• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Hindi Imposition: ನಂದಿನಿ ಕನ್ನಡಿಗರ ಸ್ವಾಭಿಮಾನ; ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಹೆಚ್​​ಡಿಕೆ

Hindi Imposition: ನಂದಿನಿ ಕನ್ನಡಿಗರ ಸ್ವಾಭಿಮಾನ; ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಹೆಚ್​​ಡಿಕೆ

ಹೆಚ್​ ಡಿ ಕುಮಾರಸ್ವಾಮಿ

ಹೆಚ್​ ಡಿ ಕುಮಾರಸ್ವಾಮಿ

ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

  • News18 Kannada
  • 4-MIN READ
  • Last Updated :
  • Karnataka, India
  • Share this:

ಬೆಂಗಳೂರು:  ಹಿಂದಿ ಹೇರಿಕೆಗೆ (Hindi Imposition) ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ (Nandini Curd Packet) ಮೇಲೆ ಹಿಂದಿಯ 'ದಹಿ' (Dahi) ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ (KMF) ಆದೇಶ ನೀಡಿರುವುದು ತಪ್ಪು.ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former CM HD Kumaraswamy) ಆಕ್ರೋಶ ಹೊರಹಾಕಿದ್ದಾರೆ. ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ ಎಂದು ಮಾಜಿ ಸಿಎಂ ಕಿಡಿಕಾರಿದ್ದಾರೆ.


ಈ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಡ್ಯದ ಸಭೆಯೊಂದರಲ್ಲಿ, ಗುಜರಾತಿನ ಅಮುಲ್ ಜತೆ ನಂದಿನಿಯನ್ನು ವಿಲೀನ ಮಾಡುವುದಾಗಿ ಹೇಳಿದ್ದರು. ಹಿಂದಿ ಪದ ಮುದ್ರಣ ನಂದಿನಿ ಹೈಜಾಕಿನ ಅರಂಭವಾ ಎಂದು ಪ್ರಶ್ನೆ ಮಾಡಿದ್ದಾರೆ.


ಇದು ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?


ಅಮಿತ್ ಶಾ ಅವರ ಹೇಳಿಕೆಯನ್ನು ಕನ್ನಡಿಗರು ಖಂಡಿಸಿದ್ದರು. ನಾನೂ ವಿರೋಧಿಸಿದ್ದೆ. ಆಮೇಲೆ ಸುಮ್ಮನಾಗಿದ್ದ ಬಿಜೆಪಿ  ಸರಕಾರ, ಈಗ ಆಹಾರ ಸುರಕ್ಷತಾ ಪ್ರಾಧಿಕಾರದ ಮೂಲಕ ಹಿಂಬಾಗಿಲಿನಿಂದ ಮೊಸರಿನ ಪಕ್ಕ ದಹಿ ಸೇರಿಸಿ ಕನ್ನಡಿಗರ ಸ್ವಾಭಿಮಾನಕ್ಕೆ ಸಡ್ಡು ಹೊಡೆದಿದೆ. ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ ಎಂದು ಕಿಡಿಕಾರಿದ್ದಾರೆ.


ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರ!


ಕನ್ನಡಕ್ಕೆ ಕೊಕ್ಕೆ ಹಾಕಿ ಹಿಂದಿಯನ್ನು ಮೆಲ್ಲಗೆ ಹೇರಿ ಇಡೀ ನಂದಿನಿ ಪದಾರ್ಥಗಳನ್ನು ಹಳ್ಳ ಹಿಡಿಸುವುದು ಇದರ ಹಿಂದಿರುವ ಘೋರ ಷಡ್ಯಂತ್ರ. ಆಮೇಲೆ, ನಂದಿನಿ ಉತ್ಪನ್ನಗಳು ಮಾರಾಟವಾಗುತ್ತಿಲ್ಲ ಎಂದು ಕಥೆ ಕಟ್ಟಿ, ಅದನ್ನು ಉಳಿಸುವ ನಾಟಕವಾಡಿ ನಂದಿನಿಯನ್ನು ಸಲೀಸಾಗಿ ಅಮುಲ್ ಜತೆಗೆ ವಿಲೀನ ಮಾಡುವ ಹುನ್ನಾರವಷ್ಟೇ ಇದು ಎಂದು ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.


ನಂದಿನಿ ಕನ್ನಡಿಗರ ಸ್ವಾಭಿಮಾನ


ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿದ್ದೇವೆ ಎಂದರೆ ಇಷ್ಟ ಬಂದಹಾಗೆ ಒಳ ನುಸುಳುವುದಲ್ಲ, ಸೌಮ್ಯವಾಗಿದ್ದೇವೆ ಎಂದರೆ ಸುಮ್ಮನಿದ್ದೇವೆ ಎಂದಲ್ಲ. ನಂದಿನಿ ಕನ್ನಡಿಗರ ಸ್ವಾಭಿಮಾನವೇ ಹೊರತು ಅಮುಲ್ ಅಡಿಯಾಳಲ್ಲ. ಕರ್ನಾಟಕ ಭಾರತ ಗಣರಾಜ್ಯದ ಒಂದು ಭಾಗವೇ ಹೊರತು ಗುಜರಾತಿನ ವಸಾಹತುವಲ್ಲ ಎಂದು ಕೇಂದ್ರ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.



ಈಚೆಗೆ ಪ್ರಧಾನಿ ನರೇಂದ್ರ ಮೋದಿ  ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಬ್ಬರೂ ಕರ್ನಾಟಕಕ್ಕೆ ಬಲು ಬಿಡುವಾಗಿ ಬಂದರು ಎಂದರೆ, ಕೇವಲ ಚುನಾವಣೆ ಉದ್ದೇಶಕ್ಕೇ ಎಂದುಕೊಂಡಿದ್ದೆ. ಆದರೆ, ಕರ್ನಾಟಕದಲ್ಲಿ ನಡೆದ ಅವರಿಬ್ಬರ ಶೋಗಳ ಸವಾರಿ ನಮ್ಮ ನಂದಿನಿಯ ಹೆಸರಿಗೇ ಕುತ್ತು ತರುತ್ತದೆ ಎಂದು ಭಾವಿಸಿರಲಿಲ್ಲ.




ಕಾಣದ ಕೈಗಳ ಕಳ್ಳಾಟ


ಆರೂವರೆ ಕೋಟಿ ಕನ್ನಡಿಗರ ಮನೋಭಾವಕ್ಕೆ ವಿರುದ್ಧವಾಗಿ ದಹಿ ಎನ್ನುವ ಪದವನ್ನು ಮುದ್ರಿಸಿದ್ದೇ ಕೆಎಂಎಫ್ ಮಾಡಿರುವ ದೊಡ್ದ ತಪ್ಪು. ಇದು ರಾಜ್ಯ ಬಿಜೆಪಿ ಸರಕಾರದ ಗಮನಕ್ಕೆ ಬಾರದೆ ಆಗಿರುವ ಕೃತ್ಯವಲ್ಲ. ಕಾಣದ ಕೈಗಳ ಕಳ್ಳಾಟ ಇಲ್ಲಿ ಸ್ಪಷ್ಟ. ಇಲ್ಲಿ ಹಿಂಬಾಗಿಲಿನಿಂದ ಅಲ್ಲ, ನೇರವಾಗಿಯೇ ಹಿಂದಿ ಹೇರಿಕೆ ಆಗಿದೆ. ಅದನ್ನು ಡಬಲ್ ಎಂಜಿನ್ ಬಿಜೆಪಿ ಸರಕಾರ ಹಾಗೂ ಅದರ ಕೀಲುಗೊಂಬೆ ಕೆಎಂಎಫ್ ಸದ್ದಿಲ್ಲದೆ ಒಪ್ಪಿಕೊಂಡಿವೆ. ಇದು ಕನ್ನಡ ವಿರೋಧಿ ಕೆಲಸ. ತಕ್ಷಣವೇ ದಹಿ ಪದ ಮುದ್ರಿಸುವುದನ್ನು ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: Hindi Imposition: ಕರುನಾಡಲ್ಲಿ 'ದಹಿ' ದಳ್ಳುರಿ, ಸಿಡಿದೆದ್ದ ಕನ್ನಡಿಗರು!

top videos


    ಯಶವಂತಪುರದಲ್ಲಿ ಪಂಚರತ್ನ ರಥಯಾತ್ರೆ ನಡೆಯುವ ವೇಳೆ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ' ನಂದಿನಿ ಉಳಿಸಿ ' ಎಂದು ಮೊಸರು, ಹಾಲಿನ ಹಾರ ಹಾಕಿ ನನ್ನ ಗಮನ ಸೆಳೆದಿದ್ದರು. ನಂದಿನಿಗೆ ಕುಣಿಕೆ ಬಿಗಿಯುವ ಯಾವುದೇ ದುಷ್ಕೃತ್ಯ ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದಾರೆ.

    First published: