ಹಾಡಹಗಲೇ ಮಾರಕಾಸ್ತ್ರಗಳಿಂದ ಬೆದರಿಸಿ ಮನೆ ದರೋಡೆ; ಬೆಚ್ಚಿಬಿದ್ದ ಚನ್ನಪಟ್ಟಣ ನಗರ
ಗ್ರಾಮಾಂತರ ಠಾಣೆ ಪೊಲೀಸರು ಈ ಭಾಗದಲ್ಲಿ ಯಾವುದೇ ಬೀಟ್ ಮಾಡದಿರುವುದೇ ಈ ಕಳ್ಳತನಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರ (ಮಾರ್ಚ್ 08); ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಬೆದರಿಸಿ ಚಿನ್ನಾಭರಣಗಳನ್ನು ದರೋಡೆ ಮಾಡಿರುವ ಘಟನೆ ಚನ್ನಪಟ್ಟಣ ನಗರದ ಕೆ.ಎಚ್.ಬಿ ಕಾಲೋನಿಯಲ್ಲಿ ನಡೆದಿದೆ. ಈ ಘಟನೆ ಇದೀಗ ಇಡೀ ನಗರದ ಜನರನ್ನು ಬೆಚ್ಚಿಬೀಳಿಸಿದೆ.
ಇಂದು ಮಾಧ್ಯಾಹ್ನ ಶಿಕ್ಷಕ ಉತ್ತೇಶ್ ಅವರ ಮನೆಗೆ ಏಕಾಏಕಿ ನುಗ್ಗಿರುವ ದರೋಡೆಕೋರರು ತಾಯಿ ಮತ್ತು ಮಗಳ ಕುತ್ತಿಗೆಗೆ ಲಾಂಗ್ ಇಟ್ಟು ನಗದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಬಂದ ನಾಲ್ವರಿಂದ ಈ ದರೋಡೆ ನಡೆದಿದೆ ಎನ್ನಲಾಗುತ್ತಿದೆ.
ದರೋಡೆ ಕೋರರು 10 ಸಾವಿರ ನಗದು ಮತ್ತು 60 ಗ್ರಾಂ ಚೈನ್ ದೋಚಿ ಪರಾರಿಯಾಗಿದ್ದಾರೆ. ಈ ವೇಳೆ ಶಿಕ್ಷಕ ಉತ್ತೇಶ್ ಮನೆಯಲ್ಲಿ ಇರಲಿಲ್ಲ ಎಂದು ಹೇಳಲಾಗುತ್ತಿದೆ.
ಇನ್ನು ಗ್ರಾಮಾಂತರ ಠಾಣೆ ಪೊಲೀಸರು ಈ ಭಾಗದಲ್ಲಿ ಯಾವುದೇ ಬೀಟ್ ಮಾಡದಿರುವುದೇ ಈ ಕಳ್ಳತನಕ್ಕೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.