ಸಿದ್ಧರಾಮಯ್ಯ ಬರೀ ಟೀಕೆ ಮಾಡುವುದನ್ನು ಬಿಟ್ಟು ಸಲಹೆ ನೀಡಲಿ; ಸಚಿವ ಜಗದೀಶ ಶೆಟ್ಟರ್

ಕೊರೋನಾ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯರ ಈ ಪ್ರವೃತ್ತಿಯನ್ನು ಜನ ಸಹ ಇಷ್ಟಪಡುವುದಿಲ್ಲ

ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್

  • Share this:
ಹುಬ್ಬಳ್ಳಿ(ಏ. 23):  ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯ ಸಲಹೆ ಕೊಡಲಿ. ಅದನ್ನು ಬಿಟ್ಟು ಸದಾ ಟೀಕೆ ಮಾಡುವುದು ಸರಿಯಲ್ಲ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರ ನಡೆಸುವ ಸಂದರ್ಭದಲ್ಲಿ ಸಾಕಷ್ಟು ಒತ್ತಡಗಳು ಇರುತ್ತದೆ. ವಿರೋಧ ಪಕ್ಷದಲ್ಲಿದ್ದುಕೊಂಡು ಸರ್ಕಾರಕ್ಕೆ ಸಲಹೆ, ಸೂಚನೆಗಳನ್ನು ನೀಡಬೇಕು. ಅದನ್ನು ಬಿಟ್ಟು ಟೀಕೆ ಮಾಡುತ್ತಾ ಕೂರುವುದು ಸರಿಯಲ್ಲ. ಇದು ಟೀಕೆ ಮಾಡುವ ಕಾಲವೂ ಅಲ್ಲ. ಪರಿಸ್ಥಿತಿ ನಿಭಾಯಿಸುವಲ್ಲಿ ಸಾಕಷ್ಟು ಒತ್ತಡಗಳಿವೆ. ಈ ಸಂಬಂಧ ಅವರು ಸರ್ಕಾರಕ್ಕೆ ಸಲಹೆಗಳನ್ನು ನೀಡಲಿ ಎಂದು ತಿಳಿಸಿದರು

ಸರ್ಕಾರ ಸೋಂಕು ನಿರ್ವಹಣೆಗೆ ಕಾರ್ಯ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ತುಘಲಕ್ ಆಡಳಿತ ಎಂದು ಟೀಕಿಸೋದು ಸರಿಯಲ್ಲ. ಕೊರೋನಾ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯರ ಈ ಪ್ರವೃತ್ತಿಯನ್ನು ಜನ ಸಹ ಇಷ್ಟಪಡುವುದಿಲ್ಲ ಎಂದು ವಿಪಕ್ಷ ನಾಯಕರ ನಡೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

 ತಜ್ಞರ ಸಲಹಾ ಸಮಿತಿ ಶಿಫಾರಸ್ಸಿನಂತೆ ಸೆಮಿ ಲಾಕ್ ಡೌನ್:

ರಾಜ್ಯ ಸರ್ಕಾರ ಕೋವಿಡ್ ತಾಂತ್ರಿಕ ತಜ್ಞರ ಸಲಹಾ ಸಮಿತಿ ಶಿಫಾರಸ್ಸಿ ಮೇಲೆ ಕೋವಿಡ್ ಸರಪಳಿ ಮುರಿಯುವ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ರ್ಕಾರದ ನಿಯಮಗಳಿಂದ ಸಾರ್ವಜನಿಕರಿಗೆ ತೊಂದರೆ ಆಗಬಹದು.  ಇದನ್ನು ಸಹಿಸುವಂತೆ ಕೋರುತ್ತೇನೆ. ಕೊವೀಡ್ ಪ್ರಕರಣಗಳ ಸಂಖ್ಯೆ ದಿನ ನಿತ್ಯ ಹೆಚ್ಚಳವಾಗುತ್ತಿರುವುದರಿಂದ ಈ ಸರಪಳಿಯನ್ನು ಮುರಿಯಲು ಅನಿವಾರ್ಯವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಇದನ್ನು ಓದಿ: ಮಂಗಳೂರಿನಲ್ಲಿಯೂ ಮರುಕಳಿಸಿದ ಘಟನೆ; ಬೈಕ್​ಗೆ ನಾಯಿ ಕಟ್ಟಿ ಎಳೆದುಕೊಂಡು ಹೋದ ನೀಚರು

ಕಿಮ್ಸ್ ನಲ್ಲಿ ರೋಟರಿ ಕ್ಲಬ್ ವತಿಯಿಂದ ನಿರ್ಮಿಸಲಾದ ನೂತನ ಡಯಾಲಿಸಿಸ್ ಹಾಗೂ ಕಿಡ್ನಿ ಟ್ರಾನ್ಸ್ ಪ್ಲ್ಯಾಂಟ್ ಸೆಂಟರ್ ಘಟಕದ ಹಸ್ತಾಂತರ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಬೆಡ್‌ಗಳ ಸಮಸ್ಯೆ ಇಲ್ಲ. ಜಿಲ್ಲಾಧಿಕಾರಿಗಳು ಸ್ವತಃ ಖಾಸಗಿ ಆಸ್ಪತ್ರೆಗೆ ತೆರಳಿ ಪರಿಶೀಲನೆ ನಡೆಸಿ, ಕೋವಿಡ್ ರೋಗಿಗಳಿಗೆ ಕಾಯ್ದಿರಿಸಬೇಕಾದ ಬೆಡ್‌ಗಳ ಸಂಖ್ಯೆ ನಿರ್ಧರಿಸುವರು. ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ಖಾಸಗಿ ಆಸ್ಪತ್ರೆ ಹಿಂದೆ ಇದ್ದಂತ ಭೀತಿ ವಾತಾವರಣ ಇಲ್ಲ. ಕೋವಿಡ್ ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳು ಸಹಕಾರ ನೀಡುತ್ತಿವೆ. ಕೋವಿಡ್ ಚಿಕಿತ್ಸೆಗೆ ಈ ಹಿಂದೆ ಸರ್ಕಾರ ನಿಗದಿಪಡಿಸಿದ್ದ ದರವನ್ನೇ ಮುಂದುವರಿಸಲಾಗುವುದು ಎಂದರು

ಪಾಲಿಕೆ ವತಿಯಿಂದ ನಗರದಲ್ಲಿ ನೈರ್ಮಲೀಕರಣ ಕೈಗೊಳ್ಳಲು ಸೂಚನೆ ನೀಡಲಾಗುವುದು. ಕೋವಿಡ್ ಮಾರ್ಗ ಸೂಚಿಗಳ ಬಗ್ಗೆ ಹೆಚ್ಚು ಪ್ರಚಾರ ನೀಡಲಾಗುವುದು. ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಮೇಲೆ ಒತ್ತಡಗಳಿವೆ.‌ ವಿರೋಧ ಪಕ್ಷಗಳು ರಾಜಕೀಯ ಮಾತುಗಳನ್ನು ಆಡದೆ ರಚನಾತ್ಮಕ ಸಲಹೆಗಳನ್ನು ನೀಡಬೇಕು. ಸಚಿವನಾಗಿ ನನ್ನ ಸಹದ್ಯೋಗಿಗಳಿಗೆ ಕೋವಿಡ್ ನಿಯಮಗಳನ್ನು ಪಾಲಿಸಲು ತಿಳಿಸುತ್ತೇನೆ. ಚುನಾವಣೆಗಳಲ್ಲಿ ಸೀಮಿತ ಸಂಖ್ಯೆಯ ಜನರೊಂದಿಗೆ ಪ್ರಚಾರ ನಿರ್ವಹಣೆ ಮಾಡಬೇಕು. ಚುನಾವಣೆಗಿಂತ ಕೋವಿಡ್ ನಿರ್ವಹಣೆಗೆ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ. ಜಿಲ್ಲಾಧಿಕಾರಿಗಳಿಗೆ ಮದುವೆ ಪಾಸ್ ವಿತರಣೆ ನಿಯಮಗಳನ್ನು ಸರಳೀಕರಣಗೊಳಿಸಲು ಸೂಚಿಸಲಾಗುವುದು ಎಂದರು.

 ಡಯಾಲಿಸಿಸ್ ಹಾಗೂ ಕಿಡ್ನಿ ಟ್ರಾನ್ಸ್ ಪ್ಲ್ಯಾಂಟ್ ಸೆಂಟರ್ ಹಸ್ತಾಂತರ: 

ರೋಟರಿ ಕ್ಲಬ್ ವತಿಯಿಂದ 40 ಲಕ್ಷ ವೆಚ್ಚದಲ್ಲಿ, ಕಿಮ್ಸ್ ನಲ್ಲಿ ಅಳವಡಿಸಲಾಗಿರುವ ನೂತನ ಡಯಾಲಿಸಿಸ್ ಹಾಗೂ ಕಿಡ್ನಿ ಟ್ರಾನ್ಸ್ ಪ್ಲ್ಯಾಂಟ್ ಸೆಂಟರ್ ಘಟಕದ ಒಡಂಬಡಿಕೆ ಪತ್ರವನ್ನು ರೋಟರಿ ಕ್ಲಬ್ ಅಧ್ಯಕ್ಷ ಸುರೇಂದ್ರ ಪೂರ್ವಾಲ್ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅವರಿಗೆ ಹಸ್ತಾಂತರಿಸಿದರು.

(ವರದಿ - ಶಿವರಾಮ ಅಸುಂಡಿ)
Published by:Seema R
First published: