HOME » NEWS » State » HIGH COURT DISMISS BS YEDIYURAPPA PETITION ON BELLANDUR DENOTIFICATION CASE SESR

ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಕಾರ; ಸಿಎಂ ಬಿಎಸ್​ವೈಗೆ ಸಂಕಷ್ಟ

ಅರ್ಜಿಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿ ಹೈಕೋರ್ಟ್​​ ಏಕ ಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ

news18-kannada
Updated:December 22, 2020, 4:20 PM IST
ಬೆಳ್ಳಂದೂರು ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಕಾರ; ಸಿಎಂ ಬಿಎಸ್​ವೈಗೆ ಸಂಕಷ್ಟ
ಸಿಎಂ ಬಿಎಸ್ ಯಡಿಯೂರಪ್ಪ.
  • Share this:
ಬೆಂಗಳೂರು (ಡಿ. 22):  ಬೆಳ್ಳಂದೂರು ಭೂ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪಗೆ  ಸಂಕಷ್ಟ ಎದುರಾಗಿದೆ. ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಹೈ ಕೋರ್ಟ್​ ನಿರಾಕರಿಸಿದೆ. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ನೇತೃತ್ವದ  ಪೀಠ ಅರ್ಜಿ ವಜಾಗೊಳಿಸಿದೆ. ಅರ್ಜಿಯೊಂದಿಗೆ ಸಲ್ಲಿಸಿದ್ದ ಪೂರಕ ದಾಖಲೆಗಳು ಸೂಕ್ತವಾಗಿಲ್ಲ ಎಂದು ತಿಳಿಸಿ ಹೈಕೋರ್ಟ್​​ ಏಕ ಸದಸ್ಯ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ‌. ಇದರಿಂದ ಮುಖ್ಯಮಂತ್ರಿಗಳು ಮತ್ತೊಮ್ಮೆ ತೊಂದರೆಗೆ ಸಿಲುಕಿದ್ದಾರೆ.  ಬೆಳ್ಳಂದೂರು ಡಿನೋಟಿಫಿಕೇಷನ್​ ಸಂಬಂಧ 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಈ ಕುರಿತು ಖಾಸಗಿ ದೂರು ದಾಖಲಿಸಿದ್ದರು. ಕೆಐಎಡಿಬಿ ಬೆಳ್ಳಂದೂರಿನಲ್ಲಿ ಭೂಸ್ವಾಧೀನ ಮಾಡಿದೆ ಎಂದು ಅವರು ಆರೋಪಿಸಿದರು. ಈ ಪ್ರಕರಣವನ್ನು ಲೋಕಾಯುಕ್ತ ವಿಶೇಷ ಕೋರ್ಟ್​ ತನಿಖೆಗೆ ಆದೇಶಿಸಿತ್ತು. 2015 ರಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆರ್.ವಿ ದೇಶಪಾಂಡೆ ವಿರುದ್ಧದ ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್ ಕೂಡಾ ಆದೇಶ ಎತ್ತಿಹಿಡಿದಿತ್ತು.

ಏನಿದು ಪ್ರಕರಣ

2007-08ರಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಂದೂರು, ವೈಟ್​ಫೀಲ್ಡ್​ನಲ್ಲಿ 14 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್​ ಮಾಡಿದ್ದಾರೆ ಎಂದು ದೂರು ಸಲ್ಲಿಸಲಾಗಿತ್ತು. ಈ ಪ್ರಕರಣ ರದ್ದು ಕೋರಿ ಬಿಎಸ್​ವೈ ಹೈ ಕೋರ್ಟ್​ ಮೆಟ್ಟಿಲೇರಿದ್ದರು.
Published by: Seema R
First published: December 22, 2020, 4:10 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories