ಸಂಪುಟ ವಿಸ್ತರಣೆಗೆ ಅಮಿತ್ ಶಾ ಒಪ್ಪಿಗೆ; ದೆಹಲಿಗೆ ಮರಳಿದ ಕೇಂದ್ರ ಗೃಹ ಸಚಿವ

ಬೆಳಗ್ಗೆ ಹುಬ್ಬಳ್ಳಿಯಿಂದ ದೆಹಲಿಯತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣ ಬೆಳೆಸಿದ್ದಾರೆ. ಹುಬ್ಬಳ್ಳಿಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆಯಲ್ಲಿ ಉಪಹಾರ ಸೇವಿಸಿ ಏರ್​​​​ಪೋರ್ಟ್​​ನತ್ತ ಪ್ರಯಾಣ ಬೆಳೆಸಿದರು. ನಂತರ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.  

ಫೈಲ್​ ಫೋಟೋ: ಅಮಿತ್​ ಶಾ-ಬಿಎಸ್​ವೈ

ಫೈಲ್​ ಫೋಟೋ: ಅಮಿತ್​ ಶಾ-ಬಿಎಸ್​ವೈ

 • Share this:
  ಹುಬ್ಬಳ್ಳಿ (ಜ.19): ಕೇಂದ್ರ ಗೃಹ ಸಚಿವ ಅಮಿತ್​ ಶಾ ಎರಡು ದಿನಗಳ ರಾಜ್ಯ ಪ್ರವಾಸ ಪೂರ್ಣಗೊಳಿಸಿ ದೆಹಲಿಗೆ ವಾಪಾಸಾಗಿದ್ದಾರೆ. ಬಹು ನಿರೀಕ್ಷಿತ ರಾಜ್ಯ ಸಂಪುಟ ರಚನೆ ಕಸರತ್ತಿಗೆ ಅವರು ಒಪ್ಪಿಗೆ ನೀಡಿದ್ದಾರೆ.

  ಶನಿವಾರ ಮಧ್ಯಾಹ್ನ ವಿಶೇಷ ವಿಮಾನದಲ್ಲಿ ಅಮಿತ್​ ಶಾ ಬೆಂಗಳೂರಿಗೆ ಆಗಮಿಸಿದ್ದರು. ಮೊದಲು ಅರಮನೆ ಮೈದಾನದಲ್ಲಿ ವಿವೇಕದೀಪಿನಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ನೂತನವಾಗಿ ಸ್ಥಾಪನೆಗೊಂಡ ಸಂಸದ ತೇಜಸ್ವಿ ಸೂರ್ಯ ಕಚೇರಿಯನ್ನು ಅಮಿತ್​ ಶಾ ಉದ್ಘಾಟನೆ ಮಾಡಿದರು. ನಂತರ ಹುಬ್ಬಳ್ಳಿ ಕಡೆಗೆ ಪ್ರಯಾಣ ಬೆಳೆಸಿದ್ದರು. ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿದ್ದ ತಿದ್ದುಪಡಿ ಕಾಯ್ದೆಯ ಜನಜಾಗೃತಿ ಸಮಾವೇಶದಲ್ಲಿ ಅಮಿತ್​ ಶಾ ಪಾಲ್ಗೊಂಡಿದ್ದರು.

  ಇನ್ನು, ಅಮಿತ್​ ಶಾ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಸಂಪುಟ ವಿಸ್ತರಣೆ ಫೈನಲ್​ ಆಗಲಿದೆ ಎನ್ನಲಾಗಿತ್ತು. ಅಂತೆಯೇ ಕೇಂದ್ರ ಗೃಹ ಸಚಿವರು ಸಂಪುಟ ವಿಸ್ತರಣೆಗೆ ಒಪ್ಪಿಗೆ ನೀಡಿದ್ದಾರೆ. ಸಂಪುಟ ವಿಸ್ತರಣೆಗೆ ಯಾವುದೇ ಅಡ್ಡಿ-ಆತಂಕ ಇಲ್ಲ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.

  ಇದನ್ನೂ ಓದಿ: ಸಿಎಎ ಕುರಿತು ಹುಬ್ಬಳ್ಳಿಯಲ್ಲಿ ಜನಜಾಗೃತಿ ಸಮಾವೇಶ; ವಿರೋಧ ಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ

  ಇಂದು, ಬೆಳಗ್ಗೆ ಹುಬ್ಬಳ್ಳಿಯಿಂದ ದೆಹಲಿಯತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣ ಬೆಳೆಸಿದ್ದಾರೆ. ಹುಬ್ಬಳ್ಳಿಯ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆಯಲ್ಲಿ ಉಪಹಾರ ಸೇವಿಸಿ ಏರ್​​​​ಪೋರ್ಟ್​​ನತ್ತ ಪ್ರಯಾಣ ಬೆಳೆಸಿದರು. ನಂತರ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ.
  First published: