Hijab Verdict: ಹೈಕೋರ್ಟ್ ತೀರ್ಪು ಗೌರವಿಸುವಂತೆ BSY ಮನವಿ, ನಮಗೆ ಕಪಾಳಮೋಕ್ಷ ಆಗಿದೆ ಎನ್ನಲಾಗಲ್ಲ ಎಂದ್ರು ಸಿದ್ದು

ಹಿಜಾಬ್​ನನ್ನು ಈ ಹಿಂದೆಯೂ ಧರಿಸಿದ್ದರು, ಈಗಲೂ ಧರಿಸುತ್ತಿದ್ದಾರೆ. ಹಿಜಾಬ್ ಧರಿಸಲಿ ಬಿಡಿ ಎಂದು ನಾವು ಹೇಳಿದ್ದೆವು. ಈಗ ಕೋರ್ಟ್ ಆದೇಶ ನೀಡಿದೆ, ಅದನ್ನ ಪಾಲಿಸಬೇಕು ಎಂದ್ರು ಸಿದ್ದರಾಮಯ್ಯ

ಸಿದ್ದರಾಮಯ್ಯ-ಯಡಿಯೂರಪ್ಪ

ಸಿದ್ದರಾಮಯ್ಯ-ಯಡಿಯೂರಪ್ಪ

  • Share this:
ಬೆಂಗಳೂರು (ಮಾ.15): ಹಿಜಾಬ್ ಪ್ರಕರಣದ (Hijab Case) ತೀರ್ಪು ರಾಜ್ಯದಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಇದೀಗ ಸರ್ಕಾರದ ಆದೇಶವನ್ನು ಹೈಕೋರ್ಟ್​ (High Court) ಎತ್ತಿಹಿಡಿದಿದೆ. ಈ ಬಗ್ಗೆ ಪರ-ವಿರೋಧ ಹೇಳಿಕೆಗಳು ಸಹ ವ್ಯಕ್ತವಾಗ್ತಿದೆ. ರಾಜ್ಯದ ರಾಜಕೀಯ ನಾಯಕರು, ಧಾರ್ಮಿಕ ಮುಖಂಡರು ಸಹ ಪ್ರತಿಕ್ರಿಯೆ ನೀಡಿದ್ದಾರೆ.  ಹೈಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಬೇಕೆಂದು ಮನವಿ ಮಾಡುತ್ತೇನೆ. ಮತ್ತೆ ವಿವಾದ ಮಾಡುವುದಕ್ಕೆ ಹೋಗಬಾರದು ಎಂದು ರಾಜ್ಯದ ಜನತೆಯಲ್ಲಿ ಬಿ.ಎಸ್. ಯಡಿಯೂರಪ್ಪ (B.S Yediyurappa) ಮನವಿ ಮಾಡಿಕೊಂಡ್ರು. ಕೋರ್ಟ್ ತೀರ್ಪಿನ ಪ್ರತಿ ನೀಡಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಹಿಜಾಬ್‌ನಿಂದ ಯಾರಿಗೂ ತೊಂದರೆಯಾಗಲ್ಲ ಎಂದಿದ್ದೆವು. ಈ ಹಿಂದೆಯೂ ಧರಿಸಿದ್ದರು, ಈಗಲೂ ಧರಿಸುತ್ತಿದ್ದಾರೆ. ಹಿಜಾಬ್ ಧರಿಸಲಿ ಬಿಡಿ ಎಂದು ನಾವು ಹೇಳಿದ್ದೆವು. ಈಗ ಕೋರ್ಟ್ ಆದೇಶ ನೀಡಿದೆ, ಅದನ್ನ ಪಾಲಿಸಬೇಕು. ಇದರಿಂದಾಗಿ ನಮಗೆ ಕಪಾಳಮೋಕ್ಷ ಆಗಿದೆ ಎನ್ನಲಾಗಲ್ಲ ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿಕೆ ನೀಡಿದ್ದಾರೆ.

‘ನಾವೆಲ್ಲಾ ಭಾರತಮಾತೆ ಮಕ್ಕಳು’

ಹೈಕೋರ್ಟ್ ಐತಿಹಾಸಿಕ ತೀರ್ಪನ್ನು ನೀಡಿದೆ. ಸರ್ಕಾರ ರೂಪಿಸಿದ ನಿಯಮದ ಪರವಾಗಿ ತೀರ್ಪು ಬಂದಿದೆ. ಹೆಣ್ಣುಮಕ್ಕಳ ಶಿಕ್ಷಣದ ಹಕ್ಕನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಧರ್ಮ ಮತಾಂಧತೆ ಬೆಳೆಸಿಕೊಳ್ಳದೇ ಶಾಲೆಗಳಲ್ಲಿ ಸಹೋದರ, ಸಹೋದರಿಯರಂತೆ ಸಂಸ್ಕಾರದಿಂದ ಇರಬೇಕು. ನಾವೆಲ್ಲ ಭಾರತಮಾತೆ ಮಕ್ಕಳು ಎಂದು ಇರಬೇಕು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

‘ಇನ್ಮೇಲಾದ್ರೂ ಹಿಜಾಬ್​ ಬಿಡಿ’

ಇಡೀ ವಿಶ್ವಕ್ಕೆ ಮಾದರಿಯಾಗುವ ತೀರ್ಪು ಇದಾಗಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಗೊಂದಲ ಸೃಷ್ಟಿಸಬಾರದು. ಗೊಂದಲ ಸೃಷ್ಟಿಸಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೈಕೋರ್ಟ್ ತೀರ್ಪು ಸ್ವಾಗತಿಸಿ ಸಚಿವ ಡಾ. ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ. ಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಲೇಬೇಕು. ಎಲ್ಲ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳಿಸಲು ಕ್ರಮಕೈಗೊಳ್ಳಬೇಕು. ಗೊಂದಲ ಬಿಟ್ಟು ವಿದ್ಯಾರ್ಥಿಗಳು ಶಾಲಾಕಾಲೇಜಿಗೆ ಬರುವಂತೆ ಕರೆ ನೀಡುತ್ತೇವೆ ಎಂದು ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

‘ಇಡೀ ವಿಶ್ವಕ್ಕೆ ಮಾದರಿಯಾಗುವ ತೀರ್ಪು’

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈ ಕೋರ್ಟ್ ನೀಡಿರುವ ತೀರ್ಪು ವಿಶ್ವಕ್ಕೆ ಮಾದರಿಯಾಗುವ ತೀರ್ಪು ಎಂದು ಅಶ್ವತ್ಥ್​ ನಾರಾಯಣ್​ ಹೇಳಿದ್ದಾರೆ. ಕೋರ್ಟ್ ತೀರ್ಪನ್ನು ಸ್ವಾಗತ ಮಾಡುತ್ತೇವೆ. ಸರ್ಕಾರದ ನಿಲುವನ್ನೇ ಮತ್ತೊಮ್ಮೆ ಕೋರ್ಟ್ ಹೇಳಿದೆ. ಯಾವುದೇ ತಾರತಮ್ಯವಿಲ್ಲದ ತೀರ್ಪು ಇದಾಗಿದೆ. ಕೆಲ ಸಂಘಟನೆಗಳು ಹಾಗೂಪಕ್ಷಗಳು ಬೇರೆ ಬೇರೆ ಬಣ್ಣಗಳು ಕಟ್ಟುವ ಪ್ರಯತ್ನಗಳನ್ನು ನಡೆಸಿತ್ತು. ಆದರೆ ಕೋರ್ಟ್ ತೀರ್ಪಿನಿಂದಾಗಿ ಇದು ಎಲ್ಲರಿಗೂ ಸಮಾನ ಎಂದು ಹೇಳಿದೆ ಎಂದರು‌.

ಇದನ್ನೂ ಓದಿ: Hijab Row: ಹಿಜಾಬ್​ ಮುಖ್ಯ; ಪರೀಕ್ಷೆ, ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

‘ನನ್ನ ಪ್ರಮುಖ ಕಾಳಜಿ ಶಿಕ್ಷಣ, ಕಾನೂನು’

ಮತ್ತೊಂದೆಡೆ ಹಿಜಬ್ ಕುರಿತಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಟ್ವೀಟ್ ಮಾಡಿದ ಡಿ.ಕೆ ಶಿವಕುಮಾರ್​, ಹಿಜಬ್ ವಿವಾದದಲ್ಲಿ ನನ್ನ ಪ್ರಮುಖ ಕಾಳಜಿ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆಯಾಗಿದೆ. ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಶಿಕ್ಷಣ, ಕಾನೂನು ಮತ್ತು ಸುವ್ಯವಸ್ಥೆ, ಕೋಮು ಸೌಹಾರ್ದತೆಯ ಜವಾಬ್ದಾರಿ ಇನ್ನೂ ಕರ್ನಾಟಕ ಸರ್ಕಾರದ ಮೇಲಿದೆ ಎಂದಿದ್ದಾರೆ.

ನಾನು ಕರ್ನಾಟಕ ಸರ್ಕಾರಕ್ಕೆ ಪ್ರಬುದ್ಧ ನಾಯಕತ್ವವನ್ನು ಪ್ರದರ್ಶಿಸಲು ಮತ್ತು ಖಚಿತಪಡಿಸಿಕೊಳ್ಳಲು ಮನವಿ ಮಾಡುತ್ತೇನೆ. ಶಾಲೆಗಳು ಮತ್ತು ಕಾಲೇಜುಗಳ ಸುತ್ತಮುತ್ತ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿರ್ವಹಿಸಬೇಕಾಗುತ್ತದೆ. ಧರ್ಮ ಮತ್ತು ಲಿಂಗದ ಲೆಕ್ಕದ ಮೇಲೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಡ್ಡಿಯಾಗುವುದಿಲ್ಲ. ಕೋಮು ಸೌಹಾರ್ದತೆ ಇದೆ. ಎಂದು ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ಮಕ್ಕಳು ಶಿಕ್ಷಣದ ಕಡೆ ಗಮನ ಕೊಡಿ

ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ  ಸಚಿವ ಸುಧಾಕರ್​ ಅವರು, ಮಕ್ಕಳು ಶಾಲೆಗಳಲ್ಲಿ ಶಿಕ್ಷಣದ ಕಡೆ ಗಮನ ನೀಡಬೇಕು. ಶಿಕ್ಷಣದಿಂದ ಆರೋಗ್ಯಯುತ ಸಮಾಜದ ನಿರ್ಮಾಣ ಸಾಧ್ಯ. ದೇಶದ ಅಭಿವೃದ್ಧಿಯಲ್ಲೂ ಶಿಕ್ಷಣದ ಪಾತ್ರ ಬಹಳ ದೊಡ್ಡದಿದೆ. ಶಾಲೆಗಳು ದೇಗುಲಗಳಿಗೆ ಸಮಾನ. ಇಲ್ಲಿ ಜಾತಿ, ಮತ ಮತ್ತು ಧರ್ಮದ ಭೇದವಿಲ್ಲ. ಸಮವಸ್ತ್ರ ಅನ್ನುವುದು ಏಕತೆ ಮತ್ತು ಸಮಾನತೆಯನ್ನು ಬಿಂಬಿಸಲು ಇರುವ ಸಣ್ಣ ಮಾರ್ಗ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದರ ಜೊತೆಗೆ ಕಲಿಕೆ ಬಗ್ಗೆ ಗಮನಕೊಡಬೇಕು. ವೈಜ್ಞಾನಿಕ ದೃಷ್ಟಿಕೋನ ಇಟ್ಟುಕೊಂಡು ಮಕ್ಕಳು ಶಾಲೆಯಲ್ಲಿ ಅನ್ಯೋನ್ಯ ಭಾವನೆಯಿಂದ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.

ಇದನ್ನೂ ಓದಿ: Hijab Row: ನಾವು ಸುಪ್ರೀಂಕೋರ್ಟಿಗೆ ಹೋಗುತ್ತೇವೆ: CM Ibrahim ಹೇಳಿಕೆ

‘ಹೈಕೋರ್ಟ್ ತೀರ್ಪನ್ನು ಎಲ್ಲರೂ ಸ್ವಾಗತಿಸಿ’

ಹಾಸನದಲ್ಲಿ ಮಾತಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವತ್ತು ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ಉತ್ತಮ ನಿರ್ಧಾರವನ್ನು ಪ್ರಕಟಿಸಿದೆ. ಹೈಕೋರ್ಟ್ ತೀರ್ಪನ್ನು ಎಲ್ಲರೂ ಸ್ವಾಗತ ಮಾಡುತ್ತೇವೆ. ಹಿಜಾಬ್ ವಿಚಾರ ಬಳಸಿಕೊಂಡು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ವಾತಾವರಣ ಹಾಳು ಮಾಡುವ ಪ್ರಯತ್ನ ನಡೆಯುತ್ತಿತ್ತು. ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಬೇಕೆಂಬ ಹುನ್ನಾರ ಕೆಲವು ದುಷ್ಟ ಶಕ್ತಿಗಳಿಂದ ಇತ್ತುಇವರೆಲ್ಲರಿಗೂ ಚಾಟಿ ಬೀಸುವ ರೀತಿ ಹೈಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದೆ
Published by:Pavana HS
First published: