಕ್ಷಣೆ ಒದಗಿಸಲು ಹೈಕೋರ್ಟ್​ ನಿರ್ದೇಶನ

ನ.1ರಂದು ಬೆಳಗಾವಿಯಲ್ಲಿ ಭದ್ರತೆ ರಕ್ಷಣೆ ಒದಗಿಸಲು ಹೈಕೋರ್ಟ್​ ಸರ್ಕಾರ ಹಾಗೂ ಪೊಲೀಸ್​ ಇಲಾಖೆಗೆ ನಿರ್ದೇಶನ ನೀಡಿದೆ.

Latha CG | news18-kannada
Updated:October 30, 2019, 6:48 PM IST
ನ.1ರಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ; ಭದ್ರತೆ, ರಕ್ಷಣೆ ಒದಗಿಸಲು ಹೈಕೋರ್ಟ್​ ನಿರ್ದೇಶನ
ಕರ್ನಾಟಕ ಹೈಕೋರ್ಟ್
  • Share this:
ಬೆಳಗಾವಿ(ಅ.30): ನವೆಂಬರ್​ 1 ಕರ್ನಾಟಕ ಏಕೀಕರಣವಾದ ದಿನ. ಹೀಗಾಗಿ ಅಂದು ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವದಂದೇ ಕರಾಳ ದಿನಾಚರಣೆಯನ್ನು ಸಹ ಆಚರಿಸಲಾಗುತ್ತದೆ. ಮಹಾರಾಷ್ಟ್ರ ಏಕೀಕರಣ ಸಮಿತಿ ಈ ಕರಾಳ ದಿನಾಚರಣೆಯನ್ನು ಆಚರಿಸಲಿದೆ. ಅಂದು ಅಹಿತಕರ ಘಟನೆಗಳು ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಂದು ಭದ್ರತೆ ರಕ್ಷಣೆ ಒದಗಿಸಲು ಹೈಕೋರ್ಟ್​ ಸರ್ಕಾರ ಹಾಗೂ ಪೊಲೀಸ್​ ಇಲಾಖೆಗೆ ನಿರ್ದೇಶನ ನೀಡಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ಅಪರಾಧಗಳ ನಿಯಂತ್ರಣ ಆಯೋಗ ಭದ್ರತೆ ಕೋರಿ ಪಿಐಎಲ್ ಹೈಕೋರ್ಟ್​ನಲ್ಲಿ ಪಿಐಎಲ್​​ ಸಲ್ಲಿಸಿತ್ತು. ನ.1ರಂದು ಬೆಳಗಾವಿಯಲ್ಲಿ ಕರಾಳ ದಿನಾಚರಣೆ ನಡೆಯುತ್ತದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರದು. ಮೆರವಣಿಗೆ ವೇಳೆ ಕನ್ನಡಿಗರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಯುವ ಸಾಧ್ಯತೆ ಇರುತ್ತದೆ. ಹೀಗಾಗಿ ರಾಜ್ಯೋತ್ಸವ ಆಚರಣೆ ವೇಳೆ ಭದ್ರತೆ ಕೊಡಿ ಎಂದು ಭದ್ರತೆ ಕೋರಿ ಪಿಐಎಲ್​ ಸಲ್ಲಿಸಲಾಗಿತ್ತು.

ನಾಳೆ ಸರ್ದಾರ್ ಪಟೇಲ್‌ 144ನೇ ಜನ್ಮದಿನ: ‘ಏಕತಾ ದಿವಸ್‘​​ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ಭಾಗಿ

ಈ ಸಂಬಂಧ ಇಂದು ಹೈ ಕೋರ್ಟ್​ ನ್ಯಾಯಪೀಠ ವಿಚಾರಣೆ ನಡೆಸಿ ಮಧ್ಯಂತರ ಆದೇಶ ಹೊರಡಿಸಿದೆ. ನ.1ರಂದು ಬೆಳಗಾವಿಯಲ್ಲಿ ಭದ್ರತೆ ರಕ್ಷಣೆ ಒದಗಿಸಲು ಹೈಕೋರ್ಟ್​ ಸರ್ಕಾರ ಹಾಗೂ ಪೊಲೀಸ್​ ಇಲಾಖೆಗೆ ನಿರ್ದೇಶನ ನೀಡಿದೆ.

ಮಾರಾಕಾಸ್ತ್ರಗಳೊಂದಿಗೆ ಮೆರವಣಿಗೆಗೆ ಅನುಮತಿ ನೀಡಬಾರದು. ಎಂಇಎಸ್ ಸಮಿತಿಗೆ ಅನುಮತಿ‌ ನೀಡಬಾರದು. ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಅನುಮತಿ ನೀಡದಂತೆ ನಿರ್ದೇಶಿಸಬೇಕು ಎಂದು ಹೈಕೋರ್ಟ್​​ ನಿರ್ದೇಶನ ನೀಡಿದೆ. ಒಂದು ವೇಳೆ ಯಾರಾದರೂ ರಾಜ್ಯೋತ್ಸವ ಆಚರಣೆಗೆ  ಅಡ್ಡಿಪಡಿಸಿದರೆ ಅವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ನ್ಯಾಯಪೀಠದಿಂದ ಮಧ್ಯಂತರ ಆದೇಶ ಹೊರಬಿದ್ದಿದೆ.  ಬಳಿಕ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಲಾಯಿತು.

ಬಿಎಲ್ ಸಂತೋಷ್ ಅಥವಾ ಪ್ರಭಾಕರ್ ಕೋರೆ ಸಿಎಂ ಆದರೆ ಜೆಡಿಎಸ್ ಬೆಂಬಲ: ಜೆಡಿಎಸ್ ಯುವ ಮುಖಂಡ ಶರಣಗೌಡ ಹೇಳಿಕೆ

First published:October 30, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ