Hijab Controversy: ಹಿಜಾಬ್‌ಗೆ ಸಿಗುತ್ತಾ ಸುಪ್ರೀಂ ಸಿಗ್ನಲ್? ನಾಳೆ ಮಹತ್ವದ ವಿಚಾರಣೆ

ಹಿಜಾಬ್ ಪ್ರಕರಣದ ವಿಚಾರಣೆ ನಡೆಸುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಈವರೆಗೂ ದಿನಾಂಕ ನಿಗದಿ ಮಾಡಿರಲಿಲ್ಲ. ಇದೀಗ ನಾಳೆ ನ್ಯಾಯಪೀಠ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ: ಬರೀ ರಾಜ್ಯ, ರಾಷ್ಟ್ರದಲ್ಲಷ್ಟೇ (National) ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲೂ (International Level) ಸದ್ದು, ಸುದ್ದಿ ಮಾಡಿದ್ದ ಕರ್ನಾಟಕದ (Karnataka) ಹಿಜಾಬ್ ವಿವಾದಕ್ಕೆ (Hijab Row) ನಾಳೆ ಮತ್ತೊಂದು ಟ್ವಿಸ್ಟ್ ಸಿಗಲಿದೆಯಾ? ಯಾಕೆಂದರೆ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಹಿಜಾಬ್‌ ಅರ್ಜಿ ವಿಚಾರಣೆ ನಡೆಯಲಿದೆ. ಕರ್ನಾಟಕ ಸರ್ಕಾರದ (Government) ಆದೇಶವನ್ನು ಕರ್ನಾಟಕ ಹೈಕೋರ್ಟ್‌ (High Court) ಎತ್ತಿ ಹಿಡಿದಿತ್ತು. ಬಳಿಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ (appeal) ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಜಸ್ಟೀಸ್ ಹೇಮಂತ್ ಗುಪ್ತಾ (Justice Hemanth Gupta) ಹಾಗೂ ಜಸ್ಟೀಸ್ ಸುಧಾಂಶು ಧುಲಿಯಾ (Justice Sudhanshu Dhulia) ಅವರನ್ನು ಒಳಗೊಂಡ ಪೀಠ ನಾಳೆ ಈ ಅರ್ಜಿ ವಿಚಾರಣೆ ಆರಂಭಿಸಲಿದೆ.

ಕುಂದಾಪುರದ ಕಾಲೇಜ್‌ನಲ್ಲಿ ಶುರುವಾಗಿದ್ದ ಹಿಜಾಬ್ ವಿವಾದ

2022ರ ಫೆಬ್ರವರಿಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಸರ್ಕಾರಿ ಕಾಲೇಜ್‌ ಒಂದರಲ್ಲಿ ಹಿಜಾಬ್ ಕುರಿತ ವಿವಾದ ಶುರುವಾಗಿತ್ತು. ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಯರು ಹಿಜಾಬ್‌ ಧರಿಸಿ ತರಗತಿ ಪ್ರವೇಶಕ್ಕೆ ನಿರಾಕರಿಸಲಾಗಿತ್ತು. ಇದರ ವಿರುದ್ಧ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಪೋಷಕರು ಕೂಡ ವಿದ್ಯಾರ್ಥಿನಿಯರಿಗೆ ಸಾಥ್‌ ಕೊಟ್ಟಿದ್ದರು. ಇನ್ನು ಕೆಲವು ಸಂಘಟನೆಯ ಮುಖಂಡರು ಪ್ರತಿಭಟನಾನಿರತ ವಿದ್ಯಾರ್ಥಿನಿಯರಿಗೆ ಊಟ ತಂದು ಕೊಟ್ಟಿದ್ದಾರೆ ಅನ್ನೋ ಆರೋಪವೂ ಕೇಳಿಬಂದಿತ್ತು.

ಹಿಜಾಬ್ ವಿರುದ್ಧ ಹಿಂದೂ ವಿದ್ಯಾರ್ಥಿಗಳಿಂದ ಕೇಸರಿ ಸಾಲು

ಬಳಿಕ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಬ್‌ ಧರಿಸಿ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕಾಲೇಜಿನ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ತೊಟ್ಟು ಬಂದಿದ್ರು. ಈ ವೇಳೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸಮವಸ್ತ್ರ ಕಡ್ಡಾಯವಾಗಿ ಜಾರಿಯಾಗುವವರೆಗೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿಯೇ ತರಗತಿಗೆ ಹಾಜರಾಗುತ್ತಾರೆ ಎಂದು ಪಟ್ಟು ಹಿಡಿದಿದ್ದರು.

ಇದನ್ನೂ ಓದಿ: Evening Digest: 9 ಸೆಕೆಂಡ್‌ಗಳಲ್ಲಿ ಟ್ವಿನ್ ಟವರ್ಸ್ ನೆಲಸಮ, Ind-Pak ಮ್ಯಾಚ್‌ಗೆ ಕ್ಷಣಗಣನೆ! ಸೂಪರ್ ಸಂಡೇಯ ಸಂಜೆ ಸುದ್ದಿ ಇಲ್ಲಿದೆ

ಹಿಜಾಬ್ ಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರು

ಇನ್ನು ಹಿಜಾಬ್ ಪರ ವಿರೋಧ ಚರ್ಚೆ ಶುರುವಾಗಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಬಳಿಕ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಮತ್ತು ತನ್ನ ಧಾರ್ಮಿಕ ಆಚರಣೆ ಪಾಲಿಸುವ ವಿಚಾರದಲ್ಲಿ ಮಧ್ಯಪ್ರವೇಶಿಸದಂತೆ ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಗೆ ನಿರ್ದೇಶಿಸಬೇಕು ಎಂದು ಕೋರಿ ವಿದ್ಯಾರ್ಥಿನಿಯರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್

ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿದ್ದಕ್ಕಾಗಿ ಮುಸ್ಲಿಮ್ ವಿದ್ಯಾರ್ಥಿನಿಯರ ಗುಂಪು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ಮಾರ್ಚ್ 15 ರಂದು ತೀರ್ಪು ನೀಡಿತ್ತು. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ಹೈಕೋರ್ಟ್ ಪೀಠವು ಅರ್ಜಿಗಳನ್ನು ವಜಾಗೊಳಿಸುವಾಗ, ಹಿಜಾಬ್ ಅಭ್ಯಾಸವು ಇಸ್ಲಾಂ ಧರ್ಮದ ಅಡಿಯಲ್ಲಿ ಅತ್ಯಗತ್ಯವಾದ ಆಚರಣೆಯಲ್ಲ ಮತ್ತು ಆದ್ದರಿಂದ ಭಾರತದ ಸಂವಿಧಾನದ 25 ನೇ ಪರಿಚ್ಛೇದದ ವ್ಯಾಪ್ತಿಯಲ್ಲಿ ಬರುವುದಿಲ್ಲ ಎಂದು ತನ್ನ ತೀರ್ಪಿನಲ್ಲಿ ಹೇಳಿತ್ತು.

ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆ

ಇನ್ನು ರಾಜ್ಯ ಸರ್ಕಾರದ ನಿಲುವು ಹಾಗೂ ಹೈಕೋರ್ಟ್ ಆದೇಶ ಪ್ರಶ್ನಿಸಿ ಮಾರ್ಚ್ 15, 2022 ರಂದು ಮುಸ್ಲಿಂ ವಿದ್ಯಾರ್ಥಿನಿಯರ ಪರ ಸುಪ್ರೀಂ ಕೋರ್ಟ್‌ಗೆ ವಿವಿಧ ಅರ್ಜಿಗಳನ್ನು ಸಲ್ಲಿಸಲಾಗಿತ್ತು.

ಇದನ್ನೂ ಓದಿ: Noida Twin Tower Demolition: ಟ್ವಿನ್ ಟವರ್ಸ್ ಧೂಳಲ್ಲಿ ಮಂಕಾಯ್ತಂತೆ Ind-Pak ಮ್ಯಾಚ್! ಸೋಶಿಯಲ್‌ ಮಿಡಿಯಾಗಳಲ್ಲಿ ಸಖತ್ ಟ್ರೋಲ್ಸ್

ನಾಳೆ ವಿಚಾರಣೆ ನಡೆಯಲಿರುವ ಸುಪ್ರೀಂ ನ್ಯಾಯಪೀಠ

ಈ ಹಿಂದೆ ಸುಪ್ರೀಂ ಕೋರ್ಟ್‌ನ ನಿರ್ಗಮಿತ ನ್ಯಾಯಮೂರ್ತಿ ಎನ್. ವಿ. ರಮಣ ಅವರ ಪೀಠದ ಎದುರು ಹಿಜಾಬ್ ಪ್ರಕರಣದ ವಿಚಾರಣೆ ನಡೆಸುವಂತೆ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೆ, ಪ್ರಕರಣದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಈವರೆಗೂ ದಿನಾಂಕ ನಿಗದಿ ಮಾಡಿರಲಿಲ್ಲ. ಇದೀಗ ನಾಳೆ ನ್ಯಾಯಪೀಠ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.
Published by:Annappa Achari
First published: