ನವದೆಹಲಿ: ಕರ್ನಾಟಕ ಸಿಎಂ ಪ್ರಹಸನಕ್ಕೆ ತೆರೆ ಬಿದ್ದಿದ್ದು, ಇಂದು ನಗುಮೊಗದಿಂದಲೇ ಹೊರ ಬಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPCC DK Shivakumar) ರಾಷ್ಟ್ರೀಯ ವಾಹಿನಿ ಇಂಡಿಯಾ ಟುಡೇಗೆ ಪ್ರತಿಕ್ರಿಯಿಸಿದರು. ಲೋಕಸಭಾ ಚುನಾವಣೆ (Loksabha Election) ಬರುತ್ತಿದೆ. ಕಾಂಗ್ರೆಸ್ ಅಧ್ಯಕ್ಷರು ಮತ್ತು ಗಾಂಧಿ ಕುಟುಂಬದ ಮಾತಿಗೆ ಒಪ್ಪಿಕೊಂಡಿದ್ದೇನೆ. ಪಕ್ಷದ ಹಿತಕ್ಕಾಗಿ ಹೈಕಮಾಂಡ್ ಫಾರ್ಮುಲಾ ಒಪ್ಪಿಕೊಂಡಿದ್ದೇನೆ. ನಮ್ಮ ಮೇಲೆ ಹೆಚ್ಚು ಜವಾಬ್ದಾರಿಗಳಿದ್ದು, ಕರ್ನಾಟಕದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ ಎಂದು ಹೇಳಿದರು.
ಮುಖಾಮುಖಿಯಾದ ಉಭಯ ನಾಯಕರು
ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿದ್ದರೂ ಅಂತರ ಕಾಯ್ದುಕೊಂಡಿದ್ದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಂದು ಕೆಸಿ ವೇಣುಗೋಪಾಲ್ ಮನೆಯಲ್ಲಿ ಮುಖಾಮುಖಿಯಾಗಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಆಗಿದ್ದು, ಅಧಿಕೃತ ಘೋಷಣೆ ಬಾಕಿಇದೆ.
ಶನಿವಾರ ಪ್ರಮಾಣ ವಚನ
ಶನಿವಾರ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜೊತೆಯಲ್ಲಿ ಸುಮಾರು 15 ಶಾಸಕರು ಪ್ರಮಾಣವಚನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.
ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣದ ಶಾಸಕರಿಗೆ ಸಮಾನವಾಗಿ ಸಚಿವ ಸ್ಥಾನ ಹಂಚಿಕೆಯಾಗಲಿದೆ ಎನ್ನಲಾಗಿದೆ.
ಇದನ್ನೂ ಓದಿ: Congress Government: ಸಚಿವರಿಗೂ 50:50 ಸೂತ್ರ ಅನ್ವಯ; ಸಂಪುಟ ಸೇರುವ ಸಂಭವನೀಯರ ಪಟ್ಟಿ ಹೀಗಿದೆ
ಡಿಕೆ ಶಿವಕುಮಾರ್ಗೆ ಪ್ರಬಲ ಖಾತೆ
ಡಿಸಿಎಂ ಸ್ಥಾನದ ಜೊತೆಗೆ ಎರಡು ಪ್ರಬಲ ಖಾತೆಗಳು ಡಿಕೆ ಶಿವಕುಮಾರ್ ಅವರಿಗೆ ಸಿಗಲಿದೆ ಎನ್ನಲಾಗಿದೆ. ಲೋಕಸಭಾ ಚುನಾವಣೆವರೆಗೂ ಡಿಕೆ ಶಿವಕುಮಾರ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. 2024ರ ಲೋಕಸಭಾ ಚುನಾವಣೆಯನ್ನು ರಾಜ್ಯದಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಸಲು ಕಾಂಗ್ರೆಸ್ ಸೂಚನೆ ನೀಡಿದೆಯಂತೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ