Araga Jnanendra: ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ: ABVP ಮುತ್ತಿಗೆ ಯತ್ನಕ್ಕೆ ಸಚಿವರ ಪ್ರತಿಕ್ರಿಯೆ

ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ABVP ಯ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಆರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ

  • Share this:
ಇಂದು ಬೆಳಗ್ಗೆ ತಮ್ಮ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರು (ABVP Activist) ಮುತ್ತಿಗೆ ಹಾಕಲು ಪ್ರಯತ್ನಿಸಿದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra) ಪ್ರತಿಕ್ರಿಯಿಸಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಗಳಿಂದ ಹಿಡಿದು, ಇತ್ತೀಚಿಗಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯಂತಹ (Praveen Murder Case) ಘಟನೆಗಳ ಹಿನ್ನಲೆಯಲ್ಲಿ SDPI ಅಂತಹ ಸಂಸ್ಥೆಗಳ ಮೇಲೆ ನಿಷೇಧ ಹೇರಬೇಕು ಎಂಬ ಬೇಡಿಕೆಯೊಂದಿಗೆ,  ಪ್ರತಿಭಟನೆಯನ್ನು ಎಬಿವಿಪಿ ಕಾರ್ಯಕರ್ತರು, ನಡೆಸಿದ್ದಾರೆ. ನಾನು ಅವರ ಭಾವನೆಗಳನ್ನು ಅರ್ಥ ಮಾಡಿಕೊಂಡಿದ್ದೇನೆ, ಹಾಗೂ ಸರಕಾರವೂ (Government) ಆ ನಿಟ್ಟಿನಲ್ಲಿ ಯೋಚಿಸುತ್ತಿದೆ. ಮನೆಯಲ್ಲಿ ನನ್ನನ್ನು ಭೇಟಿಯಾಗಲು ಬಂದಿದ್ದ ಎಬಿವಿಪಿ ಕಾರ್ಯಕರ್ತರು, ನನ್ನ ಅನುಪಸ್ಥಿತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ABVP ಯ ಸದಸ್ಯರನ್ನು ನಾನೇ ಆಹ್ವಾನಿಸಿ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra) ರಾಜೀನಾಮೆ, SDPI ಮತ್ತು PFI ನಿಷೇಧಕ್ಕೆ ಒತ್ತಾಯಿಸಿ ಇಂದು ಎಬಿವಿಪಿ ಕಾರ್ಯಕರ್ತರು (ABVP Activist) ದಿಢೀರ್ ಪ್ರತಿಭಟನೆ ನಡೆಸಿದರು. ಅಸಮರ್ಥ ಸಿಎಂ ಬಸವರಾಜ್ ಬೊಮ್ಮಾಯಿ‌ ಎಂದು ಘೋಷಣೆ  ಕೂಗುತ್ತಾ ಬಂದ ಕಾರ್ಯಕರ್ತರು ಗೃಹ ಸಚಿವರ ನಿವಾಸದೊಳಗೆ ನುಗ್ಗಲು ಪ್ರಯತ್ನಿಸಿದರು.

ಇದನ್ನೂ ಓದಿ:  Kodagu: ಹಿಂದೂ ಕಾರ್ಯಕರ್ತರ ಮೇಲೆ ರೌಡಿ ಶೀಟರ್ ಪ್ರಕರಣ! ಬೃಹತ್ ಪ್ರತಿಭಟನೆ

ಗೇಟ್ ಜಿಗಿದು ಒಳನುಗ್ಗಲು ಪ್ರಯತ್ನ

ಕೆಲವರು ಮುಂಭಾಗದ ಗೇಟ್ ಜಿಗಿದು, ಒಳ ಪ್ರವೇಶಿಸಿದ್ದರು. ಆದ್ರೆ ಈ ವೇಳೆ ಸಚಿವರ ನಿವಾಸದ ಭದ್ರತೆಯ ಕರ್ತವ್ಯದಲ್ಲಿ ಕೇವಲ ಏಳೆಂಟು ಪೊಲೀಸ್ (Police) ಸಿಬ್ಬಂದಿ ಮಾತ್ರ ಸ್ಥಳದಲ್ಲಿದ್ದರು. 50ಕ್ಕೂ ಅಧಿಕ ಕಾರ್ಯಕರ್ತರನ್ನು ನಿಯಂತ್ರಿಸಲು ಒಂದು ಕ್ಷಣ ಪೊಲೀಸರು ಕಷ್ಟವಾಗಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಎಲ್ಲಾ ಕಾರ್ಯಕರ್ತರನ್ನು ವಶಕ್ಕೆ (Detained) ಪಡೆದುಕೊಂಡರು.

ಸರ್ಕಾರದ ವಿರುದ್ಧ HDK ಕಿಡಿ

ರಾಜ್ಯ ಬಿಜೆಪಿ ಸರ್ಕಾರದ (State BJP Government) ವಿರುದ್ಧ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ (Ex CM HD Kumraswamy) ಅವರು ಕಿಡಿಕಾರಿದ್ದಾರೆ. “ನಾಡಿನ ಜನರನ್ನಷ್ಟೇ ಅಲ್ಲ, ತನ್ನ ಪಕ್ಷದ ಕಾರ್ಯಕರ್ತರನ್ನೇ (Party Workers) ರಕ್ಷಣೆ ಮಾಡಿಕೊಳ್ಳಲಾಗದ ಅಸಮರ್ಥ, ಅಸಹಾಯಕ ಸರ್ಕಾರ” ಅಂತ ಕಿಡಿಕಾರಿದ್ದಾರೆ.

ಸರ್ಕಾರ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣವನ್ನು NIA ತನಿಖೆಗೆ ಒಪ್ಪಿಸಿದೆ. ಆದರೆ, ಕರಾವಳಿಯಲ್ಲಿ ನಡೆದ ಎಲ್ಲ ಹತ್ಯೆಗಳನ್ನೂ NIA ತನಿಖೆಗೆ ವಹಿಸಲು ಹಿಂಜರಿಯುತ್ತಿದೆ. ಇದು ಯಾಕೆ ಅಂತ ಎಚ್‌ಡಿಕೆ ಖಾರವಾಗಿ ಪ್ರಶ್ನಿಸಿದ್ದಾರೆ.

ಬಹಿರಂಗ ಪತ್ರದಲ್ಲಿ ಸಿದ್ದರಾಮಯ್ಯ ಆಕ್ರೋಶ

ಮಾಜಿ ಮುಖ್ಯಮಂತ್ರಿ (Ex CM) ಹಾಗೂ ಹಾಲಿ ವಿಪಕ್ಷ ನಾಯಕ (Opposition Party Leader) ಸಿದ್ದರಾಮಯ್ಯ (Siddaramaiah) ರಾಜ್ಯದ ಯುವ ಜನರಿಗೊಂದು (Youts) ಬಹಿರಂಗ ಪತ್ರ (Open Letter) ಬರೆದಿದ್ದಾರೆ.

ಇದನ್ನೂ ಓದಿ: Praveen Nettar Murder: ಹಂತಕರಿಗೆ ಟಾರ್ಗೆಟ್ ಆಗಿದ್ದೇಕೆ ಪ್ರವೀಣ್ ನೆಟ್ಟಾರ್? ಬಿಜೆಪಿ ಕಾರ್ಯಕರ್ತನ ಹತ್ಯೆ ಹೇಗಾಯ್ತು?

ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ (Coastal Districts) ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ ಅಂತ ಕಳವಳ ವ್ಯಕ್ತಪಡಿಸಿರುವ ಅವರು, ಮಸೂದ್ (Masood), ಪ್ರವೀಣ್ ನೆಟ್ಟಾರ್ (Praveen Nettar) ಹಾಗೂ ಫಾಜಿಲ್ (Fazil) ಹತ್ಯೆಗೆ (Murder) ಸಂತಾಪ ಸೂಚಿಸಿದ್ದಾರೆ. ಅಲ್ಲದೇ “ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ” ಅಂತ ಆಕ್ರೋಶದ ಮಾತನ್ನಾಡಿದ್ದಾರೆ.

ಫೇಸ್‌ಬುಕ್ ಪೋಸ್ಟ್‌ಗೆ ಸಿದ್ದರಾಮಯ್ಯ ಸ್ಪಷ್ಟನೆ

ಇನ್ನು ಸಾಮಾಜಿಕ ಜಾಲತಾಣದಲ್ಲಿ ಹಿಂದೂ ಸಂಘಟನೆ ಮೇಲೆ ಬುಲ್ಡೋಜರ್  ನುಗ್ಗಿಸಬೇಕು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹರಿದಾಡುತ್ತಿರುವ ಪೋಸ್ಟ್​​ ಸಂಬಂಧ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಹಳಷ್ಟು ಬಿಜೆಪಿ ಬೆಂಬಲಿಗರು ಹಂಚಿಕೊಂಡು ನನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
Published by:Mahmadrafik K
First published: