ಬೆಂಗಳೂರು: ಕೆಲ ವರ್ಷಗಳ ಹಿಂದೆ ನಾಲ್ಕು ಮದುವೆಯಾಗಿ (Marriage) ಸುದ್ದಿಯಾಗಿದ್ದ ಗಂಡ (Husband) ಮತ್ತೆ ಸುದ್ದಿಯಲ್ಲಿದ್ದಾನೆ. ಈಗ ಮತ್ತೆ ಐದನೇ ಪತ್ನಿಗೆ (Wife) ಕಿರುಕುಳ ನೀಡಿದ್ದು, ಈ ಸಂಬಂಧ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ (RT Nagara, Bengaluru) ದೂರು ದಾಖಲಾಗಿದೆ. ಮೂರು ವರ್ಷಗಳ ಹಿಂದೆ ಐದನೇ ಮದುವೆಯಾದಾಗ ಈ ವ್ಯಕ್ತಿ ಸುದ್ದಿಯಲ್ಲಿದ್ದನು. ಬೆಂಗಳೂರಿನ ಆರ್.ಟಿ.ನಗರದ ನಿವಾಸಿ ವಜೀರ್ ಅಹಮದ್ ವಿರುದ್ಧ ಐದನೇ ಪತ್ನಿ ದೂರು ದಾಖಲಿಸಿದ್ದಾರೆ. ರ್ಯಾಡೋ ವಾಚ್ ತಂದುಕೊಡದಕ್ಕೆ ಪತ್ನಿಯ ಮುಖಕ್ಕೆ ಗುದ್ದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆ ನಡೆಸಿದ ಬಳಿಕ ಪತ್ನಿಯನ್ನು ಮಧ್ಯರಾತ್ರಿ ನಡುರಸ್ತೆಯಲ್ಲಿ ಬಿಟ್ಟು ಹೋಗಿದ್ದಾನೆ.
ಮೂರು ವರ್ಷಗಳ ಹಿಂದೆ ದುಬೈನಲ್ಲಿ ಕೆಲಸಕ್ಕೆ ಸೇರಿಕೊಳ್ಳುತ್ತೇನೆ ಎಂದು ಹೇಳಿದ್ದ ವಜೀರ್ ಐದನೇ ಮದುವೆಯಾಗಿದ್ದನು. ಮದುವೆ ಬಳಿಕ ಕೆಲಸಕ್ಕೆ ಸೇರಿಕೊಳ್ಳದೇ ಬೆಂಗಳೂರಿನಲ್ಲಿ ತಿರುಗಾಡಿಕೊಂಡಿದ್ದನು.
ನಾಲ್ಕು ಮದುವೆ ಬಗ್ಗೆ ಕೇಳಿದ್ದಕ್ಕೆ ಹಲ್ಲೆ
ಪ್ರತಿ ಹಬ್ಬಕ್ಕೂ ಪತ್ನಿಗೆ ತವರು ಮನೆಯಿಂದ ಗಿಫ್ಟ್ ತರುವಂತೆ ಕಿರುಕುಳ ನೀಡುತ್ತಿದ್ದನು. ಈ ಮೂಲಕ ವರದಕ್ಷಿಣೆ ಕಿರುಕುಳ ನೀಡತ್ತಿದ್ದನು ಎಂದು ದೂರಿನಲ್ಲಿ ದಾಖಲಾಗಿದೆ. ಈ ಹಿಂದೆ ನಡೆದ ನಾಲ್ಕು ಮದುವೆಗಳ ಬಗ್ಗೆ ಕೇಳಿದಾಗ ಪತ್ನಿ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಗೆ ಹಾಕಿದ್ದಾನೆ ಎಂದು ವಜೀರ್ ಪತ್ನಿ ಕಣ್ಣೀರು ಹಾಕಿದ್ದಾರೆ.
ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ವಜೀರ್ ಹಾಗೂ ಆತನ ಕುಟುಂಬಸ್ಥರ ವಿರುದ್ಧ 5ನೇ ಪತ್ನಿ ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನನ್ವಯ ಪೊಲೀಸರು ಐಪಿಸಿ 498A (ವರದಕ್ಷಿಣೆ ಕಿರುಕುಳ), ಐಪಿಸಿ 506 (ಜೀವ ಬೆದರಿಕೆ), ಐಪಿಸಿ ಸೆಕ್ಷನ್ 323 (ಮಾರಣಾಂತಿಕ ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: Crime News: ಭೂಮಿ ಅಗೆಯುವಾಗ ಚಿನ್ನದ ಗಟ್ಟಿ ಸಿಕ್ತು ಅಂತ ಉದ್ಯಮಿಗೆ 13 ಲಕ್ಷ ವಂಚನೆ! ಆರೋಪಿ ಅರೆಸ್ಟ್
ಮಹಿಳಾ ಗ್ರಾಮ ಲೆಕ್ಕಾಧಿಕಾರಿಯ ನಿಗೂಢ ಸಾವು
ಮದುವೆ ರಜೆ (Holiday) ಬಳಿಕ ಕೆಲಸಕ್ಕೆ ಬಂದಿದ್ದ ಮಹಿಳಾ ಗ್ರಾಮ ಲೆಕ್ಕಾಧಿಕಾರಿಯ (Village Accountant) ನಿಗೂಢ ಸಾವು ಆಗಿದೆ. ಮಹಿಳೆಯ (Woman) ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಮೈಸೂರು ಜಿಲ್ಲೆಯ ಹಣಸೂರು (Hanasuru, Mysuru) ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ (Bilikere Village) ನಡೆದಿದೆ.
25 ವರ್ಷದ ಕೃಷ್ಣಾಬಾಯಿ ತುಕಾರಾಂ ಪಡ್ಕೆ ಮೃತ ಮಹಿಳೆ. ಮೃತ ಕೃಷ್ಣಾಬಾಯಿ ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿ (Athani, Belagavi) ತಾಲೂಕಿನ ಎಸ್ಗಳ್ಳಿ ಗ್ರಾಮದವರು. ಒಂದು ತಿಂಗಳ ಹಿಂದಷ್ಟೇ ಕೃಷ್ಣಾಬಾಯಿ ಅವರ ಮದುವೆ (Marriage) ನಡೆದಿತ್ತು. ದೀರ್ಘ ರಜೆಯಲ್ಲಿದ್ದ ಕೃಷ್ಣಾಬಾಯಿ ನಾಲ್ಕು ದಿನಗಳ ಹಿಂದಷ್ಟೇ ಸೇವೆಗೆ ಹಿಂದಿರುಗಿದ್ದರು. ಇದೀಗ ಕೃಷ್ಣಾಬಾಯಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇನ್ನು ಕೃಷ್ಣಾಬಾಯಿ ಅವರ ಪತಿ ಸುಬಾಸ್ ಬೋಸ್ಲೆ ಹನೂರಿನ ಅರಣ್ಯ ಇಲಾಖೆಯ (Forest Department) ಫಾರೆಸ್ಟ್ ಗಾರ್ಡ್ (Forest Guard) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: Bengaluru: ಗೆಳೆಯನ ಭೇಟಿಗಾಗಿ ದುಬೈನಿಂದ ಬೆಂಗಳೂರಿಗೆ ಬಂದಿದ್ದ ಗಗನಸಖಿ ಸಾವು; ರಾತ್ರಿ ಇಬ್ಬರ ಮಧ್ಯೆ ನಡೆದಿದ್ದಾದ್ರೂ ಏನು?
ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲು
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಹೋದ್ಯೋಗಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಶವ ಪರೀಕ್ಷೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಪೊಲೀಸರು ಕೃಷ್ಣಾಬಾಯಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ. ಘಟನೆ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ