85ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕವಿ ಎಚ್​.ಎಸ್.ವೆಂಕಟೇಶ್ ಮೂರ್ತಿ ಆಯ್ಕೆ

ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ 2020ರ ಫೆಬ್ರವರಿ 5,6 ಮತ್ತು 7ರಂದು ಮೂರು ದಿನಗಳ ಕಾಲ ನಡೆಯಲಿದೆ.

HR Ramesh | news18-kannada
Updated:December 4, 2019, 1:32 PM IST
85ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕವಿ ಎಚ್​.ಎಸ್.ವೆಂಕಟೇಶ್ ಮೂರ್ತಿ ಆಯ್ಕೆ
ಎಚ್.ಎಸ್. ವೆಂಕಟೇಶ್ ಮೂರ್ತಿ
  • Share this:
ಬೆಂಗಳೂರು: 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಕವಿ ಎಚ್.ಎಸ್.ವೆಂಕಟೇಶ್ ಮೂರ್ತಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಮನು ಬಳಿಗಾರ್ ತಿಳಿಸಿದರು.

ಸಾಹಿತ್ಯ ಪರಿಷತ್ತಿನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಬಳಿಗಾರ್, ಕಾರ್ಯಕಾರಿ ಸಮಿತಿ ಸಭೆಯಯಲ್ಲಿ ಸಮ್ಮೇಳನಾಧ್ಯಕ್ಷರ ಸ್ಥಾನಕ್ಕೆ ಹಲವು ಹೆಸರುಗಳು ಚರ್ಚೆಗೆ ಬಂದವು. ಆದರೆ, ಸರ್ವಾನುಮತದಿಂದ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರನ್ನು ಮುಂದಿನ ಸಾಹಿತ್ಯ ಸಮ್ಮೇಳನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.

ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ 2020ರ ಫೆಬ್ರವರಿ 5,6 ಮತ್ತು 7ರಂದು ಮೂರು ದಿನಗಳ ಕಾಲ ನಡೆಯಲಿದೆ.

ಇದನ್ನು ಓದಿ: ಫೆ.5ರಿಂದ ಕಲಬುರಗಿಯ ವಿವಿ ಆವರಣದಲ್ಲಿ 85ನೇ ಕನ್ನಡ ಸಾಹಿತ್ಯ ಸಮ್ಮೇಳನ
First published: December 4, 2019, 1:32 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading