ಅಂತಾರಾಜ್ಯ ಸಂಚಾರ ಪುನರಾರಂಭಕ್ಕೆ ತಯಾರಿ; ಸುರಕ್ಷತಾ ಕ್ರಮಗಳೊಂದಿಗೆ ಬಸ್​​ಗಳ ಕಾರ್ಯಾಚರಣೆ

ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಿಂದ ಮಹಾರಾಷ್ಟ್ರಕ್ಕೆ 38, ಗೋವಾ 11, ತೆಲಂಗಾಣ12, ತಮಿಳುನಾಡು 2 ಹಾಗೂ ಆಂಧ್ರಪ್ರದೇಶಕ್ಕೆ 2 ಒಟ್ಟು 65 ಬಸ್ಸುಗಳು ಸಂಚರಿಸುತ್ತಿದ್ದವು. ಈಗ ಈ ಬಸ್​ಗಳ ಸೇವೆ ಮತ್ತೆ ಪುನರಾರಂಭಗೊಳ್ಳಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹುಬ್ಬಳ್ಳಿ (ಆ.26): ಹುಬ್ಬಳ್ಳಿಯಿಂದ ಅಂತರ್ ರಾಜ್ಯ ಬಸ್ಸುಗಳ ಸಂಚಾರವನ್ನು ಆರಂಭಿಸಲು ವಾಕರಸಾ ಸಂಸ್ಥೆ ಹುಬ್ಬಳ್ಳಿ ವಿಭಾಗದಲ್ಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.. ಈ ಬಗ್ಗೆ ನಿರ್ದೇಶನ ಬಂದ ಕೂಡಲೆ ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಸುರಕ್ಷತಾ ಕ್ರಮಗಳೊಂದಿಗೆ ಬಸ್ಸುಗಳ ಕಾರ್ಯಾಚರಣೆಯನ್ನು ಮರು ಪ್ರಾರಂಭ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ್ ತಿಳಿಸಿದ್ದಾರೆ.

ಲಾಕ್ ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಿಂದ ಮಹಾರಾಷ್ಟ್ರಕ್ಕೆ 38, ಗೋವಾ 11, ತೆಲಂಗಾಣ12, ತಮಿಳುನಾಡು 2 ಹಾಗೂ ಆಂಧ್ರಪ್ರದೇಶಕ್ಕೆ 2 ಒಟ್ಟು 65 ಬಸ್ಸುಗಳು ಸಂಚರಿಸುತ್ತಿದ್ದವು. ಮುಂಬೈ, ಶಿರಡಿ, ಪಿಂಪ್ರಿ, ಹೈದರಾಬಾದ್, ಚೆನ್ನೈ, ಸೋಲಾಪುರ ಮುಂತಾದ ಪ್ರಮುಖ ಸ್ಥಳಗಳಿಗೆ ವೋಲ್ವೊ, ಎಸಿ ಸ್ಲೀಪರ್, ನಾನ್ ಎಸಿ ಸ್ಲೀಪರ್ ಹಾಗೂ ರಾಜಹಂಸ  ಸೇರಿದಂತೆ 26 ಪ್ರತಿಷ್ಟಿತ ಐಶಾರಾಮಿ ಬಸ್ಸುಗಳು ಸಂಚರಿಸುತ್ತಿದ್ದವು, ಎಂದು ರಾಮನಗೌಡರ್ ಮಾಹಿತಿ ನೀಡಿದರು.

ಇದನ್ನೂ ಓದಿ: KM Shivalinge Gowda: ಜೆಡಿಎಸ್​​ ಶಾಸಕ ಶಿವಲಿಂಗೇಗೌಡಗೆ ಕೊರೋನಾ ಪಾಸಿಟಿವ್​​​

ಇವುಗಳೊಂದಿಗೆ ಮುಂಬೈ, ಪೂನಾ, ಬೊರಿವಿಲಿ, ಪಣಜಿ, ವಾಸ್ಕೋ, ಮಡಗಾಂವ, ಔರಂಗಾಬಾದ್, ಇಚಲಕರಂಜಿ, ಮೀರಜ, ಸೋಲಾಪುರ, ಬಾರ್ಶಿ, ಮಂತ್ರಾಲಯ, ಹೈದರಾಬಾದ್  ಮತ್ತಿತರ ಸ್ಥಳಗಳಿಗೆ 39 ವೇಗದೂತ ಬಸ್ಸುಗಳನ್ನು ಸಹಾ ಕಾರ್ಯಾಚರಣೆ ಮಾಡಲಾಗುತ್ತಿತ್ತು. ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ  ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಯಾವ ಮಾರ್ಗಗಳಲ್ಲಿ ಯಾವ ಬಗೆಯ ಮತ್ತು ಎಷ್ಟು ಬಸ್ಸುಗಳನ್ನು ಕಾರ್ಯಾಚರಣೆ ಮಾಡಬೇಕು ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂಬುದು ರಾಮನಗೌಡರ್ ಅವರ ಮಾತು.

ಧಾರವಾಡ : ಜಿಲ್ಲೆಯಲ್ಲಿ ಇಂದು  204  ಕೋವಿಡ್  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9666 ಕ್ಕೆ ಏರಿದೆ. ಇದುವರೆಗೆ 6977 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2408 ಪ್ರಕರಣಗಳು ಸಕ್ರಿಯವಾಗಿವೆ.  68 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 281 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
Published by:Rajesh Duggumane
First published: