Hubli-Dharwad ಅವಳಿ ನಗರದಲ್ಲಿ FMCG ಕ್ಲಸ್ಟರ್ ಸ್ಥಾಪನೆ; ಸಚಿವ ಮುರುಗೇಶ್​ ನಿರಾಣಿ ಘೋಷಣೆ

ಹೊಸದಾಗಿ ಸ್ಥಾಪನೆಯಾಗುತ್ತಿರುವ FMCG ಕ್ಲಸ್ಟರ್​ಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳ ಜೊತೆಗೆ ರಾಜ್ಯ ಸರ್ಕಾರ ಸಾಕಷ್ಟು ರಿಯಾಯಿತಿಯನ್ನು ನೀಡಿದೆ ಎಂದು ನಿರಾಣಿ ತಿಳಿಸಿದ್ದಾರೆ.

ಸಚಿವ ಮುರುಗೇಶ್ ನಿರಾಣಿ

ಸಚಿವ ಮುರುಗೇಶ್ ನಿರಾಣಿ

  • Share this:
ಹುಬ್ಬಳ್ಳಿ (ಮಾ.26) : ಹುಬ್ಬಳ್ಳಿ-ಧಾರವಾಡ (Hubli Dharwad) ಅವಳಿ ನಗರದಲ್ಲಿ ತ್ವರಿತವಾಗಿ ಬಿಕರಿಯಾಗುವ ಗ್ರಾಹಕ ಉತ್ಪನ್ನಗಳ (FMCG) ಕ್ಲಸ್ಟರ್ ಸ್ಥಾಪನೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ (Murugesh Nirani) ತಿಳಿಸಿದ್ದಾರೆ.  ಟೈ ಹುಬ್ಬಳ್ಳಿ ಆಯೋಜಿಸಿದ್ದ ಟೈಕಾನ್ 2022ನಲ್ಲಿ ಮಾತನಾಡಿದ ಮುರುಗೇಶ ನಿರಾಣಿ, ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪನೆಯಾಗುತ್ತಿರುವುದರಿಂದ ಇಲ್ಲಿ ಭಾರೀ ಮೊತ್ತದ ಬಂಡವಾಳ (Investment) ಹೂಡಿಕೆಯಾಗಲಿದ್ದು, ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದರು.

ರಾಜ್ಯ ಸರ್ಕಾರ ಸಾಕಷ್ಟು ರಿಯಾಯಿತಿ ನೀಡಿದೆ

ಹೊಸದಾಗಿ ಸ್ಥಾಪನೆಯಾಗುತ್ತಿರುವ FMCG ಕ್ಲಸ್ಟರ್​ಗೆ ವಿದ್ಯುತ್, ನೀರು, ರಸ್ತೆ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳ ಜೊತೆಗೆ ರಾಜ್ಯ ಸರ್ಕಾರ ಸಾಕಷ್ಟು ರಿಯಾಯಿತಿಯನ್ನು ನೀಡಿದೆ ಎಂದರು. ಹುಬ್ಬಳ್ಳಿ ಬೆಳಗಾವಿ ಮಾರ್ಗ ಮಧ್ಯೆ ಕಿತ್ತೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಚರ್ಚೆಯ ಹಂತದಲ್ಲಿದೆ. ಖಾನಾಪುರ ರೈಲ್ವೆ ನಿಲ್ದಾಣದ ಬಳಿ ಕೈಗಾರಿಕೆಗಳ ಸ್ಥಾಪನೆಗೆ ಸಾವಿರ ಎಕರೆ ಭೂಸ್ವಾಧಿನ ಪ್ರಕ್ರಿಯೆ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ನಿರಾಣಿ ತಿಳಿಸಿದರು.

‘ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ’

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಮಂಡಿಸಿದ ಕೈಗಾರಿಕೆಗಳ ಉತ್ತೇಜನಕ್ಕೆ ಸಾಕಷ್ಟು ವಿಶೇಷ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಾಣವಾಗುತ್ತಿದ್ದು, ಬಂಡಾವಳ ಹೂಡಿಕೆಯಲ್ಲಿ ಕರ್ನಾಟಕವನ್ನು ಮೊದಲ ಸ್ಥಾನಕ್ಕೆ ಕೊಂಡಯ್ಯಲು ನಾವು ಸರ್ವ ಪ್ರಯತ್ನ ಮಾಡುತ್ತಿರುವುದಾಗಿ ಮಾಹಿತಿ ನೀಡಿದರು.

ನಮ್ಮ ಸರ್ಕಾರ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ದೊರಕಿಸುವುದು ಹಾಗೂ ಒಂದೇ ಬಾರಿಗೆ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡುವಉದ್ದೇಶದಿಂದ ಪ್ರಥಮ ಬಾರಿಗೆ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಈ ಸಮಿತಿ ರಚಿಸಲಾಗಿದೆ. ಇದರಿಂದ ಕಾಲಮಿತಿಯೊಳಗೆ ಯೋಜನೆಗಳು ಅನುಷ್ಠಾನವಾಗಲಿದೆ ಎಂದು ತಿಳಿಸಿದರು

ಇದನ್ನೂ ಓದಿ: Controversial Statement: ಮಾಧ್ಯಮಗಳ ಮೇಲೆ ಸಿದ್ದರಾಮಯ್ಯ ಫುಲ್ ಗರಂ, ಸಿದ್ದು ಹೇಳಿಕೆ ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ನಾಯಕರ ಹಿಂದೇಟು

ನವೆಂಬರ್‌ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ

ಸರ್ಕಾರ ಕೈಗಾರಿಕೋದ್ಯಮಕ್ಕೆ ಮಹತ್ವ ನೀಡಿದೆ. ನವೆಂಬರ್‌ನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯುವ ಹಿನ್ನೆಲೆಯಲ್ಲಿ ಎಲ್ಲಾ ಪೂರ್ವಭಾವಿ ಸಿದ್ಧತೆಗಳು ನಡೆಯುತ್ತಿವೆ. ದೊಡ್ಡ ಪ್ರಮಾಣದ ಬಂಡವಾಳ ಹೂಡಿಕೆಗೆ ಆಕರ್ಷಿಸುವ ಗುರಿಯನ್ನು ಹೊಂದಲಾಗಿದೆ ಎಂದು ಹೇಳಿದರು. ಕಳೆದ ಮೂರು ತ್ರೈ ಮಾಸಿಕಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದು ವಿದೇಶಿ ಹೂಡಿಕೆದಾರರಿಗೆ ನಮ್ಮ ರಾಜ್ಯದ ಮೇಲಿರುವ ವಿಶ್ವಾಸವನ್ನು ತೋರಿಸುತ್ತದೆ ಎಂದು ಸಚಿವ ನಿರಾಣಿ ಅವರು ಸಂತಸ ವ್ಯಕ್ತಪಡಿಸಿದರು.

ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಲ್ಲ

ಅಮಿತ್ ಶಾ ರಾಜ್ಯಕ್ಕೆ ಆಗಮಿಸೊ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆಗಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.  ಕೇಂದ್ರ ಗೃಹ ಸಚಿವ ಅಮಿತ್ ಶಾ ಬರ್ತಿರೋದು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿಯಾಗೋಕೆ, ಹೀಗಾಗಿ ರಾಜ್ಯ ಭೇಟಿ ವೇಳೆ ಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆ ನಡೆಯೋದಿಲ್ಲ, ಸಂಪುಟ ವಿಸ್ತರಣೆ ಚರ್ಚೆ ಏನಿದ್ದರೂ ದೆಹಲಿಯಲ್ಲಿ ನಡೆಯುತ್ತೆ. ನನ್ನ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆ ನೀಡಲು ತೆರಳುತ್ತಿದ್ದೇನೆ.

‘ನಾವೇ ನಂಬರ್ ಒನ್ ಆಗಿದ್ದೇವೆ’

ಬಜೆಟ್ ನಲ್ಲಿ ಘೋಷಣೆ ಯಾದ ಎಲ್ಲ ಯೋಜನೆಗಳ ಅನುಷ್ಠಾನ ವಿಶೇಷ ಸಮಿತಿ ರಚನೆ ಮಾಡಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದೇವೆ. ನವೆಂಬರ್ ನಲ್ಲಿ‌ ಜಾಗತಿಕ ಬಂಡಾಯ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಬಂಡವಾಳ ಹೂಡಿಕೆದಾರರು ಸಮಾವೇಶ ಅದರ ಸಿದ್ಧತೆ ಭರದಿಂದ ನಡೆದಿದೆ. ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ನಂಬರ್ ಒನ್ , ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಾವೇ ನಂಬರ್ ಒನ್ ಆಗಿದ್ದೇವೆ  ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಸೋಮವಾರದಿಂದ SSLC ಪರೀಕ್ಷೆ; ಕೋವಿಡ್​ ನಿಯಮ, ಸಮವಸ್ತ್ರ ಪಾಲನೆ ಕಡ್ಡಾಯ 

ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆ ಸಿಗಲಿದೆ

ಏಪ್ರಿಲ್ 01 ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದು, ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಏಪ್ರಿಲ್ 5 ರಂದು ನರೇಂದ್ರ ಮೋದಿ ರಾಜ್ಯಕ್ಕೆ‌ ಬರುವ ನಿರೀಕ್ಷೆ ಇದೆ. ಪ್ರಧಾನಮಂತ್ರಿಗಳು ರಾಜ್ಯಕ್ಕೆ ಭೇಟಿ‌ ನೀಡುವುದು ಅಧಿಕೃತ ಗೊಳ್ಳಬೇಕಿದೆ ಎಂದು ಮಾಧ್ಯಮಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Published by:Pavana HS
First published: