ಮಂಗಳೂರು: ಪುತ್ತೂರಿನಲ್ಲಿ (Puttur) ಬಿಜೆಪಿ ನಾಯಕರ ಫೋಟೊಗಳಿಗೆ ಚಪ್ಪಲಿ ಹಾರ ಹಾಕಿರುವ ಆರೋಪದಲ್ಲಿ ವಶಕ್ಕೆ ಪಡೆದಿದ್ದ ಹಿಂದೂ ಕಾರ್ಯಕರ್ತರ (Hindu Activist) ಜೊತೆಯಲ್ಲಿ ಪೊಲೀಸರು (Police) ಅಮಾನವೀಯವಾಗಿ ನಡೆದುಕೊಂಡಿರುವ ಆರೋಪ ಕೇಳಿ ಬಂದಿದೆ. ವಶಕ್ಕೆ ಪಡೆದುಕೊಂಡಿದ್ದ ಹಿಂದೂ ಕಾರ್ಯಕರ್ತರಿಗೆ ಬಾಸುಂಡೆ ಬರುವ ರೀತಿ ಹೊಡೆಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಕಾರ್ಯಕರ್ತರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುರುಷರಕಟ್ಟೆ ನಿವಾಸಿ ಅವಿನಾಶ್ ಯಾನೆ ಅಭಿ ಹಾಗೂ ಗುರುಪ್ರಸಾದ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಿಜೆಪಿ ನಾಯಕರ ಫೋಟೋಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧ 9 ಮಂದಿಯನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಹಿಂದೂ ಸಂಘಟನೆ ಕಾರ್ಯಕರ್ತರು ದಾಖಲಾಗಿರುವ ಆಸ್ಪತ್ರೆ ಮುಂಭಾಗ ರಾತ್ರೋ ರಾತ್ರಿ ಜನರು ಸೇರಿದ್ದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಕಾಂಗ್ರೆಸ್ ವಿರುದ್ಧ ಪೂಂಜಾ ವಾಗ್ದಾಳಿ
ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸುತ್ತೇನೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಯಾವ ರೀತಿ ಇದೆ ಅಂತ ಎಂಬುದನ್ನ ಸ್ಯಾಂಪಲ್ ರೀತಿಯಲ್ಲಿ ತೋರಿಸಿದ್ದಾರೆ ಎಂದು ಕಿಡಿಕಾರಿದರು.
ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ. ಈ ಬಗ್ಗೆ ಈಗಾಗಲೇ ದ.ಕ. ಜಿಲ್ಲಾ ಎಸ್ಪಿ ಅವರಿಗೆ ಘಟನೆ ಬಗ್ಗೆ ಕ್ರಮಕೈಗೊಳ್ಳುಂತೆ ಒತ್ತಾಯಿಸಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: Congress: ದೂರ ದೂರ ಆಗಿರುವ ಡಿಕೆಶಿ-ಸಿದ್ದರಾಮಯ್ಯರನ್ನ ಒಂದು ಮಾಡಲು ಹೈಕಮಾಂಡ್ ಪ್ಲಾನ್
ಯಾವ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಿ. ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ