ಬೆಂಗಳೂರು: ಪಂಚಮಸಾಲಿ ಮೀಸಲಾತಿ (Panchamasali Reservation) ಸಂಬಂಧಿಸಿದಂತೆ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ (2C, 2D Reservation) ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ (Karnataka High court) ತೆರವುಗೊಳಿಸಿದೆ. 2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಈಗ ಹೊಸ ಆದೇಶ ಹೊರಡಿಸಲಾಗಿದೆ.
ಕೇಂದ್ರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಲಾಗಿದ್ದು, ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಸೂಚನೆ ನೀಡಿ ಮಧ್ಯಂತರ ಆದೇಶ ತೆರವುಗೊಳಿಸಿದೆ. ಇದರೊಂದಿಗೆ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.
ಡಿ.ಜಿ.ರಾಘವೇಂದ್ರ ಅವರಿಂದ ಪಿಐಎಲ್ ಸಲ್ಲಿಕೆ
ಪಂಚಮಸಾಲಿಗೆ 2A ಮೀಸಲಾತಿ ನೀಡಬಾರದು ಎಂದು ಡಿ.ಜಿ.ರಾಘವೇಂದ್ರ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (Public Interest Litigation) ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.
ಕೇಂದ್ರಕ್ಕೆ ಮೀಸಲಾತಿ ಪ್ರಸ್ತಾವನೇ ಕಳಿಸಿಲ್ಲ
ಇನ್ನು SC, ST ಮೀಸಲಾತಿ ವಿಚಾರದಲ್ಲಿ ಸಿಎಂ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ. ಕೇಂದ್ರ ಸರ್ಕಾರಕ್ಕೆ ಯಾವುದೇ ಮೀಸಲಾತಿ ಪ್ರಸ್ತಾವನೇ ಕಳಿಸಿಲ್ಲ ಅಂತ ಗುಡುಗಿದ್ದಾರೆ.
ನಾಲ್ಕು ಯೋಜನೆಗಳಿಗೆ ಸಿಎಂ ಚಾಲನೆ
ಬೆಂಗಳೂರಿನಲ್ಲಿ ಸಿಎಂ ಬೊಮ್ಮಾಯಿ 4 ಯೋಜನೆಗಳಿಗೆ ಚಾಲನೆ ನೀಡಿದರು. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಣೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಗೆ ಚಾಲನೆ ಕೊಟ್ಟರು.
ಇದನ್ನೂ ಓದಿ: Gift Politics: ಕುಕ್ಕರ್, ಸೀರೆ ಹಂಚಿಕೆ ಆಯ್ತು; ಈಗ ಹೊಸ ತೊಡಕಿಗೆ ಮನೆ ಮನೆಗೂ ಕೋಳಿ ಗಿಫ್ಟ್
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾವು ಯುವಕರಿಗಾಗಿ ಯೋಜನೆ ಜಾರಿಗೆ ತಂದಿದ್ದೇವೆ. ನಮ್ಮದು ಹುಸಿ ಭರವಸೆಯಲ್ಲ ಎಂದು ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ