• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Hubballi Politics: ಕಾಂಗ್ರೆಸ್ ತಂತ್ರಕ್ಕೆ, ಬಿಜೆಪಿ ಪ್ರತಿತಂತ್ರ; ಕಮಲ ಹಿಡಿಯಲು ನಿರ್ಧರಿಸಿದ ನಾಯಕ

Hubballi Politics: ಕಾಂಗ್ರೆಸ್ ತಂತ್ರಕ್ಕೆ, ಬಿಜೆಪಿ ಪ್ರತಿತಂತ್ರ; ಕಮಲ ಹಿಡಿಯಲು ನಿರ್ಧರಿಸಿದ ನಾಯಕ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Operation Lotus: ಧಾರವಾಡ ಬಿಜೆಪಿ ಬಂಡಾಯ ಅಭ್ಯರ್ಥಿ ತವನಪ್ಪ ಅಷ್ಟಗಿ ಸೆಳೆದುಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಇದರ ಬೆನ್ನ ಹಿಂದೆಯೇ ಅಪರೇಷನ್​ಗೆ ಪ್ರತಿ ಆಪರೇಷನ್ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

  • Share this:

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಕಾಂಗ್ರೆಸ್ (Congress) ಸೇರ್ಪಡೆ ಬೆನ್ನಲ್ಲೇ ಉತ್ತರ ಕರ್ನಾಟಕ (North Karnataka) ಭಾಗದಲ್ಲಿ ಅಲರ್ಟ್​ ಆಗಿರುವ ಬಿಜೆಪಿ ಕಾರ್ಯಕರ್ತರು (BJP Activist) ಪಕ್ಷ ತೊರೆಯದಂತೆ ನೋಡಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಪಕ್ಷ ಸಂಘಟನೆಯಲ್ಲಿ ಬಿಜೆಪಿ ತೊಡಗಿಕೊಂಡಿದೆ. ಇದೀಗ ಸ್ಥಳೀಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ್ ಮಲಕಾರಿ (Basavaraj Malakari) ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Union Minister Pralhad Joshi) ಸಮ್ಮುಖದಲ್ಲಿ ಇಂದು ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ನಿಂದ ಟಿಕೆಟ್ ತಪ್ಪಿದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಇಂದು ಬಸವರಾಜ್ ಮಲಕಾರಿ ನಾಮಪತ್ರ ಹಿಂಪಡೆಯಲಿದ್ದಾರೆ.


ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಕೈ ಬಂಡಾಯ ಅಭ್ಯರ್ಥಿಯಾಗಿ ಬಸವರಾಜ್ ಮಲಕಾರಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಶಾಸಕ ಅಮೃತ್ ದೇಸಾಯಿ ಮನವೊಲಿಕೆ ನಂತರ ಬಸವರಾಜ್ ಮಲಕಾರಿ ನಾಮಪತ್ರ ಹಿಂಪಡೆಯಲಿದ್ದಾರೆ.


ಧಾರವಾಡ ಬಿಜೆಪಿ ಬಂಡಾಯ ಅಭ್ಯರ್ಥಿ ತವನಪ್ಪ ಅಷ್ಟಗಿ ಸೆಳೆದುಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿತ್ತು. ಇದರ ಬೆನ್ನ ಹಿಂದೆಯೇ ಅಪರೇಷನ್​ಗೆ ಪ್ರತಿ ಆಪರೇಷನ್ ಮಾಡುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ನಾಮಪತ್ರ ಹಿಂಪಡೆಯಲ್ಲ ಎಂದ  ಅಲ್ತಾಫ್ ಕಿತ್ತೂರ್


ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar)​ ಅವರಿಗೆ ಸ್ಥಳೀಯ ನಾಯಕರ ಬಂಡಾಯದ ಬಿಸಿ ತಾಗುತ್ತಿದೆ.


ಇದನ್ನೂ ಓದಿ: Katta Jagadish Naidu: ಹೆಬ್ಬಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಟ್ಟಾ ಜಗದೀಶ್ ನಾಯ್ಡು ಬಗ್ಗೆ ಗೊತ್ತಿರಬೇಕಾದ ಸಂಗತಿಗಳಿವು!


ಇಂದು ನಾಮಪತ್ರ ಸಲ್ಲಿಕೆಗೆ (Nomination) ಕೊನೆಯ ದಿನವಾಗಿದ್ದು, ಬಂಡಾಯ ಅಭ್ಯರ್ಥಿಗಳ ಮನವೊಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೆ ನಾಮಪತ್ರ ಹಿಂಪಡೆಯಲ್ಲ ಎಂದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಲ್ತಾಫ್ ಕಿತ್ತೂರ್ (Altaf Kittur) ಹೇಳಿದ್ದಾರೆ.

First published: