• Home
 • »
 • News
 • »
 • state
 • »
 • Hindu Word Controversy: ಹಿಂದೂ ಪದದ ಬಗ್ಗೆ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ, ತನಿಖೆ ನಡೆಸಲು ಒತ್ತಾಯ

Hindu Word Controversy: ಹಿಂದೂ ಪದದ ಬಗ್ಗೆ ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ, ತನಿಖೆ ನಡೆಸಲು ಒತ್ತಾಯ

ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ

ಅಲ್ಲದೇ ಈ ಬಗ್ಗೆ ತನಿಖೆ ನಡೆಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

 • News18 Kannada
 • Last Updated :
 • Karnataka, India
 • Share this:

  ಬೆಂಗಳೂರು: ಹಿಂದೂ ಶಬ್ದದ ಅರ್ಥದ ಕುರಿತು ತಾವು ಹೇಳಿದ್ದ ಹೇಳಿಕೆಯನ್ನು (Hindu Word Controversy)  ಕಾಂಗ್ರೆಸ್ ನಾಯಕ, ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ (Satish Jarkiholi)  ಹಿಂಪಡೆದಿದ್ದಾರೆ. ನನ್ನ ಹೇಳಿಕೆಯನ್ನು ತಿರುಚಲಾಗಿದೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ ಎಂದು ಎಂದು ಅವರು ತಿಳಿಸಿದ್ದಾರೆ. ಅಲ್ಲದೇ ಈ ಬಗ್ಗೆ ತನಿಖೆ ನಡೆಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಅವರಿಗೆ ಪತ್ರ ಬರೆದಿದ್ದಾರೆ. ನನ್ನ ತೇಜೋವಧೆ, ಹಾನಿ ಉಂಟು ಮಾಡಲು ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. 


  ಹಿಂದೂ ಶಬ್ದ ಪರ್ಷಿಯನ್ ಬಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು?ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದ್ದಾಗಿದೆ ಎಂದು ಬರೆದಿದ್ದಾರೆ. ಈ ಬಗ್ಗೆ ಸಾರ್ವಜನಿಕ ಚರ್ಚೆ ಆಗಬೇಕಾದ ಅಗತ್ಯವಿದೆ ಎಂದಿದ್ದೇನೆ. ವಿಕಿಪೀಡಿಯ, ಪುಸ್ತಕಗಳು, ಶಬ್ದಕೋಶಗಳು, ಇತಿಹಾಸಕಾರರ ಬರಹಗಳ ಉಲ್ಲೇಖದ ಆಧಾರದ ಮೇಲೆ ನಾನು ಭಾಷಣ ಮಾಡಿದ್ದೇನೆ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸುತ್ತಿದ್ದಾರೆ ಎಂದು ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


  ತನಿಖೆ ನಡೆಸಲು ಒತ್ತಾಯ
  ಅಲ್ಲದೇ ಈ ಪ್ರಕರಣದ ಕುರಿತು ಎಲ್ಲ ಆಯಾಮವನ್ನು ಪರಿಶೀಲಿಸಿ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ನಡೆಸಲು ಶಾಸಕ ಸತೀಶ್ ಜಾರಕಿಹೊಳಿ ಪತ್ರದಲ್ಲಿ ಒತ್ತಾಯ ಮಾಡಿದ್ದಾರೆ.


  ಇತ್ತ ಬೆಂಗಳೂರಿನಲ್ಲಿ ವಕೀಲ ದಿಲೀಪ್ ಕುಮಾರ್ ಎಂಬುವರು ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಬೆಂಗಳೂರಿನ ‌8ನೇ ಎಸಿಎಂಎಂ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ.


  “ಹಿಂದೂ ಶಬ್ದವೇ ಅಶ್ಲೀಲ” ಎಂದಿದ್ದ ಸತೀಶ್ ಜಾರಕಿಹೊಳಿ
  ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ಬುದ್ಧ ಅಂಬೇಡ್ಕರ್ ಸಮಾವೇಶದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಭಾಗಿಯಾಗಿದ್ದರು. ಈ ವೇಳೆ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ ಅಂತ ಸತೀಶ್ ಜಾರಕಿಹೊಳಿ ಹೇಳಿದ್ದರು. ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ. ಅದನ್ನು ನೀವು ಕೇಳಿದ್ರೆ ನಾಚಿಕೆ ಪಡುತ್ತೀರಿ ಎಂದಿದ್ದಾರೆ. ಬೇಕಾದರೆ ಯಾರಾದರೂ ಗೂಗಲ್‌ನಲ್ಲಿ ಸರ್ಚ್ ಮಾಡಿ ನೋಡಬಹುದು ಅಂತ ಅವರು ಹೇಳಿದ್ದರು.


  ಇದನ್ನೂ ಓದಿ: Hindu Word: ಹಿಂದೂ ಪದದ ಅರ್ಥವೇನು? ಪುರಿಯ ಶಂಕರಾಚಾರ್ಯ ಸ್ವಾಮೀಜಿ ವಿವರಿಸಿದ್ದಾರೆ ನೋಡಿ


  ಸತೀಶ್ ಹೇಳಿಕೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಈ ನಡುವೆ ಬೆಂಗಳೂರಿನಲ್ಲಿ ವಕೀಲರೊಬ್ಬರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ವಕೀಲ ದಿಲೀಪ್ ಕುಮಾರ್ ಎಂಬುವರು ಸತೀಶ್ ಜಾರಕಿಹೊಳಿ ವಿರುದ್ಧ ಖಾಸಗಿ ದೂರು ದಾಖಲಿಸಿದ್ದಾರೆ.


  ನವೆಂಬರ್‌ 18ಕ್ಕೆ ಕೋರ್ಟ್‌ನಲ್ಲಿ ವಿಚಾರಣೆ
  ಬೆಂಗಳೂರಿನ ‌8ನೇ ಎಸಿಎಂಎಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ವಕೀಲ ದಿಲೀಪ್ ಕುಮಾರ್ ಪರವಾಗಿ ವಕೀಲ ಧರ್ಮಪಾಲ್ ಅವರಿಂದ ಅರ್ಜಿ ಸಲ್ಲಿಕೆಯಾಗಿದೆ. ಮಾನನಷ್ಟ, ಸಮಾಜದಲ್ಲಿ ಗಲಭೆ, ದಂಗೆಗೆ ಸತೀಶ್ ಜಾರಿಕಹೊಳಿ ನೀಡಿರುವ ಹೇಳಿಕೆ ಕಾರಣವಾಗಲಿದೆ ಅಂತ ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನು ಈ ಅರ್ಜಿ ವಿಚಾರಣೆಯನ್ನು ಕೋರ್ಟ್ ನವೆಂಬರ್ 18ಕ್ಕೆ ನಿಗದಿ ಮಾಡಿದೆ.


  ಇದನ್ನೂ ಓದಿ: Murugha Swamy: ಹೆಣ್ಮಕ್ಕಳು ಸ್ವಾಮಿಗಳ ಬಳಿ ಹೋಗದ ಪರಿಸ್ಥಿತಿ ನಿರ್ಮಾಣ: ಶಾಸಕ ಶಾಮನೂರು ಶಿವಶಂಕರಪ್ಪ


  ಸತೀಶ್ ಜಾರಕಿಹೊಳಿ ವಿರುದ್ಧ ಕೊಪ್ಪಳದಲ್ಲಿ ದೂರು
  ಇನ್ನು ಸತೀಶ್ ಜಾರಕಿಹೊಳಿ ವಿರುದ್ಧ ಕೊಪ್ಪಳದಲ್ಲಿ ದೂರು ದಾಖಲಾಗಿದೆ. ಬಿಜೆಪಿಯಿಂದ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಕೆಯಾಗಿದೆ. ಯಮಕನಮರಡಿ ಶಾಸಕ ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿ ಹಿಂದೂ ಧರ್ಮದವರ ಭಾವನೆ ಧಕ್ಕೆ ಉಂಟು ಮಾಡಿದ್ದಾರೆ. ಹೀಗಾಗಿ ಅವರ ಮೇಲೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

  Published by:ಗುರುಗಣೇಶ ಡಬ್ಗುಳಿ
  First published: