• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • ಬೆಳಗಾವಿಯಲ್ಲಿ ನಾಳೆಯಿಂದ ಬೃಹತ್ ಸೇನಾ ರ‍್ಯಾಲಿ; ಸಾವಿರಾರು ಅಭ್ಯರ್ಥಿಗಳು ಭಾಗಿ

ಬೆಳಗಾವಿಯಲ್ಲಿ ನಾಳೆಯಿಂದ ಬೃಹತ್ ಸೇನಾ ರ‍್ಯಾಲಿ; ಸಾವಿರಾರು ಅಭ್ಯರ್ಥಿಗಳು ಭಾಗಿ

ಸೇನಾ ರ‍್ಯಾಲಿಯಲ್ಲಿ ಭಾಗವಹಿಸಲು ಸರತಿ ಸಾಲಿನಲ್ಲಿ ನಿಂತಿರುವ ಅಭ್ಯರ್ಥಿಗಳು

ಸೇನಾ ರ‍್ಯಾಲಿಯಲ್ಲಿ ಭಾಗವಹಿಸಲು ಸರತಿ ಸಾಲಿನಲ್ಲಿ ನಿಂತಿರುವ ಅಭ್ಯರ್ಥಿಗಳು

ಫೆಬ್ರವರಿ 4 ರಿಂದ ಫೆ 15ರ ವರೆಗೆ ರ‍್ಯಾಲಿ ನಡೆಯಲಿದ್ದು, ದಿನಕ್ಕೆ 5 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ವಿಟಿಯುನಲ್ಲಿ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಅಗ್ನಿ ಶಾಮಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ‌. ಥರ್ಮಲ್ ಸ್ಕ್ಯಾನರ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಲು ಸೂಚನೆ ನೀಡಲಾಗಿದೆ.

ಮುಂದೆ ಓದಿ ...
 • Share this:

  ಬೆಳಗಾವಿ(ಫೆ.3): ಬೆಳಗಾವಿಯಲ್ಲಿ ನಾಳೆಯಿಂದ ಸೇನಾ ರ‍್ಯಾಲಿ ನಡೆಯಲಿದ್ದು, ಸಾವಿರಾರು ಜನ ಅಭ್ಯರ್ಥಿಗಳು ಪಾಲ್ಗೊಳ್ಳಲಿದ್ದಾರೆ. ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕೋವಿಡ್ ಪರಿಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಮುಂದೆ ನೂರಾರು ಜನ ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಾಳೆಯಿಂದ ಬೆಳಗಾವಿಗೆ ಸಾವಿರಾರು ಯುವಕರು ರ‍್ಯಾಲಿಗೆ ಬರುವ  ಹಿನ್ನೆಲೆ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ.


  ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಮೈದಾನದಲ್ಲಿ ನಾಳೆಯಿಂದ ಸೇನಾ ನೇಮಕಾತಿ‌ ರ‍್ಯಾಲಿ ನಡೆಯಲಿದೆ. ಬೆಳಗಾವಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಿಂದ ಅಭ್ಯರ್ಥಿಗಳು ಬರಲಿದ್ದಾರೆ. ಸೈನ್ಯದ ನೇಮಕಾತಿ ಕಚೇರಿಯಿಂದ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿತ್ತು. 40 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ನೀಡಲಾಗಿದೆ‌.


  ಯಾದಗಿರಿ: ಮಗ ಮಾಡಿದ ಸಾಲಕ್ಕೆ ತಂದೆಯನ್ನು ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು..!


  ಫೆಬ್ರವರಿ 4 ರಿಂದ ಫೆ 15ರ ವರೆಗೆ ರ‍್ಯಾಲಿ ನಡೆಯಲಿದ್ದು, ದಿನಕ್ಕೆ 5 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ವಿಟಿಯುನಲ್ಲಿ ಪೊಲೀಸ್ ಸಿಬ್ಬಂದಿ, ಗೃಹ ರಕ್ಷಕ ದಳ, ಅಗ್ನಿ ಶಾಮಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ‌. ಥರ್ಮಲ್ ಸ್ಕ್ಯಾನರ್, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಮಾಡಲು ಸೂಚನೆ ನೀಡಲಾಗಿದೆ.


  ಬೆಳಗಾವಿ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ಸೌಲಭ್ಯ ಕಲ್ಪಿಸಬೇಕು. ಪೀರನವಾಡಿ ಕಲ್ಯಾಣ ಮಂಟಪದಲ್ಲಿ ಅಭ್ಯರ್ಥಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಪಾಲಿಕೆ ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ರ‍್ಯಾಲಿಯ ಸುತ್ತಿನಲ್ಲಿ 250 ಜನ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಪ್ರವೇಶ ಪತ್ರ ಪರಿಶೀಲನೆ ನಡೆಸಲಿದ್ದಾರೆ.


  ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಕೋವಿಡ್ ಪರೀಕ್ಷೆಯ ವರದಿ ಕಡ್ಡಾಯಗೊಳಿಸಲಾಗಿದೆ. ಬಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಪರೀಕ್ಷೆಗಾಗಿ ನೂರಾರು ಜನ ಸರದಿ ಸಾಲಿನಲ್ಲಿ ನಿಂತಿದ್ದಾರೆ. ಏಕಕಾಲದಲ್ಲಿ ನೂರಾರು ಅಭ್ಯರ್ಥಿಗಳು ಬಂದಿದ್ದು ಸಾಮಾಜಿಕ ಅಂತರ ಪಾಲನೆ ಆಗುತ್ತಿಲ್ಲ. ಸೇನಾ ರರ‍್ಯಾಲಿ ಹಿನ್ನೆಲೆಯಲ್ಲಿ ನಮಗೆ ಪ್ರತ್ಯೆಕ ವ್ಯವಸ್ಥೆ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.

  Published by:Latha CG
  First published: