ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubballi) ಇದೇ ಮೊದಲ ಬಾರಿಗೆ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ (Congress political affairs committee meeting) ನಡೆಯಿತು. ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ (Hotel) ನಿನ್ನೆ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Election) ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿತ್ತು. ಮುಂದಿನ ರಾಜಕೀಯ ನಡೆಯ ಜೊತೆಗೆ ಪ್ರಮುಖ ವಿದ್ಯಮಾನಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಕ್ಲಾಸ್
ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಸತತ 40 ನಿಮಿಷಗಳ ಕಾಲ ಭರ್ಜರಿ ಕ್ಲಾಸ್ ತೆಗೆದುಕೊಂಡರು. ಮುಖಂಡರಿಗೆ ಪಕ್ಷ ಸಂಘಟನೆ, ಚುನಾವಣೆ ರಣತಂತ್ರದ ಬಗ್ಗೆ ಪಾಠ ಹೇಳಿದರು. ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಹಲವು ವಿಷಯಗಳು ಚರ್ಚೆಗೆ ಬಂದವು. ಮುಂಬರುವ ವಿಧಾನಸಭೆ ಚುನಾವಣೆಯೇ ಸಭೆಯ ಪ್ರಮುಖ ಟಾರ್ಗೆಟ್ ಆಗಿತ್ತು. ಸಭೆಯಲ್ಲಿ ನಾಯಕರಿಗೆ ಒಗ್ಗಟ್ಟಿನ ಮಂತ್ರ ಜಪಿಸುವಂತೆ ಸಲಹೆ ನೀಡಲಾಯಿತು. ಚುನಾವಣೆ ಹೊಸ್ತಿಲಲ್ಲೇ ಆಡಳಿತಾರೂಢ ಸರ್ಕಾರದ ವೈಫಲ್ಯ ಎತ್ತಿಹಿಡಿದು, ಇಕ್ಕಟ್ಟಿಗೆ ಸಿಲುಕಿಸುವಂತೆ ರಾಹುಲ್ ಗಾಂಧಿ ರಾಜ್ಯ ನಾಯಕರಿಗೆ ಸಲಹೆ ನೀಡಿದರು.
ನಾಯಕತ್ವದ ಬಗ್ಗೆ ಗಪ್ ಚುಪ್ ಆಗಿರಲು ಸೂಚನೆ
ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಸಭೆ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ನಾಯಕತ್ವದ ಕಿತ್ತಾಟ ಬದಿಗೊತ್ತಿ ಸಂಘಟಿತ ಹೋರಾಟಕ್ಕೆ ಸಭೆಯಲ್ಲಿ ತೀರ್ಮಾನಿಸಿರೋದಾಗಿ ತಿಳಿಸಿದ್ದಾರೆ. ಇನ್ನು ಮುಂದೆ ಯಾರೂ ಸಹ ನಾಯಕತ್ವದ ಬಗ್ಗೆ ಮಾತನಾಡುವಂತಿಲ್ಲ. ಗಪ್ ಚುಪ್ ಆಗಿ ಕೆಲಸ ಮಾಡಬೇಕು. ಎಲ್ಲರೂ ಒಗ್ಗಟ್ಟಿನ ಮಂತ್ರ ಜಪಿಸಬೇಕು. ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯೋ ಕೆಲಸ ಮಾಡಬೇಕು. ಯಾರೇ ನಾಯಕರು ನಾಯಕತ್ವದ ಬಗ್ಗೆ ಮಾತನಾಡಿದರೂ ಅವರ ಮೇಲೆ ಶಿಸ್ತು ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.
ಇದನ್ನೂ ಓದಿ: SDPI, PFI ಬಿಜೆಪಿ ಸಾಕಿದ ಕೂಸುಗಳು; ಸಿದ್ದರಾಮಯ್ಯ ಆರೋಪ
ಸರ್ಕಾರ ರಚನೆಗೆ ಸಿದ್ಧತೆ ಮಾಡಿಕೊಳ್ಳಿ ಎಂದ ಜನ
ಗೊತ್ತೋ.. ಗೊತ್ತಿಲ್ಲದೆಯೋ ಕೆಲ ನಾಯಕರು ಈ ಬಗ್ಗೆ ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಇನ್ನು ಮುಂದೆ ಹಾಗೆ ಆಗದಂತೆ ನಾಯಕರು ಎಚ್ಚರ ವಹಿಸಿಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಭ್ರಷ್ಟಾಚಾರದ ಕಾರಣದಿಂದ ಬಿಜೆಪಿ ಜನರಿಂದ ಬೇಸತ್ತಿದೆ. ಬಿಜೆಪಿಯಿಂದ ರೋಸಿ ಹೋಗಿರೋ ಜನ ಕಾಂಗ್ರಸ್ ಪಕ್ಷವನ್ನು ಅಧಿಕಾರಕ್ಕೆ ತರೋಕೆ ಮಂದಾಗಿದ್ದಾರೆ. ಹೀಗಾಗಿ ಸರ್ಕಾರ ರಚನೆಗೆ ಏನು ಮಾಡಬೇಕೋ ಅದರ ಸಿದ್ಧತೆ ಮಾಡಿಕೊಳ್ಳಬೇಕು. ಸಂಪೂರ್ಣ ಮೆಜಾರಿಟಿ ಪಡೆಯುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ಮಾಡಬೇಕು ಅಂತ ಹೇಳಿದ್ದಾರೆ.
ತುಟಿ ಬಿಚ್ಚದಂತೆ ತಾಕೀತು
ಚುನಾವಣೆವರೆಗೂ ಯಾರೂ ನಾಯಕತ್ವದ ಬಗ್ಗೆ ತುಟಿ ಬಿಚ್ಚುವಂತಿಲ್ಲ. ಪೂರ್ತಿ ಮೆಜಾರಿಟಿ ಬಂದ ನಂತರ ಮುಂದಿನ ಸಿಎಂ ಯಾರು ಅಂತ ಅಂತಿಮಗೊಳಿಸಲಾಗುತ್ತೆ. ಅಲ್ಲಿಯವರೆಗೂ ಮುಂದಿನ ಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನ ಮಾಡಬೇಕು. ಒಕ್ಕೊರಲಿನಿಂದ ಹೋರಾಡಿದ್ರೆ ಮಾತ್ರ ಅಧಿಕಾರಕ್ಕೆ ಬರೋಕೆ ಸಾಧ್ಯ ಅಂತ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.
ಟಿಕೆಟ್ ಈಗಲೇ ಫೈನಲ್ ಮಾಡೋದಿಲ್ಲ
ರಾಜ್ಯ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವುದಾಗಿ ತಿಳಿಸಿರುವ ವೇಣುಗೋಪಾಲ್, ಸಭೆಯಲ್ಲಿ ಪಕ್ಷದ ಸಂಘಟನೆ ಇತ್ಯಾದಿಗಳ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಟಿಕೆಟ್ ಈಗಲೇ ಫೈನಲ್ ಮಾಡಲ್ಲ. ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಯಾರು ಅಂತ ಮುಂದೆ ತೀರ್ಮಾನ ಮಾಡಲಾಗಿತ್ತು. ಸದ್ಯಕ್ಕೆ ಏನಿದ್ದರೂ ಬಿಜೆಪಿ ವಿರುದ್ಧ ಸಂಘಟಿತ ಹೋರಾಟ ಮಾಡಲು ತೀರ್ಮಾನಿಸಲಾಗಿದೆ. ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರೋಕೆ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಅಂತ ಹೇಳಿದ್ರು.
ಇದನ್ನೂ ಓದಿ: HDK Warning: 'ಇನ್ನೆಷ್ಟು ಹೆಣ ಬೀಳಿಸಲು ರಾಜ್ಯಕ್ಕೆ ಬರ್ತಿದ್ದಾರೆ ಅಮಿತ್ ಶಾ?'
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ
ಖಂಡಿತಾ ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬಂದೇ ಬರ್ತೇವೆ ಎಂದು ಸಭೆಯ ಬಳಿಕ ಕೆ ಸಿ ವೇಣುಗೋಪಾಲ್ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಕೇಂದ್ರದ ಮಾಜಿ ಸಚಿವೆ ಮಾರ್ಗರೇಟ್ ಆಳ್ವಾ, ಸೇರಿದಂತೆ ಹಲವರು ಭಾಗಿಯಾಗಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ