• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇರ್ ಸೆಂಟರ್; ನಾಳೆಯಿಂದ ವೀಕೆಂಡ್ ಸಂಪೂರ್ಣ ಲಾಕ್​ಡೌನ್

ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇರ್ ಸೆಂಟರ್; ನಾಳೆಯಿಂದ ವೀಕೆಂಡ್ ಸಂಪೂರ್ಣ ಲಾಕ್​ಡೌನ್

ಸಾಂದರ್ಭಿಕ ಚಿತ್ರ.

ಸಾಂದರ್ಭಿಕ ಚಿತ್ರ.

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಲಾಕ್ ಡೌನ್ ಮುಂದುವರಿದಲ್ಲಿ ಚೈನ್ ಲಿಂಕ್ ಕಟ್ ಆಗಿ, ಒಂದೆರಡು ವಾರದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರೋ ನಿರೀಕ್ಷೆ ಇಟ್ಟಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಜೋಶಿ ತಿಳಿಸಿದ್ದಾರೆ.

  • Share this:

ಹುಬ್ಬಳ್ಳಿ:  ಲಾಕ್​ಡೌನ್ ಜಾರಿಗೊಳಿಸಿದರೂ ಧಾರವಾಡ ಜಿಲ್ಲೆಯಲ್ಲಿ ನಿರೀಕ್ಷಿಕ ಫಲ ನೀಡಿಲ್ಲ. ಹೀಗಾಗಿ ನಾಳೆಯಿಂದ ಎರಡು ದಿನಗಳ ಕಾಲ ವೀಕೆಂಡ್ ಸಂಪೂರ್ಣ ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ತೀರ್ಮಾನಿಸಿದೆ. ಹಾಲು, ಮೆಡಿಸಿನ್ ಇತ್ಯಾದಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ. ಇದೇ ವೇಳೆ ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲು ನಿರ್ಧರಿಸಲಾಗಿದೆ.


ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇಂದ್ರ ಆರಂಭಿಸಲು ತೀರ್ಮಾನಿಸಿರೋದಾಗಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಧಾರವಾಡ ಜಿಲ್ಲೆ ನವಲಗುಂದದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ನಗರದ ಜೊತೆ ಗ್ರಾಮೀಣ ಪ್ರದೇಶದಲ್ಲಿಯೂ ಕೊರೋನಾ ವ್ಯಾಪ್ತಿಯಲ್ಲಿ ಹೆಚ್ಚಾಗ್ತಿದೆ. ಈಗಾಗಲೇ ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಕೇಂದ್ರ ಆರಂಭಿಸಲಾಗಿದೆ. ಹೋಬಳಿ ಮಟ್ಟದಲ್ಲಿಯೂ ಕೋವಿಡ್ ಕೇರ್ ಕೇಂದ್ರ ಆರಂಭಿಸಲು ತೀರ್ಮಾನಿಸಲಾಗಿದೆ. ನಾಳೆಯಿಂದ ಹುಬ್ಬಳ್ಳಿ - ಧಾರವಾಡಗಳಲ್ಲಿ ಸಂಪೂರ್ಣ ಲಾಕ್ ಡೌನ್ ಗೆ ತೀರ್ಮಾನಿಸಲಾಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಲಾಕ್ ಡೌನ್ ಗೆ ತೀರ್ಮಾನ ಮಾಡಲಾಗಿದೆ ಎಂದು ಜಗದೀಶ ಶೆಟ್ಟರ್ ತಿಳಿಸಿದ್ದಾರೆ.


ಸಿದ್ಧರಾಮಯ್ಯಗೆ ಜೋಶಿ ತಿರುಗೇಟು


ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯಗೆ ಕೋವಿಡ್ ಸಭೆ ಮಾಡಲು ನಿರಾಕರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಮರ್ಥನೆ ಮಾಡಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಮಾತನಾಡಿದ ಜೋಶಿ, ವಿರೋಧ ಪಕ್ಷದ ನಾಯಕರು ಸಭೆ ಮಾಡಿದರೆ ಸರ್ಕಾರದ ಹುಳುಕೆಲ್ಲ ಹೊರ ಬರುತ್ತೆ ಅನ್ನೊ ಸಿದ್ಧರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಯಾವ ಹುಳುಕು ಹೊರ ಬರೋದಿಲ್ಲ. ವಿರೋಧ ಪಕ್ಷದ ನಾಯಕರ ಸಭೆಗೆ ಅವಕಾಶ ನಿಡದಿರೋ ಸುತ್ತೋಲೆ ಈಗಿನದ್ದಲ್ಲ. ಸಿದ್ಧರಾಮಯ್ಯ ಸಿಎಂ ಇದ್ದಾಗಲೇ ಹೊರಡಿಸಿದಂತಹ ಸುತ್ತೋಲೆ ಆಗಿದೆ. ಈಗ ನಾವು ಅದನ್ನೇ ಪಾಲನೆ ಮಾಡ್ತಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.


ಇದನ್ನು ಓದಿ: ಆಸ್ಪತ್ರೆಗೆ ಬರುತ್ತಿದ್ದ ಕೊರೋನಾ ಲಸಿಕೆ ಕದ್ದು ಮನೆಯಲ್ಲಿ ಮಾರಾಟ ಮಾಡುತ್ತಿದ್ದ ವೈದ್ಯೆ ಬಂಧನ


ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಲಾಕ್ ಡೌನ್ ಮುಂದುವರಿದಲ್ಲಿ ಚೈನ್ ಲಿಂಕ್ ಕಟ್ ಆಗಿ, ಒಂದೆರಡು ವಾರದಲ್ಲಿ ಕೊರೋನಾ ನಿಯಂತ್ರಣಕ್ಕೆ ಬರೋ ನಿರೀಕ್ಷೆ ಇಟ್ಟಿದ್ದೇವೆ ಎಂದು ಇದೇ ಸಂದರ್ಭದಲ್ಲಿ ಜೋಶಿ ತಿಳಿಸಿದ್ದಾರೆ.


ಆಕ್ಸಿಜನ್ ಕಾನ್ಸಂಟ್ರೇಟರ್ ಹಸ್ತಾಂತರ


ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್​ಗಳ ಹಸ್ತಾಂತರ ಮಾಡಲಾಯಿತು. ಕೇಂದ್ರ ಗಣಿ, ಕಲ್ಲಿದ್ದಲು, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮತ್ತು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಹಸ್ತಾಂತರ ಮಾಡಿದರು. ನವಲಗುಂದಕ್ಕೆ 10 ಮತ್ತು ಅಣ್ಣಿಗೇರಿಗೆ 05 ಆಕ್ಸಿಜನ್ ಕಾನ್ಸಂಟ್ರೇಟರ್ ಹಸ್ತಾಂತರ ಮಾಡಲಾಯಿತು. ಅಂಜುಮಾನ್ ಇ ಇಸ್ಲಾಂ ಸಂಸ್ಥೆ ಕೊಡುಗೆಯಾಗಿ ನೀಡಿರುವ ಆ್ಯಂಬುಲೆನ್ಸ್ ಅನ್ನು ಸಹ ಉದ್ಘಾಟನೆ ಮಾಡಲಾಯಿತು. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕುಪ್ಪ, ಡಿಸಿ ನಿತೇಶ್ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.


ವರದಿ - ಶಿವರಾಮ ಅಸುಂಡಿ

First published: