ಬಿಜೆಪಿ(BJP)ಯಲ್ಲಿ ಇನ್ನೂ ಸಚಿವ ಸ್ಥಾನಕ್ಕೆ ಲಾಬಿ ಜೋರಾಗಿದೆ. ಮುಖ್ಯಮಂತ್ರಿ ಬಸವಾರಜ ಬೊಮ್ಮಾಯಿ(CM Basavaraj Bommai) ಅವರು ಸಚಿವ ಸಂಪುಟ ವಿಸ್ತರಣೆ(Cabinet Expansion) ಮಾಡುತ್ತಾರೆ ಅನ್ನುವ ಗುಸು ಗುಸು ಕೇಳಿಬಂದಿತ್ತು. ಇದೀಗ ಎಂ.ಪಿ.ರೇಣುಕಾಚಾರ್ಯ(MP Renukacharya) ಸಚಿವ ಸಂಪುಟ ವಿಸ್ತರಣೆಗೆ ಪಟ್ಟು ಹಿಡಿದಿದ್ದಾರೆ. ಹೇಗಾದರೂ ಮಾಡಿ ಮಂತ್ರಿಯಾಗವ ಆಸೆಯನ್ನು ರೇಣುಕಾಚಾರ್ಯ ಇಟ್ಟುಕೊಂಡಿದ್ದಾರೆ. ಇಷ್ಟು ದಿನ ತೆರೆ ಮರೆಯಲ್ಲಿ ಸಚಿವಾಕಾಂಕ್ಷಿಗಳು ಲಾಬಿ ಮಾಡುತ್ತಿದ್ದಾರೆ. ಇದೀಗ ಹೊನ್ನಾಳಿ ಹೋರಿ ಗರಂ ಆಗಿದೆ. ಶತಾಯಗತಾಯ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ರೇಣುಕಾಚಾರ್ಯ. ಬಿಜೆಪಿ ಸರ್ಕಾರ ಬಂದಾಗಲೆಲ್ಲಾ ಅವರೇ ಸಚಿವರಾಗಬೇಕಾ? ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಪತನ ಆಗಲು ನಾನು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಷ್ಟು ಪ್ರಯತ್ನಿಸಿದ್ದೇವೆ. ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವಾ? ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ಪ್ರಶ್ನೆ ಮಾಡಿದ್ದಾರೆ. ಮೈತ್ರಿ ಸರ್ಕಾರ ಉರುಳಿಸಿ, ಬಿಜೆಪಿ ಸರ್ಕಾರ ಬರುವಲ್ಲಿ ನಮ್ಮ ಪಾಲು ಇದೆ. ಈಗ ಈ ರೀತಿ ಮಾಡುವುದು ಸರಿಯಲ್ಲ ಎಂದಿದ್ದಾರೆ. ತಮ್ಮ ಪಕ್ಷದ ಸಚಿವರುಗಳ ವಿರುದ್ಧವೇ ಗರಂ ಆಗಿದ್ದಾರೆ. ಫೋನ್ ರಿಸೀವ್ ಮಾಡಲ್ಲ. ತಮ್ಮ ಸಹಾಯಕರಿಂದ ಉತ್ತರ ನೀಡುತ್ತಾರೆ. ಇದು ನಿಜಕ್ಕೂ ಎಷ್ಟು ಮಟ್ಟಿಗೆ ಸರಿ ಹೇಳಿ ಎಂದು ಪ್ರಶ್ನೆ ಮಾಡಿದ್ದಾರೆ. ಶಾಸಕರು ಪತ್ರವನ್ನು ಕೊಟ್ಟರೆ ಸಚಿವರು ಉತ್ತರ ಕೊಡಬೇಕು. ಆದ್ರೆ ಸಚಿವರ ಆಪ್ತ ಸಹಾಯಕರು ಶರಾ ಬರೆಯುತ್ತಾರೆ. ಇಂಥ ಸಚಿವರು ಬೇಕಾ ಎಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರೇಣುಕಾಚಾಯ ಹರಿಹಾಯ್ದಿದ್ದಾರೆ.
ಸಂಪುಟ ವಿಸ್ತರಣೆ ಈಗ್ಲೇ ಮಾಡಲಿ ಎಂದ ರೇಣುಕಾಚಾರ್ಯ!
ಕೊರೋನಾ ಸಮಯದಲ್ಲಿ ರೇಣುಕಾಚಾರ್ಯ ಮಾಡಿದ ಕೆಲಸಗಳನ್ನು ಜನರು ಎಂದಿಗೂ ಮರೆಯುವುದಿಲ್ಲ. ಅವರನ್ನು ಮಂತ್ರಿ ಮಾಡಬೇಕೆಂಬ ಕೂಗು ಸಹ ಕೇಳಿಬಂದಿದೆ. ಇನ್ನೂ ಸಚಿವ ಸಂಪುಟದಲ್ಲಿ ಈಗ 4 ಸಚಿವ ಸ್ಥಾನಗಳು ಖಾಲಿ ಇವೆ. ಹಲವು ಬಾರಿ ಸಚಿವರಾದವರು ತಾವೇ ರಾಜೀನಾಮೆ ನೀಡಲಿ. ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಾರ್ಚ್ನಲ್ಲಿ ಸಂಪುಟ ವಿಸ್ತರಣೆ ಬೇಡ, ಈಗಲೇ ಮಾಡಲಿ. ಅಗತ್ಯ ಬಿದ್ದರೆ ನಾವು ದೆಹಲಿಗೂ ಹೋಗುತ್ತೇವೆ. ಹೊಸಬರಿಗೆ ಸಚಿವ ಸ್ಥಾನ ಸಿಗಬೇಕು ಎಂದು ಒಂದಾಗಿದ್ದೇವೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
ಇದನ್ನು ಓದಿ: ಉಮೇಶ್ ಕತ್ತಿ ನೇತೃತ್ವದಲ್ಲಿ ಗೌಪ್ಯಸಭೆ: ಜಾರಕಿಹೊಳಿ ಸಹೋದರರನ್ನು ಹೊರಗಿಟ್ಟು ನಡೆದ ಸಭೆಯ ರಹಸ್ಯ ಏನು?
ಸಚಿವರಾಗುವ ಯೋಗ್ಯತೆ ಇಲ್ಲವೇ? ಎಂದು ಪ್ರಶ್ನಿಸಿದ ರೇಣುಕಾಚಾರ್ಯ!
ಇನ್ನೂ ಒಂದು ಹಂತಕ್ಕೆ ಮುಂದೆ ಹೋಗಿ ನಮಗೆ ಸಚಿವರಾಗುವ ಯೋಗ್ಯತೆ ಇಲ್ಲವೇ? ನಮಗೆ ಸಚಿವ ಸ್ಥಾನ ಕೊಟ್ಟು ನೋಡಲಿ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಈ ಬಗ್ಗೆ ನಾವು ಶಾಸಕ ಯತ್ನಾಳ್ ಜೊತೆ ಮಾತನಾಡಿದ್ದೇನೆ. ತಡ ಮಾಡಿ ನಮಗೆ ಸಚಿವ ಸ್ಥಾನ ಕೊಟ್ಟರೆ ಯಾವುದೇ ಪ್ರಯೋಜನವಿಲ್ಲ ಎಂದಿದ್ದಾರೆ. ಬಿ.ವೈ. ವಿಜಯೇಂದ್ರ ಪರ ಬ್ಯಾಟಿಂಗ್ ಮಾಡಲ್ಲ. ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.
ಇದನ್ನು ಓದಿ: ಮುಂದುವರೆದ ಮಾಜಿ ಸಿಎಂಗಳ ವಾಕ್ ಪ್ರಹಾರ, ಸಿದ್ಧರಾಮಯ್ಯ ‘ಸುಳ್ಳಿನ ಸಿದ್ಧಪುರುಷ’ ಎಂದ ಎಚ್ಡಿಕೆ
5 ರಾಜ್ಯಗಳ ಚುನಾವಣೆ ಬಳಿಕ ಸಂಪುಟ ಪುನಾರಚನೆ ಸಾಧ್ಯತೆ!
ಒಬ್ಬೊಬ್ಬರಾಗಿ ಶಾಸಕರಿಂದ ಸಂಪುಟ ವಿಸ್ತರಣೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ. ಕೆಲವು ಶಾಸಕರಿಂದ ಮಾತ್ರ ಬಹಿರಂಗ ಹೇಳಿಕೆ ವ್ತಕ್ತವಾಗುತ್ತಿದೆ. ಸದ್ಯಕ್ಕೆ ಐದು ರಾಜ್ಯಗಳ ಚುನಾವಣೆ ಬಳಿಕ ಸಂಪುಟ ಪುನಾರಚನೆ ಸಾಧ್ಯತೆ ಇದೆ. ಈವರೆಗೂ ವಿಸ್ತರಣೆ ಅಥವಾ ಪುನಾರಚನೆ ಬಗ್ಗೆ ಸಿಎಂಗೆ ಯಾವುದೇ ಸಂದೇಶ ಬಂದಿಲ್ಲ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ