Hijab ಪರವಾಗಿ ಪ್ರತಿಭಟನೆ ನಡೆಸಿದ್ದ 58 ವಿದ್ಯಾರ್ಥಿನಿಯರು ಕಾಲೇಜಿನಿಂದ ಅಮಾನತು

ಈ ಎಲ್ಲ ಬೆಳವಣಿಗೆಗಳ ನಡುವೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ (Shiralakoppa, Shivamogga) ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಶಾಲಾ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ರಾಜ್ಯದಲ್ಲಿ ಹಿಜಾಬ್ (Hijab Row) ಸಂಘರ್ಷ ದಿನದಿಂದ ದಿನಕ್ಕೆ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಕರ್ನಾಟಕ ಹೈಕೋರ್ಟ್ (Karnataka High court) ಮಧ್ಯಂತರ ಆದೇಶದ ನಡುವೆಯೂ ವಿದ್ಯಾರ್ಥಿನಿ(Students)ಯರು ಬುರ್ಕಾ  (Burqa) ಮತ್ತು ಹಿಜಾಬ್ (Hijab) ಧರಿಸಿ ಶಾಲೆ, ಕಾಲೇಜುಗಳಿಗೆ ಬರುತ್ತಿದ್ದಾರೆ. ಆದ್ರೆ ಹೈಕೋರ್ಟ್ ಆದೇಶದ ಹಿನ್ನೆಲೆ ಸಿಬ್ಬಂದಿಗೆ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸುತ್ತಿದ್ದಾರೆ. ಕಳೆದ ಒಂದು ವಾರದಿಂದ ರಾಜ್ಯದ ಶಾಲಾ ಕಾಲೇಜುಗಳ ಮುಂದೆ ವಿದ್ಯಾರ್ಥಿನಿಯರು ಪ್ರತಿಭಟನೆ, ಶಿಕ್ಷಕರ ಜೊತೆ ವಾಗ್ವಾದ ನಡೆಸುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪ (Shiralakoppa, Shivamogga) ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದ 58 ವಿದ್ಯಾರ್ಥಿಗಳನ್ನು ಅಮಾನತು ಮಾಡಿ ಶಾಲಾ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಶಿರಾಳಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಅಮಾನತು ಮಾಡಿ ಆದೇಶ ಪ್ರಕಟಿಸಿದೆ. ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವ ಶಾಲಾ ಆಡಳಿತ ಮಂಡಳಿಯ ನಿರ್ಧಾರದ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದೀಗ ವಿದ್ಯಾರ್ಥಿನಿಯರ ಅಮಾನತು ಕುರಿತು ಶಿಕಾರಿಪುರ ತಹಶೀಲ್ದಾರ ಕವಿರಾಜ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:  Congress ನಾಯಕರ ಅಹೋರಾತ್ರಿ ಧರಣಿ: ಇಂದು ಮಹತ್ವದ ಸುದ್ದಿಗೋಷ್ಠಿ

ತಹಶೀಲ್ದಾರ್ ಹೇಳಿಕೆ

ವಿದ್ಯಾರ್ಥಿಗಳಿಗೆ ತಿಳಿ ಹೇಳಲು ಸಾಕಷ್ಟು ಪ್ರಯತ್ನ ಮಾಡಲಾಗಿತ್ತು. ಆದರೆ ಯಾರ ಮಾತಿಗೂ ಬೆಲೆಕೊಡದೇ ಹಿಜಬ್ ಧರಿಸಿಯೇ ಬರುತ್ತೇವೆ ಎಂದು ಕಾಲೇಜಿಗೆ ಬಂದಿದ್ದರು. ಇಷ್ಟೇ ಅಲ್ಲದೇ ಬ್ಯಾನರ್ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಹಾಗಾಗಿ ಪ್ರಿನ್ಸಿಪಾಲ್ ಈ ರೀತಿ ಕ್ರಮ ಕೈಗೊಂಡಿದ್ದಾರೆ. ವಿದ್ಯಾರ್ಥಿಗಳಲ್ಲಿ ಸ್ವಲ್ಪ ಭಯ ಬರಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಕವಿರಾಜ್ ಹೇಳಿದ್ದಾರೆ,

9 ಜನರ ವಿರುದ್ಧ ಎಫ್ಐಆರ್ ದಾಖಲು

ಸೆಕ್ಷನ್ 144 ನಿಷೇಧಾಜ್ಞೆ ನಿಯಮ ಉಲ್ಲಂಘಿಸಿದವರ ವಿರುದ್ಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇಬ್ಬರು ಪುರಸಭೆ ಸದಸ್ಯರು ಸೇರಿದಂತೆ 9 ಜನರ ವಿರುದ್ಧ ಕೇಸ್ ದಾಖಲಾಗಿದೆ. ಆದ್ರೆ ಇವರು ವಿದ್ಯಾರ್ಥಿಗಳ ಪೋಷಕರಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣ ದಾಖಲಾಗಿರುವ 9 ಜನರು ಕರ್ನಾಟಕ ಪಬ್ಲಿಕ್ ಸ್ಕೂಲ್ ಬಳಿಯ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಶುಕ್ರವಾರ ಎಫ್ಐಆರ್ ದಾಖಲಾಗಿದೆ.

ತುಮಕೂರಿನಲ್ಲಿ ಅತಿಥಿ ಉಪನ್ಯಾಸಕಿ ರಾಜೀನಾಮೆ

ತುಮಕೂರಿ(Tumkuru)ನ ಜೈನ ಪಿಯು ಕಾಲೇಜಿನ ಅತಿಥಿ ಉಪನ್ಯಾಸಕಿ (Guest Lecturer) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಸ್ಪಷ್ಟನೆ ನೀಡಿ ವಿಡಿಯೋ ಹೇಳಿಕೆಯನ್ನು ಸಹ ಬಿಡುಗಡೆ ಮಾಡಿದ್ದಾರೆ. ಚಾಂದನಿ ನಾಜ್ ರಾಜೀನಾಮೆ ನೀಡಿದ ಅತಿಥಿ ಉಪನ್ಯಾಸಕಿ. ಚಾಂದನಿ ಅವರು ಜೈನ ಪಿಯು ಕಾಲೇಜ್ (Jain PU College) ಮತ್ತು ವಿದ್ಯಾ ವಾಹಿನಿ ಕಾಲೇಜು (Vidya Vahini College) ಸೇರಿದಂತೆ ನಗರದ ಖಾಸಗಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಇದನ್ನೂ ಓದಿ:  Hijab High Court Hearing: ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆಯಲ್ಲ: ಹೈಕೋರ್ಟ್​ನಲ್ಲಿ ಎಜಿ ವಾದ

ಕಳೆದ ಮೂರು ವರ್ಷದಿಂದ ಹಿಜಾಬ್ ಧರಿಸಿಯೇ ವಿದ್ಯಾರ್ಥಿಗಳಿಗೆ (Students) ಪಾಠ ಮಾಡಿದ್ದೇನೆ. ಗುರುವಾರ ನನ್ನನ್ನು ಕರೆದ ಪ್ರಾಂಶುಪಾಲರು ಯಾವುದೇ ಧಾರ್ಮಿಕ ಉಡುಪು ಧರಿಸದಂತೆ ಹೇಳಿದ್ದಾರೆ. ಈ ಮೂರು ವರ್ಷಗಳಲ್ಲಿ ನನಗೆ ಯಾವುದೇ ತೊಂದರೆ ಆಗಿಲ್ಲ. ಇದೀಗ ನನ್ನ ಆತ್ಮಗೌರವಕ್ಕೆ ಧಕ್ಕೆ ಆಗಿದ್ದರಿಂದ ನನ್ನ ಅತಿಥಿ ಉಪನ್ಯಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡಿರೋದಾಗಿ ಹೇಳಿದ್ದಾರೆ.ಚಾಂದಿನಿ ನಾಜ್ ವಿಡಿಯೋ ಹೇಳಿಕೆಯಲ್ಲಿ ಏನಿದೆ?

ಕಳೆದ ಮೂರು ವರ್ಷಗಳಿಂದ ನಾನು ಜೈನ್ ಕಾಲೇಜಿನಲ್ಲಿ ವೃತ್ತಿ ನಿರ್ವಹಿಸುತ್ತಿದ್ದೆ. ಅಲ್ಲಿಂದ ಇಲ್ಲಿವರೆಗೂ ಏನೂ ತೊಂದರೆ ಆಗಿರಲಿಲ್ಲ. ಆದರೆ ನಿನ್ನೆ ಪ್ರಾಂಶುಪಾಲರು ಕರೆದು ಹಿಜಾಬ್ ಸೇರಿದಂತೆ ಯಾವುದೇ ಧಾರ್ಮಿಕ ಸಂಕೇತದ ಬಟ್ಟೆ ಧರಿಸಿ ಪಾಠ ಮಾಡಬಾರದು ಎಂದು ಆದೇಶ ಬಂದಿದೆ ಎಂದು ಹೇಳಿದ್ದರು.ಆದರೆ ನಾನು ಮೂರು ವರ್ಷದಿಂದ ಹಿಜಾಬ್ ಧರಿಸಿಯೇ ಪಾಠ ಮಾಡ್ತಾ ಇದ್ದೆ. ಈ ಬೆಳವಣಿಗೆಯಿಂದಾಗಿ ನನ್ನ  ಆತ್ಮಗೌರಕ್ಕೆ ಧಕ್ಕೆ ಉಂಟಾಯಿತು. ಈ ಎಲ್ಲ ಬೆಳವಣಿಗೆಯಿಂದ ನಿನ್ನೆ ದಿನ ನನ್ನ ಕೆಲಸಕ್ಕೆ ರಾಜಿನಾಮೆ ಕೊಟ್ಟಿದ್ದೇನೆ ಎಂದು ಚಾಂದಿನಿ ನಾಜ್ ಹೇಳಿದ್ದಾರೆ.
Published by:Mahmadrafik K
First published: