ಇಂದು ಕಾಂಗ್ರೆಸ್ ಶಾಸಕಾಂಗ ನಾಯಕ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Former CM Siddaramaih) ಅವರ 75ನೇ ಜನ್ಮದಿನವನ್ನು ದಾವಣೆಗೆರೆಯಲ್ಲಿ (Davanagere) ಸಿದ್ದರಾಮೋತ್ಸವ (Siddaramotsava) ಹೆಸರಿನಲ್ಲಿ ಆಚರಣೆ ಮಾಡಲಾಗಿದೆ. ಈ ಮೂಲಕ ಕಾಂಗ್ರೆಸ್ (Congress) ವಿಧಾನಸಭಾ ಚುನಾವಣೆಗೂ (Assembly Election) ಮುನ್ನ ದೊಡ್ಡಮಟ್ಟದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ ಎಂದು ಹೇಳಲಾಗಿದೆ. ಇದೀಗ ಸಿದ್ದರಾಮೋತ್ಸವ ಬೆನ್ನಲ್ಲೇ ಚುನಾವಣಾ ಚಾಣಕ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Union Minister Amit Shah) ಸಹ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಬಿಜೆಪಿ (Karnataka BJP) ಮತ್ತು ಬೊಮ್ಮಾಯಿ ಸರ್ಕಾರದ (CM Bommai Government) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಿದ್ದರಾಮೋತ್ಸವ ನೆಪದಲ್ಲಿ ಮತಗಳ ಕ್ರೂಢೀಕರಣಕ್ಕೆ ಮುಂದಾಗಿದೆ. ಇದು ಒಂದು ರೀತಿ ಬಿಜೆಪಿಗೆ (BJP) ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಚಕ್ರವರ್ತಿ ಸೂಲಿಬೆಲೆ ಅಸಮಾಧಾನ
ಬೆಳ್ಳಾರೆಯ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಬಳಿಕ ಬಿಜೆಪಿ ಯುವ ಮೋರ್ಚಾದಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಇನ್ನು ಪರೋಕ್ಷವಾಗಿ ಬಿಜೆಪಿ ಬೆಂಬಲಿಸುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅಂತಹ ನಾಯಕರೇ, ನೇರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರದ ಆಡಳಿತ ವೈಖರಿ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇದರ ಜೊತೆಗೆ ಟೌನ್ ಹಾಲ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ರು.
ಇದನ್ನೂ ಓದಿ: Kodagu: ಉಕ್ಕಿ ಹರಿದ ಪಯಶ್ವಿನಿ! ಕೊಯಿನಾಡು, ಕಲ್ಲುಗುಂಡಿಯಲ್ಲಿ ಪ್ರವಾಹ
ನಳಿನ್ ವಿರುದ್ಧ ಆಕ್ರೋಶ
ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಯಾವ ಪ್ರಮಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು ಅನ್ನೋ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಂಚಲನದ ಜೊತೆ ಆತಂಕ ಸೃಷ್ಟಿ ಮಾಡಿತ್ತು. ಉದ್ರಿಕ್ತ ಜನರು ನಳಿನ್ ಕುಮಾರ್ ಕಟೀಲ್ ಅವರಿದ್ದ ಕಾರ್ ಪಲ್ಟಿ ಹೊಡೆಸಲು ಮುಂದಾಗಿದ್ದರು. ಸ್ವತಃ ತಮ್ಮ ಕ್ಷೇತ್ರದಲ್ಲಿ ಇಂತಹದೊಂದು ವಿರೋಧ ಎದುರಾಗುತ್ತೆ ಎಂಬುದನ್ನು ನಳಿನ್ ಕುಮಾರ್ ಕಟೀಲ್ ಊಹೆ ಮಾಡಿರಲಿಲ್ಲ.
ಬಿಜೆಪಿಗೆ ಡ್ಯಾಮೇಜ್ ಮಾಡಿದ ಮೂವರ ಹೇಳಿಕೆಗಳು
ಇತ್ತ ಈ ನಡುವೆ ರಾಷ್ಟ್ರೀಯ ಬಿಜೆಪಿ ಯುವ ಮೋರ್ಚಾ ನಾಯಕ, ಸಂಸದ ತೇಜಸ್ವಿ ಸೂರ್ಯ ಅವರ ಕಾಂಗ್ರೆಸ್ ಆಗಿದ್ರೆ ರಸ್ತೆಯಲ್ಲಿ ನಿಂತು ಕಲ್ಲು ಹೊಡೆಯಬಹುದಿತ್ತು ಎಂಬ ಹೇಳಿಕೆ ಎದುರಾಳಿ ಪಕ್ಷಗಳಿಗೆ ದೊಡ್ಡ ಅಸ್ತ್ರ ಸಿಕ್ಕಂತಾಗಿದೆ. ಇದೇ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಸಹ ನಡೆಸಿತ್ತು.
ಅಮಿತ್ ಶಾ ಭೇಟಿ ಹಿಂದಿನ ಉದ್ದೇಶಗಳೇನು?
*ರಾಜ್ಯದಲ್ಲಿ ಉಂಟಾಗಿರುವ ಬೆಳವಣಿಗೆಗಳ ಬಗ್ಗೆ ಅಮಿತ್ ಶಾ ಸಂಪೂರ್ಣ ವರದಿ ಪಡೆದುಕೊಳ್ಳುವ ಸಾಧ್ಯತೆಗಳಿವೆ.
*ಪಕ್ಷದೊಳಗೆ ಉಂಟಾಗಿರುವ ಅಸಮಧಾನ ಶಮನಕ್ಕೆ ಮುಂದಾಗಬಹುದು.
*ಈ ಅಸಮಾಧಾನ ಶಮನಗೊಳಿಸದೇ ಇದ್ರೆ ಇದನ್ನು ವಿರೋಧ ಪಕ್ಷಗಳು ಇದನ್ನೇ ಲಾಭವಾಗಿ ಬಳಸಿಕೊಳ್ಳಬಹುದು. ಹಾಗಾಗಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಬಹುದು.
*ನಳಿನ್ ಕುಮಾರ್ ಕಟೀಲ್ ಅವರ ರಾಜ್ಯಾಧ್ಯಕ್ಷ ಅವಧಿ ಮುಗಿಯಲಿದೆ. ಹಾಗಾಗಿ ಇವರನ್ನೇ ಮುಂದುವರಿಸಬೇಕಾ ಅಥವಾ ಹೊಸಬರನ್ನು ನೇಮಕ ಮಾಡಬೇಕಾ? ಎಂಬುದರ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಇದನ್ನೂ ಓದಿ: SDPI, PFI ಬಿಜೆಪಿ ಸಾಕಿದ ಕೂಸುಗಳು; ಸಿದ್ದರಾಮಯ್ಯ ಆರೋಪ
*ಪಕ್ಷಕ್ಕೆ ಡ್ಯಾಮೇಜ್ ಆಗದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಬೇಕು ಎಂದು ಎಚ್ಚರಿಕೆ ನೀಡುವ ಸಾಧ್ಯತೆಗಳಿವೆ.
*ಇನ್ನೂ ಇದೇ ವೇಳೆ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ