Hijab Row: ಇಂದು ಹಿಜಾಬ್ ವಿವಾದದ ತೀರ್ಪು: ಬೆಂಗಳೂರು ನಗರದಾದ್ಯಂತ ಖಾಕಿ ಕಟ್ಟೆಚ್ಚರ

ನಗರದಾದ್ಯಂತ 10 ಸಾವಿರಕ್ಕೂ ಅಧಿಕ ಪೊಲೀಸ್ (Police) ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದ್ದು, ಅಯಾ ವಿಭಾಗಗಳಲ್ಲಿ ಡಿಸಿಪಿಗಳಿಂದ ಬಂದೋಬಸ್ತ್ ಪರಿಶೀಲನೆ ಮಾಡಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಇಂದು ಬೆಳಗ್ಗೆ ಹಿಜಾಬ್ ವಿವಾದ (Hijab Row) ಪ್ರಕರಣದ ತೀರ್ಪು ಹೊರಬೀಳಲಿದೆ. ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದರಿಂದ ಬೆಂಗಳೂರು (Bengaluru) ನಗರದಾದ್ಯಂತ ಖಾಕಿ ಕಟ್ಟೆಚ್ಚರ ವಹಿಸಲಾಗಿದೆ. ನಗರದಾದ್ಯಂತ 10 ಸಾವಿರಕ್ಕೂ ಅಧಿಕ ಪೊಲೀಸ್ (Police) ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದ್ದು, ಅಯಾ ವಿಭಾಗಗಳಲ್ಲಿ ಡಿಸಿಪಿಗಳಿಂದ ಬಂದೋಬಸ್ತ್ ಪರಿಶೀಲನೆ ಮಾಡಲಾಗುತ್ತಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 8 ಡಿಸಿಪಿ, 40 ಎಸಿಪಿ, 120 ಇನ್ಸ್‌ ಪೆಕ್ಟರ್ ಗಳ ಜೊತೆ 40 ಸಿಎಆರ್, 30 ಕೆಎಸ್ಆರ್ ಪಿ ತುಕಡಿ ಬಂದೋಬಸ್ತ್ ಗೆ ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಾದ್ಯಂತ 144 ಸೆಕ್ಷನ್ (144 Section) ಜಾರಿ ಮಾಡಲಾಗಿದೆ. ನಗರದಲ್ಲಿ ಒಂದು ವಾರ ಪ್ರತಿಭಟನೆಗಳಿಗೆ ನಿರ್ಬಂಧ ಹಾಕಲಾಗಿದೆ.

ಇದರ ಜೊತೆಗೆ ಸೋಶಿಯಲ್ ಮೀಡಿಯಾ ಮೇಲೆ ಖಾಕಿ ಹದ್ದಿನ ಕಣ್ಣು ಇರಿಸಲಾಗಿದೆ. ನಗರದ ಶಾಲಾ ಕಾಲೇಜುಗಳ ಹೆಚ್ಚಿನ ನಿಗಾ ವಹಿಸುವಂತೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.

ಇಂದು 10.30ಕ್ಕೆ ತೀರ್ಪು ಪ್ರಕಟ

ಬೆಳಗ್ಗೆ 10.30ಕ್ಕೆ ಹಿಜಾಬ್ ವಿವಾದದ ಕುರಿತು ತೀರ್ಪು ಪ್ರಕಟಿಸುವುದಾಗಿ ಕರ್ನಾಟಕ ಹೈಕೋರ್ಟ್ ತಿಳಿಸಿದೆ.  ಸಮವಸ್ತ್ರದ ಜತೆ ಹಿಜಾಬ್ಗೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10.30ಕ್ಕೆ ಹೈಕೋರ್ಟ್ ಪೂರ್ಣ ಪೀಠದಿಂದ ತೀರ್ಪು ಹೊರ ಬೀಳಲಿದೆ. ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಅವರ ಪೂರ್ಣ ಪೀಠ ತೀರ್ಪು ನೀಡಲಿದೆ.

ಸಮವಸ್ತ್ರದ ಜತೆ ಹಿಜಾಬ್​ಗೆ ಅನುಮತಿ ಕೋರಿ ಅರ್ಜಿ

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ 11 ದಿನಗಳ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ಕಾಯ್ದಿರಿಸಿತ್ತು.

ಇದನ್ನೂ ಓದಿ:  Hijab Controversy: ವಿಧಾನಸಭೆಯಲ್ಲಿ ಹಿಜಾಬ್​ ವಿವಾದದ ಗದ್ದಲ, ಜಮೀರ್​ ಹಾಗೂ JDS ಶಾಸಕರ ನಡುವೆ ವಾಗ್ವಾದ  

ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 10ಕ್ಕೂ ಹೆಚ್ಚು ಮುಖ್ಯ ಅರ್ಜಿಗಳನ್ನು ಸತತ 11 ದಿನಗಳ ಕಾಲ 25 ತಾಸುಗಳಿಗೂ ಹೆಚ್ಚು ಸಮಯ ಹೈಕೋರ್ಟ್​​ ವಿಚಾರಣೆ ನಡೆಸಿತ್ತು.  ಅರ್ಜಿದಾರರು ಅಲ್ಲದೇ ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಶಿಕ್ಷಕರು ಸೇರಿದಂತೆ ಉಳಿದ  ಪ್ರತಿವಾದಿಗಳ ಪರವಾಗಿ ಒಟ್ಟು 25ಕ್ಕೂ ಹೆಚ್ಚು ವಕೀಲರು ತಮ್ಮ ವಾದವನ್ನು ಮಂಡಿಸಿದ್ರು.

ಮಧ್ಯಂತರ ಆದೇಶ ನೀಡಿದ್ದ ಕೋರ್ಟ್

ಈ ಹಿಂದೆ ಹೈಕೋರ್ಟ್‌ ತ್ರಿದಸ್ಯ ಪೀಠವು ಮೌಖಿಕ ಸಂದೇಶವನ್ನು ನೀಡಿದ್ದು, ಅಂತಿಮ ತೀರ್ಪಿನ ವರೆಗೆ ಶಾಲೆಗೆ ವಿದ್ಯಾರ್ಥಿಗಳು ಯಾವುದೇ ಧರ್ಮದ ಗುರುತುಗಳನ್ನು ಬಳಸುವಂತಿಲ್ಲ ಎಂದು ಮಧ್ಯಂತರ ಆದೇಶ ನೀಡಿತ್ತು. ಆದರೂ ಸಹ ವಿದ್ಯಾರ್ಥಿಗಳು ಹಿಜಾಬ್ ಹಾಕಿಕೊಂಡೇ ಕಾಲೇಜಿಗಳಿಗೆ ಆಗಮಿಸಿದ್ದಾರೆ. ಅಲ್ಲದೇ ಹಿಜಾಬ್‌ಗೆ ಅವಕಾಶ ನೀಡಬೇಕೆಂದು ಕಾಲೇಜುಗಳ ಮುಂದೆ ಪ್ರತಿಭಟನೆಗಳು ನಡೆದಿದ್ದವು.

ಶಾಲಾ-ಕಾಲೇಜುಗಳಿಗೆ ರಜೆ

ಬೆಂಗಳೂರು ಗ್ರಾಮಾಂತರ, ಗದಗ, ಕಲಬುರಗಿ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯನಗರ, ಬೆಳಗಾವಿ, ಧಾರವಾಡ, ರಾಮನಗರ, ವಿಜಯಪುರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ರಾಯಚೂರು, ಶಿವಮೊಗ್ಗ, ಹಾಸನ, ತುಮಕೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಒಂದು ವಾರ 144 ಸೆಕ್ಷನ್ ಹಾಕಲಾಗಿದೆ.

ಇದನ್ನೂ ಓದಿ:  HDK v/s Yogeshwar: ‘ಹೋಟೆಲ್​ನಲ್ಲಿ ರಾಸಲೀಲೆ ಆಡ್ತಿದ್ದ ಕುಮಾರಸ್ವಾಮಿ’, ಏಕವಚನದಲ್ಲೇ ಯೋಗೇಶ್ವರ್​ ವಾಗ್ದಾಳಿ

ಹೈಕೋರ್ಟ್ಸುತ್ತಮುತ್ತ ಹೈ ಅಲರ್ಟ್

ಹಿಜಾಬ್​ ತೀರ್ಪು ಹಿನ್ನೆಲೆ ಹೈಕೋರ್ಟ್ ಸುತ್ತಮುತ್ತ ಬಂದೋಬಸ್ತ್ ಗೆ ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಗೆ ಸೂಚನೆ, ಅಂಬೇಡ್ಕರ್ ಗೇಟ್, ಡೈಮಂಡ್ ಜೂಬ್ಲಿ ಗೇಟ್, ಮಹಾರಾಣಿ ಜಂಕ್ಷನ್ ಬಳಿ ಬಂದೋಬಸ್ತ್ ಮಾಡೋದಾಗಿ ಡಿಸಿಪಿ ಅನುಚೇತ್ ಸಭೆಯಲ್ಲಿ ತಿಳಿಸಿದ್ದಾರೆ.
Published by:Mahmadrafik K
First published: