• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • R Dhruvanarayan: ಕಾಂಗ್ರೆಸ್‌ನ ಮುಂಚೂಣಿ ನಾಯಕ ಆರ್ ಧ್ರುವ ನಾರಾಯಣ್ ಅವರ ಬಗ್ಗೆ ನಿಮಗೆಷ್ಟು ಗೊತ್ತು?

R Dhruvanarayan: ಕಾಂಗ್ರೆಸ್‌ನ ಮುಂಚೂಣಿ ನಾಯಕ ಆರ್ ಧ್ರುವ ನಾರಾಯಣ್ ಅವರ ಬಗ್ಗೆ ನಿಮಗೆಷ್ಟು ಗೊತ್ತು?

ಆರ್ ಧ್ರುವ ನಾರಾಯಣ್

ಆರ್ ಧ್ರುವ ನಾರಾಯಣ್

ಸಂತೆ ಮಾರನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕೇವಲ ಒಂದು ಮತದಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಧ್ರುವನಾರಾಯಣ್ ಅವರು ಸೌಮ್ಯ ಸ್ವಭಾವದ ವ್ಯಕ್ತಿ ಎಂದೇ ಖ್ಯಾತಿ ಪಡೆದಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಲ್ಲಾ ತಯಾರಿ ಮಾಡಿದ್ದರು.

ಮುಂದೆ ಓದಿ ...
  • News18 Kannada
  • 5-MIN READ
  • Last Updated :
  • Mysore, India
  • Share this:

ಚಾಮರಾಜನಗರ: ಹಳೇ ಮೈಸೂರು ಭಾಗದ ಪ್ರಬಲ ನಾಯಕ, ಹಿರಿಯ ಕಾಂಗ್ರೆಸ್‌ ಮುಖಂಡ, (KPCC Leader) ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ್‌ (R Dhruvanarayan) (62) ಶನಿವಾರ ಮುಂಜಾನೆ 6.30ರ ಸುಮಾರಿಗೆ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಇರುವಾಗಲೇ ಧ್ರುವ ನಾರಾಯಣ್‌ ನಿಧನದಿಂದ (R Dhruva Narayan Death) ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ಆಘಾತ ಉಂಟಾಗಿದ್ದು, ಪ್ರಬಲ ದಲಿತ ಮುಖಂಡರಾಗಿಯೂ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದರು.


ಮೂಲತಃ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಯವರಾದ ಆರ್ ಧ್ರುವ ನಾರಾಯಣ್‌ 1961ರ ಜುಲೈ 31ರಂದು ಜನಿಸಿದ್ದರು. ಕಾರ್ಯಾಧ್ಯಕ್ಷರಾಗಿ ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಪ್ರಬಲವಾಗಿ ಸಂಘಟಿಸಿದ್ದ ಇವರು, ಎರಡು ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಈ ಹಿಂದೆ ಸಂತೆ ಮಾರನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕೇವಲ ಒಂದು ಮತದಿಂದ ಗೆದ್ದು ವಿಧಾನಸಭೆ ಪ್ರವೇಶಿಸಿದ್ದ ಧ್ರುವನಾರಾಯಣ್ ಅವರು ಸೌಮ್ಯ ಸ್ವಭಾವದ ವ್ಯಕ್ತಿ ಎಂದೇ ಖ್ಯಾತಿ ಪಡೆದಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಎಲ್ಲಾ ತಯಾರಿ ಮಾಡಿದ್ದರು. ಅವರಿಗೆ ಟಿಕೆಟ್‌ ಕೂಡ ಬಹುತೇಕ ಕನ್ಫರ್ಮ್ ಎಂದೇ ಹೇಳಲಾಗಿತ್ತು.


ಇದನ್ನೂ ಓದಿ: Dhruv Narayan: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವ ನಾರಾಯಣ ನಿಧನ


ರಾಜಕೀಯ ಹಿನ್ನೆಲೆಯ ವಿವರ


ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದ ಧ್ರುವನಾರಾಯಣ್ ಮೂಲತಃ ಕೃಷಿಕರು. 1983ರಲ್ಲಿ ಕಾಂಗ್ರೆಸ್‌ ಪಕ್ಷ ಸೇರಿದ್ದ ಧ್ರುವ ನಾರಾಯಣ್ ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ಅದರ ಫಲವಾಗಿ 2004ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು.


ಬಳಿಕ 1999ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಎ.ಆರ್. ಕೃಷ್ಣಮೂರ್ತಿ ಎದುರು ಸೋಲನುಭವಿಸಿದ್ದರು. ಬಳಿಕ 2004ರ ಚುನಾವಣೆಯಲ್ಲಿ ಪುನಃ ಅವರ ಎದುರು 1 ಮತದಿಂದ ಗೆಲುವು ಸಾಧಿಸಿದ್ದರು. ನಂತರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ ಅವರು 2009 ಹಾಗೂ 2014ರಲ್ಲಿ ಎ.ಆರ್. ಕೃಷ್ಣಮೂರ್ತಿ ಗೆದ್ದು ಸಂಸದರಾಗಿ ಆಯ್ಕೆಯಾಗಿದ್ದರು.


ಇದನ್ನೂ ಓದಿ: Siddaramaiah: ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಮಾಸ್ಟರ್ ಪ್ಲಾನ್, ಸಿದ್ದು ಸೋಲಿಸಲು ದಲಿತಾಸ್ತ್ರ ಪ್ರಯೋಗ!


ಕಾಂಗ್ರೆಸ್‌ ಕಾರ್ಯಕ್ರಮಗಳು ರದ್ದು


ಹಿರಿಯ ದಲಿತ ನಾಯಕ ಆರ್ ಧ್ರುವ ನಾರಾಯಣ್ ಅವರ ನಿಧನದ ಹಿನ್ನೆಲೆ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಲ್ಲ ಕಾರ್ಯಕ್ರಮಗಳನ್ನು ಬಿಟ್ಟು ಮೈಸೂರಿಗೆ ತೆರಳಿದ್ದಾರೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದಾರೆ. ಬೆಂಗಳೂರು ಮಾತ್ರವಲ್ಲದೇ ರಾಜ್ಯದ ಮೂಲೆ ಮೂಲೆಯಿಂದ ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಧ್ರಯವ ನಾರಾಯಣ್ ಅವರನ್ನು ನೋಡಲು ಮೈಸೂರಿನತ್ತ ಹೊರಟಿದ್ದಾರೆ.


ಸಂಸದ ಪ್ರತಾಪ್ ಸಿಂಹ ಭಾವುಕ


ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದ ಆರ್ ಧ್ರುವ ನಾರಾಯಣ್ ಅವರು ತಮ್ಮ ಪಕ್ಷ ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್‌ ಸೇರಿದಂತೆ ಎಲ್ಲ ಪಕ್ಷದವರಿಂದಲೂ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ಆರ್ ಧ್ರುವ ನಾರಾಯಣ್ ಅವರ ನಿಧನಕ್ಕೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೂಡ ಆಘಾತಕ್ಕೆ ಒಳಗಾಗಿದ್ದು, ‘ಎಂಥಾ ಒಳ್ಳೆಯ ವ್ಯಕ್ತಿಯನ್ನು ಕಿತ್ತುಕೊಂಡೆಯಲ್ಲಯಪ್ಪಾ ದೇವ್ರೇ’ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಇವರ ನಿಧನದ ಕುರಿತು ಖಾಸಗಿ ಮಾಧ್ಯಮದ ಜೊತೆ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ಆರ್ ಧ್ರುವ ನಾರಾಯಣ್ ಅವರು ಒಳ್ಳೆಯ ವ್ಯಕ್ತಿ. ನನಗೆ ಅಣ್ಣನಾಗಿ ಇದ್ದು ಅಭಿವೃದ್ಧಿ ವಿಚಾರದಲ್ಲಿ ಹಲವು ಸಲಹೆ ಮಾರ್ಗದರ್ಶನಗಳನ್ನು ನೀಡಿದ್ದಾರೆ. ಹಳೇ ಮೈಸೂರು ಅಭಿವೃದ್ಧಿಗೆ ಅವರ ಕೆಲಸ ಕಾರ್ಯಗಳು ಕೂಡ ಮಹತ್ವದ್ದು’ ಎಂದು ಹೇಳಿದ್ದಾರೆ.

Published by:Avinash K
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು