NIA ಗೆ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ? ಶಾಸಕ ರೇಣುಕಾಚಾರ್ಯ ರಾಜೀನಾಮೆ? ಬೆಳ್ಳಾರೆಯಲ್ಲಿ ಸೆಕ್ಷನ್ 144 ಜಾರಿ

ಬೆಳ್ಳಾರೆಯ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಿದ್ದು ವಾಹನ ಸಂಚಾರ ವಿರಳಗೊಂಡಿದೆ. ಯುವಕರು ಗುಂಪುಗೂಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಪ್ರವೀಣ್ ನೆಟ್ಟಾರು

ಪ್ರವೀಣ್ ನೆಟ್ಟಾರು

 • Share this:
  ಮಂಗಳೂರು: ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರ್ (BJP Karyakarta Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕರು (BJP Leaders) ಸಾಂತ್ವನ ಹೇಳಲು ಬಂದಾಗ ಕಾರ್ಯಕರ್ತರು ಮುತ್ತಿಗೆಹಾಕಿದ್ದಾರೆ. ಸುಳ್ಯದ (Sullia) ಬೆಳ್ಳಾರೆ ಪೇಟೆ 144 ಸೆಕ್ಷನ್  (Section 144) ಜಾರಿಗೊಳಿಸಲಾಗಿದೆ. ಬೆಳ್ಳಾರೆಯ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಿದ್ದು ವಾಹನ ಸಂಚಾರ ವಿರಳಗೊಂಡಿದೆ. ಯುವಕರು ಗುಂಪುಗೂಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಅಲ್ಲದೇ ಹಿಂದೂಗಳ ಹತ್ಯೆ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳದಿರುವ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗಿದೆ.  ಈ ಬಗ್ಗೆ ಆಪ್ತರ ಜೊತೆ ಸಮಾಲೋಚನೆ ನಡೆಸಿರುವ ಶಾಸಕ ರೇಣುಕಾಚಾರ್ಯ ಸಿಎಂ ಭೇಟಿ ಮಾಡಿದ ಬಳಿಕ ನಿರ್ಧಾರ ಪ್ರಕಟಿಸೋ ಸಾಧ್ಯತೆ ಇದೆ ಎನ್ನಲಾಗಿದೆ  ಪ್ರಮೋದ್ ಮುತಾಲಿಕ್ ಕಟು ಟೀಕೆ
  ಬಿಜೆಪಿ ಯುವ ಮುಖಂಡ ಪ್ರವೀಣ ನೆಟ್ಟಾರ್  ಹತ್ಯೆ ಹಿಂದೆ ಕೇರಳದ ಮೂಲ ಅಂತಾ ಹೇಳುತ್ತಿದ್ದಾರೆ. ವಾರದ ಹಿಂದೆ ನಡೆದ ಹತ್ಯೆಗೆ ಸೇಡಿಗೆ ಮಾಡಿದ್ದಾರೆ ಅಂತಾನೂ ಹೇಳುತ್ತಿದ್ದಾರೆ. ಮುಸ್ಲಿಮರು ಮಾಡಿರೋ ಲಕ್ಷಾಂತರ ಕೊಲೆಗಳಿಗೆ ನಾವು ತಿರುಗಿ ಬಿದ್ರೆ ದೇಶದಲ್ಲಿ ಒಬ್ಬನೂ ಮುಸ್ಲಿಂ ಇರಬಾರದು, ಆದರೆ ಆ ಮಾನಸಿಕತೆ ಇರಬಾರದು, ಕೊಲೆಗೆ ಕೊಲೆಯೇ ಉತ್ತರ ಅಲ್ಲ. ಆದರೆ ಹಿಂದುಗಳ ರಕ್ಷಣೆಯಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ‌ ಮುತಾಲಿಕ ಹೇಳಿದ್ದಾರೆ.  ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದ ಮುತಾಲಿಕ್
  ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೌರ್ಯ ಹದ್ದುಬಸ್ತಿನಲ್ಲಿಡೋ ಕಾರ್ಯ ಸರ್ಕಾರ ಕೂಡಲೇ ಮಾಡಬೇಕು. ಇಲ್ಲದೇ ಹೋದಲ್ಲಿ ಇನ್ನೂ ಸಾಕಷ್ಟು ಹಿಂದೂಗಳ ಬಲಿಯಾಗತ್ತೇ ಅನಿಸುತ್ತಿದೆ. ಸರ್ಕಾರ ಈ ವಿಷಯದಲ್ಲಿ ವಿಫಲ ಆಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದರು.


  ಇದನ್ನೂ ಓದಿ: Praveen Murder: ಪ್ರವೀಣ್ ಹತ್ಯೆ, ಸರ್ಕಾರದಲ್ಲಿ ಗಟ್ಸ್ ಇಲ್ಲ! ಗುಡುಗಿದ ಪ್ರಮೋದ್ ಮುತಾಲಿಕ್

  ಎಸ್‌ಡಿಪಿಐ, ಪಿಎಫ್‌ಐ ಬ್ಯಾನ್ ಮಾಡಬೇಕು
  ಕೊಲೆ, ಹಲ್ಲೆ, ಗಲಾಟೆಯಾದಾಗ ಉಗ್ರವಾದ ಹೇಳಿಕೆಗಳು ಬರುತ್ತಾವೆ, ಆದರೆ ಮುಂದೆ ಏನು. ಇನ್ನುವರೆಗೆ ಯಾವುದೇ ರೀತಿಯ ಕಠಿಣ ಪ್ರಕ್ರಿಯೆ ನಡೆದಿಲ್ಲ, ಇದೇ ಕಾರಣಕ್ಕೆ ಪ್ರವೀಣ ಹತ್ಯೆ ಆಗಿದೆ. ಇದು ಕಾನೂನು, ಸರ್ಕಾರದ ವೈಫಲ್ಯ. ಬಿಜೆಪಿಗೆ ಹಿಂದೂಗಳ ಸುರಕ್ಷತೆ ಕಾಳಜಿಯಿದ್ದಲ್ಲಿ ಎಸ್‌ಡಿಪಿಐ, ಪಿಎಫ್‌ಐ ಬ್ಯಾನ್ ಮಾಡಬೇಕು.

  ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?
  ಪುತ್ತೂರಿನ  ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆಗೆ  ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್​ಗಳ ಮೂಲಕ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ರಾಜ್ಯ ಬಿಜೆಪಿ ಸರ್ಕಾರ ಸರ್ಕಾರ ಮೈಮರೆತಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

  ಇದನ್ನೂ ಓದಿ: HD Kumaraswamy: ಶಿವಮೊಗ್ಗದ ಹರ್ಷ ಕೊಲೆಯಾದಗಲೇ ಏಕೆ ಎಚ್ಚೆತ್ತುಕೊಳ್ಳಲಿಲ್ಲ: ಸರ್ಕಾರಕ್ಕೆ ಕುಮಾರಸ್ವಾಮಿ ತರಾಟೆ

  ಕೊಲೆಗಳನ್ನು ತಡೆಯುತ್ತಿಲ್ಲ ಏಕೆ?
  ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ. ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ ಎಂದು ಎಚ್​ಡಿಕೆ ಆರೋಪಿಸಿದ್ದಾರೆ. ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ. ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ ಎಂದು ಟ್ವೀಟಿಸಿದ್ದಾರೆ.
  Published by:guruganesh bhat
  First published: