Hubballi ರೈಲ್ವೆ ನಿಲ್ದಾಣದ Bomb Blast ಪ್ರಕರಣಕ್ಕೆ 2 ವರ್ಷ; ರೈಲ್ವೆ ಪೊಲೀಸರಿಂದ ಸಿ ರಿಪೋರ್ಟ್!

ಬಕೆಟ್ ನಲ್ಲಿ ಚಿಕ್ಕ ಚಿಕ್ಕದಾದ 8 ಬಾಕ್ಸ್‌ನಲ್ಲಿದ್ದ ನಿಂಬೆಹಣ್ಣಿನ ಗಾತ್ರದ ಬಾಂಬ್‍ಗಳ ಪೈಕಿ ಒಂದನ್ನು ಓಪನ್ ಮಾಡಲು ಪೇದೆ ಹಾಗೂ ರೈಲ್ವೆ ಮಾನೇಜರ್ ಮುಂದಾಗಿದ್ದರು. ಈ ವೇಳೆ ಪೊಲೀಸ್ ಪೇದೆಯ ಸೂಚನೆ ಮೇರೆಗೆ ಬಾಕ್ಸ್ ತೆಗೆದ ಹುಸೇನ್‍ಸಾಬ್ ನಿಂಬೆಹಣ್ಣು ಗಾತ್ರದ ವಸ್ತುವನ್ನು ಕಲ್ಲಿನಿಂದ ಒಡೆಯುತ್ತಿದ್ದಂತೆ ಬ್ಲಾಸ್ಟ್ ಆಗಿತ್ತು.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ ಕಚ್ಚಾ ಬಾಂಬ್​ಅನ್ನು ಬೇರೆಡೆಗೆ ಸಾಗಿಸುತ್ತಿರುವುದು (ಸಂಗ್ರಹ ಚಿತ್ರ)

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸಿಕ್ಕಿದ ಕಚ್ಚಾ ಬಾಂಬ್​ಅನ್ನು ಬೇರೆಡೆಗೆ ಸಾಗಿಸುತ್ತಿರುವುದು (ಸಂಗ್ರಹ ಚಿತ್ರ)

  • Share this:
ಹುಬ್ಬಳ್ಳಿ: ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ (Bomb Blast At Hibballi Railway Station) ನಡೆದು ಎರಡು ವರ್ಷಗಳಾದರೂ ತಾರ್ಕಿಕ ಅಂತ್ಯ ಕಂಡಿಲ್ಲ. ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬಾಂಬ್ ಸ್ಪೋಟ್ ಪ್ರಕರಣದಲ್ಲಿ ಒಂದೇ ಒಂದು ಸಾಕ್ಷಿ, ಪುರಾವೆಗಳು ಸಿಕ್ಕಿಲ್ಲ. ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪ್ರಕರಣ ತಾರ್ಕಿಕ ಅಂತ್ಯ ಕಾಣದೆ ಹಳ್ಳ ಹಿಡಿದಂತಾಗಿದೆ. ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂ (World Largest Railway Platform) ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ರೈಲು ನಿಲ್ದಾಣದ ನಾಡ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷ ಕಳೆದರೂ ಆರೋಪಿಗಳು ಪತ್ತೆಯಾಗಿಲ್ಲ. ಅಲ್ಲದೇ  ಪ್ರಕರಣವನ್ನು ತಾತ್ಕಾಲಿಕವಾಗಿ ಖುಲಾಸೆ ಮಾಡಲು ರೈಲ್ವೆ ಪೊಲೀಸರು ಮುಂದಾಗಿದ್ದಾರೆ. ಹುಬ್ಬಳ್ಳಿಯ 2 ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ (2nd JMFC Report) ‘ಸಿ ರಿಪೋರ್ಟ್’ (C Report) ಸಲ್ಲಿಸಿದ್ದಾರೆ.

2019ರ ಅಕ್ಟೋಬರ್ 21 ರಂದು ಹುಬ್ಬಳ್ಳಿ- ವಿಜಯವಾಡ ನಡುವೆ ಸಂಚರಿಸುವ ಅಮರಾವತಿ ಎಕ್ಸ್‌ಪ್ರೆಸ್ ರೈಲಿನ ಕೊನೆಯ ಬೋಗಿಯಲ್ಲಿ 8 ನಾಡ ಬಾಂಬ್‌ಗಳಿದ್ದ ಬಕೆಟ್ ಪತ್ತೆಯಾಗಿತ್ತು. ಇದರಲ್ಲಿದ್ದ ಒಂದು ಬಾಂಬ್ ಸ್ಫೋಟಗೊಂಡ ಪರಿಣಾಮ ಚಹಾ ಮಾರುವ ಕಾರ್ಮಿಕ ಹುಸೇನಸಾಬ ನಾಯಕವಾಲೆ ಎಂಬಾತನ ಬಲಗೈ ಛಿದ್ರಗೊಂಡಿತ್ತು. ಈ ಕುರಿತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಫೋಟಗೊಂಡ ಸ್ಥಳಕ್ಕೆ ಅಂದಿನ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಮತ್ತಿತರರು ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದರು. ಸುರೇಶ್ ಅಂಗಡಿ ನಿಧನರಾಗಿದ್ದು, ಬಸವರಾಜ ಬೊಮ್ಮಾಯಿ ಅವರೇ ಈಗ ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾರೆ. ಆದರೆ ಯಾವುದೇ ಸಾಕ್ಷಿ, ಪುರಾವೆ, ಆರೋಪಿಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ರೈಲ್ವೆ ಪೊಲೀಸರು 2 ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಿದ್ದಾರೆ.

ನಿಂಬೆಹಣ್ಣು ಗಾತ್ರದ ಎಂಟು ಕಚ್ಚಾ ಬಾಂಬ್​ಗಳು ಪತ್ತೆ

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿರುವ ಅಂಶ ಅಂದರೆ, ವಿಜಯವಾಡದಿಂದ ಹುಬ್ಬಳ್ಳಿಗೆ ಬಂದಿದ್ದ ಅಮರಾವತಿ ಎಕ್ಸ್‌ಪ್ರೆಸ್ ರೈಲು ನಾಲ್ಕನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿತ್ತು. ಎಲ್ಲ ಪ್ರಯಾಣಿಕರು ಇಳಿದ ಬಳಿಕ ಸ್ವಚ್ಛತಾ ಕಾರ್ಮಿಕನೊಬ್ಬನಿಗೆ 8 ಲಿಂಬೆಹಣ್ಣಿನ ಗಾತ್ರದ ಕಚ್ಚಾ ಬಾಂಬ್‌ಗಳಿದ್ದ ಬಕೆಟ್ ಸಿಕ್ಕಿತ್ತು. ಅದರ ಮೇಲೆ ‘ಪ್ರಕಾಶ ಅಭಿತ್ಕರ್, ಕೊಲ್ಲಾಪುರ ಎಂಎಲ್‌ಎ, ಗುರಗೋಟಿ, ‘ನೋ ಬಿಜೆಪಿ ನೋ ಆರ್‌ಎಸ್‌ಎಸ್. ಓನ್ಲಿ ಶಿವಸೇನಾ’ ಎಂದು ಬರೆಯಲಾಗಿತ್ತು.

ಇದನ್ನು ಓದಿ: ಕೋಲಾರದಲ್ಲಿ ದಾಖಲೆ ಬೆಲೆಗೆ Tomoto ಮಾರಾಟ; 15 ಕೆಜಿ 1400 ರೂ.ಗೆ ಬಿಕರಿಯಾದ ಕೆಂಪುಹಣ್ಣು!

ಕಲ್ಲಿನಿಂದ ಚಚ್ಚಿದಾಗ ಬಾಂಬ್ ಸ್ಫೋಟ!

ಸಂಶಯಾಸ್ಪದ ಬಕೆಟ್ ಕಂಡ ಕೂಡಲೇ ಕಾರ್ಮಿಕ ಸ್ಥಳದಲ್ಲಿದ್ದ ಆರ್‌ಪಿಎಫ್ ಪೇದೆ ರವಿಕುಮಾರ್ ರಾಠೋಡಗೆ ಮಾಹಿತಿ ನೀಡಿದ್ದ. ಈ ವೇಳೆ ಅನುಮಾನಾಸ್ಪದ ಬಕೆಟ್ ವಶಕ್ಕೆ ಪಡೆದಿದ್ದ ಪೇದೆ ರವಿಕುಮಾರ್ ರಾಥೋಡ್, ರೈಲ್ವೇ ಮ್ಯಾನೇಜರ್ ಕಚೇರಿಗೆ ಒಪ್ಪಿಸಿದ್ದ. ಬಕೆಟ್ ನಲ್ಲಿ ಚಿಕ್ಕ ಚಿಕ್ಕದಾದ 8 ಬಾಕ್ಸ್‌ನಲ್ಲಿದ್ದ ನಿಂಬೆಹಣ್ಣಿನ ಗಾತ್ರದ ಬಾಂಬ್‍ಗಳ ಪೈಕಿ ಒಂದನ್ನು ಓಪನ್ ಮಾಡಲು ಪೇದೆ ಹಾಗೂ ರೈಲ್ವೆ ಮಾನೇಜರ್ ಮುಂದಾಗಿದ್ದರು. ಈ ವೇಳೆ ಪೊಲೀಸ್ ಪೇದೆಯ ಸೂಚನೆ ಮೇರೆಗೆ ಬಾಕ್ಸ್ ತೆಗೆದ ಹುಸೇನ್‍ಸಾಬ್ ನಿಂಬೆಹಣ್ಣು ಗಾತ್ರದ ವಸ್ತುವನ್ನು ಕಲ್ಲಿನಿಂದ ಒಡೆಯುತ್ತಿದ್ದಂತೆ ಬ್ಲಾಸ್ಟ್ ಆಗಿತ್ತು. ಪರಿಣಾಮ ಹುಸೇನ್‍ಸಾಬ್ ಕೈ ಕಟ್ ಆಗಿತ್ತು. ರೈಲ್ವೆ ಇಲಾಖೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಈ ಕಾರಣಕ್ಕಾಗಿಯೇ ಸೂಕ್ತ ರೀತಿಯಲ್ಲಿ ತನಿಖೆ ನಡೆಯದೆ, ಪ್ರಕರಣ ತಾರ್ಕಿಕ ಅಂತ್ಯ ಕಂಡಿಲ್ಲ ಎಂದು ಹುಬ್ಬಳ್ಳಿ ಜನತೆ ಕಿಡಿಕಾರಿದ್ದಾರೆ. ಸೂಕ್ತ ರೀತಿಯಲ್ಲಿ ತನಿಖೆ ನಡೆಸುವ ಜೊತೆಗೆ, ಸಂತ್ರಸ್ತ ವ್ಯಕ್ತಿಗೆ ನ್ಯಾಯ ದೊರಕಿಸಿಕೊಡುವಂತೆಯೂ ಜನತೆ ಆಗ್ರಹಿಸಿದ್ದಾರೆ.

ವರದಿ - ಶಿವರಾಮ ಅಸುಂಡಿ
Published by:HR Ramesh
First published: