ಬೆಂಗಳೂರು(ಸೆ. 14): ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ತಮಿಳುನಾಡಿನಲ್ಲಿ ವಿರೋಧ ಹೆಚ್ಚು. ರಾಜ್ಯದಲ್ಲೂ ಸಾಕಷ್ಟು ಜನರು ಮತ್ತು ಕನ್ನಡ ಸಂಘಟನೆಗಳು ಹಿಂದಿ ಹೇರಿಕೆ ವಿರೋಧಕ್ಕೆ ಧ್ವನಿಗೂಡಿಸಿದ್ದಾರೆ. ಬ್ಯಾಂಕುಗಳಲ್ಲಿ ಕನ್ನಡದಲ್ಲಿ ಸೇವೆ ಲಭ್ಯ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕದ ಸೋಷಿಯಲ್ ಮೀಡಿಯಾದಲ್ಲಿ #ServeInMyLanguage ಟ್ರೆಂಡಿಂಗ್ ಆಗಿತ್ತು. ಇದೀಗ ಹಿಂದಿ ದಿವಸ್ ಆಚರಣೆಯ ದಿನವೇ #StopHindiImposition ದೇಶಾದ್ಯಂತ ಟ್ರೆಂಡಿಂಗ್ ಆಗುತ್ತಿದೆ. ಬೆಂಗಳೂರಿನಲ್ಲೂ ಇದು ಟ್ರೆಂಡಿಂಗ್ ಆಗಿದೆ.
ದ್ವಿಭಾಷಾ ಶಿಕ್ಷಣ ಇರಬೇಕು. ಹಿಂದಿಯನ್ನು ಕಲಿಯುವುದು ಕಡ್ಡಾಯ ಮಾಡುವುದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಅನೇಕ ಮಂದಿ ಟೀಕಿಸಿದ್ದಾರೆ.
These propaganda works only among those North Indians....anyone can learn any language if they wish...Hindi imposition will culminate in neglecting one's native language... #StopHindiImposition https://t.co/QoXV8AZbtG
— ഉം....മാത്രം (@perakkaspeaking) September 14, 2020
Yesterday I watched @TheKapilSShow with @ManojTiwariMP and @ravikishann. The sound of #Bhojpuri was so wonderful. It’s very important to #StopHindiImposition. The diversity of India is getting lost.
— Sheshagiri Anegondi (@RunningTechie) September 14, 2020
#StopHindiImposition#StopHindiImperialism #ಹಿಂದಿಹೇರಿಕೆನಿಲ್ಲಿಸಿ pic.twitter.com/mdPSSBFHzh
— ಸ್ವಾಭಿಮಾನಿ ಕನ್ನಡಿಗರು (@Karunaada_Kali) September 14, 2020
ಭಾರತ ನನ್ನ ದೇಶ
ಕನ್ನಡ ನನ್ನ ಬೇರು#StopHindiImposition #ServeInMyLanguage pic.twitter.com/0HknkxK2KE
— Chirag Magadum (@thechiragmagdum) September 14, 2020
ಹಿಂದಿ ದಿವಸ್ಗೆ ಕುಮಾರಸ್ವಾಮಿ ವಿರೋಧ:
ಇನ್ನು, ಹಿಂದಿ ದಿವಸ ಆಚರಣೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ಧಾರೆ. ಅನ್ಯ ಭಾಷಿಕರ ಮೇಲೆ ಬಲವಂತವಾಗಿ ಹಿಂದಿ ಹೇರಿಕೆ ಸರಿಯಲ್ಲ ಎಂದವರು ಆಕ್ಷೇಪಿಸಿ ಸರಣಿ ಟ್ವೀಟ್ ಮಾಡಿದ್ದಾರೆ.
“ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.
“ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು.
“ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು.
ವಿವಿಧ ಭಾಷೆ, ವಿಭಿನ್ನ ಸಂಸ್ಕೃತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ #HindiDiwas ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ.
1/10
— H D Kumaraswamy (@hd_kumaraswamy) September 14, 2020
ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು.
2/10
— H D Kumaraswamy (@hd_kumaraswamy) September 14, 2020
ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು.
3/10
— H D Kumaraswamy (@hd_kumaraswamy) September 14, 2020
ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು.
4/10
— H D Kumaraswamy (@hd_kumaraswamy) September 14, 2020
ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು.
5/10
— H D Kumaraswamy (@hd_kumaraswamy) September 14, 2020
ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ.
6/10
— H D Kumaraswamy (@hd_kumaraswamy) September 14, 2020
ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು.
7/10
— H D Kumaraswamy (@hd_kumaraswamy) September 14, 2020
ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು.
8/10
— H D Kumaraswamy (@hd_kumaraswamy) September 14, 2020
ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.
9/10
— H D Kumaraswamy (@hd_kumaraswamy) September 14, 2020
ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ.
ಜೈ ಕನ್ನಡಾಂಬೆ
ಜೈ ಭಾರತಾಂಬೆ
10/10
— H D Kumaraswamy (@hd_kumaraswamy) September 14, 2020
“ಅನ್ಯ ಭಾಷಿಕರಿಗೆ ನಿರರ್ಥಕವಾಗಿರುವ ಹಿಂದಿ ದಿವಸವನ್ನು ಆಚರಿಸುವುದೇ ಆದರೆ, ಹಿಂದಿಯೊಂದಿಗೆ ಅಧಿಕೃತ ಭಾಷೆಗಳೆನಿಸಿರುವ ಕನ್ನಡವೂ ಸೇರಿದಂತೆ ಎಲ್ಲ ಭಾಷೆಗಳ ದಿನವನ್ನು ಕೇಂದ್ರ ಸರ್ಕಾರವೇ ದೇಶದಾದ್ಯಂತ ಆಚರಣೆ ಮಾಡಬೇಕು. ಇದಕ್ಕಾಗಿ ಪ್ರತ್ಯೇಕ ದಿನವನ್ನೂ ಘೋಷಣೆ ಮಾಡಬೇಕು. ನವೆಂಬರ್ 1 ಅನ್ನು ದೇಶದಾದ್ಯಂತ ಕನ್ನಡ ದಿನವಾಗಿ ಆಚರಿಸಬೇಕು.
“ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ.
“ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು.
“ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು.
“ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.
“ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ