HOME » NEWS » State » I AM ALWAYS A HERO NOT A VILLAIN SAYS CONGRESS LEADER SIDDARAMAIAH IN KALBURGI SCT SAKLB

ನಾನು ಯಾವತ್ತಿದ್ರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ; ಸಿದ್ದರಾಮಯ್ಯ

ತಾವು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ಧರಾಮಯ್ಯ ಕಾರಣ ಎಂಬ ಹೆಚ್​ಡಿ ಕುಮಾರಸ್ವಾಮಿ ಅವರ ಪರೋಕ್ಷ ಆರೋಪಕ್ಕೆ ಕಿಡಿಕಾರಿರುವ ಸಿದ್ದರಾಮಯ್ಯ, ನಾನು ಯಾವತ್ತೂ ಹೀರೋನೇ, ವಿಲನ್ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

news18-kannada
Updated:October 26, 2020, 12:21 PM IST
ನಾನು ಯಾವತ್ತಿದ್ರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ; ಸಿದ್ದರಾಮಯ್ಯ
ಸಿದ್ದರಾಮಯ್ಯ
  • Share this:
ಕಲಬುರ್ಗಿ (ಅ. 26): ನಾನು ಯಾವತ್ತಿದ್ದರೂ ಹೀರೋನೇ, ವಿಲನ್ ಆಗೋಕೆ ಸಾಧ್ಯವೇ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಗುಡುಗಿದ್ದಾರೆ. ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಸಿದ್ಧರಾಮಯ್ಯ, ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಕುಳಿತರೆ ಸರ್ಕಾರ ನಡೆಸೋಕಾಗುತ್ತಾ? ಎನ್ನುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ತಾವು ಸಿಎಂ ಸ್ಥಾನದಿಂದ ಕೆಳಗಿಳಿಯಲು ಸಿದ್ಧರಾಮಯ್ಯ ಕಾರಣ ಎಂಬ ಹೆಚ್​ಡಿ ಕುಮಾರಸ್ವಾಮಿ ಅವರ ಪರೋಕ್ಷ ಆರೋಪಕ್ಕೆ ಕಿಡಿಕಾರಿರುವ ಸಿದ್ದರಾಮಯ್ಯ, ನಾನು ಕೊಡೋ ಹೇಳಿಕೆಯಿಂದ ಕುಮಾರಸ್ವಾಮಿಗೆ ಮುಜುಗರ ಆಗುತ್ತದೆ. ನಾನು ಯಾವತ್ತೂ ಹೀರೋನೇ, ವಿಲನ್ ಆಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ನೆರೆ ನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದ್ದು, ನೆರೆ ಕುರಿತ ಚರ್ಚೆಗಾಗಿ ವಿಶೇಷ ಅಧಿವೇಶನ ಕರೆಯುವಂತೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ನೆರೆ ಪೀಡಿತ ಪ್ರದೇಶಗಳ ಭೇಟಿಗೆಂದು ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಸಿದ್ಧರಾಮಯ್ಯ, ಪ್ರವಾಹ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ನಡೆದುಕೊಂಡಿದೆ. ಇದೇ ಕಾರಣಕ್ಕೆ ಸರ್ಕಾರಕ್ಕೆ ಧಮ್ ಇಲ್ಲ ಎಂದಿದ್ದೇನೆ. ಆದರೆ ಕೆಲವರು ಇದನ್ನು ದೈಹಿಕ ತಾಕತ್ತಿಗೆ ಹೋಲಿಸುತ್ತಿದ್ದಾರೆ. ಸಿದ್ದರಾಮಯ್ಯನಿಗಿಂತ ನಮಗೆ ನಾಲ್ಕು ಪಟ್ಟು ಧಮ್ ಇದೆ ಎಂದು ಹೇಳುತ್ತಿದ್ದಾರೆ. ನಾನು ದೈಹಿಕ ಸಾಮರ್ಥ್ಯದ ಬಗ್ಗೆ ಮಾತಾಡಿಲ್ಲ. ಇವರಿಗೆ ಪರಿಹಾರ ಕೊಡಿಸೋ ಧಮ್ ಇಲ್ಲ ಎಂದಿದ್ದೇನೆ. ಈಗಲೂ ಧಮ್ ಇದ್ರೆ ಕೂಡಲೇ ಕೇಂದ್ರ ಸರ್ಕಾರದಿಂದ ಪರಿಹಾರ ಕೊಡಿಸಲಿ. ನೆರೆ ನಿರ್ವಹಣೆಯ ಬಗ್ಗೆ ಚರ್ಚೆಗಾಗಿ ಸರ್ಕಾರ ವಿಶೇಷ ಅಧಿವೇಶನ ಕರೆಯಲಿ ಎಂದು ರಾಜ್ಯ ಸರ್ಕಾರಕ್ಕೆ ಸಿದ್ಧರಾಮಯ್ಯ ಸವಾಲು ಹಾಕಿದರು.

ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ:

ರಾಜ್ಯದ 23 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ರೈತರು, ಜನ ಸಂಕಷ್ಟದಲ್ಲಿದ್ದಾರೆ. ಉಸ್ತುವಾರಿ ಮಂತ್ರಿಗಳು ಜಿಲ್ಲೆಗಳಲ್ಲಿ ಬೀಡು ಬಿಟ್ಟು ಪರಿಹಾರ ಕೈಗೊಳ್ಳಬೇಕು. ಆದರೆ, ಕಲಬುರ್ಗಿ ಜಿಲ್ಲಾ ಉಸ್ತುವಾರಿ ಮಂತ್ರಿ ಮೇ ತಿಂಗಳಿನಿಂದ ಜಿಲ್ಲೆಯತ್ತ ತಲೆ ಹಾಕಿಲ್ಲ. ಕಂದಾಯ ಸಚಿವರು ಪಿಕ್​ನಿಕ್ ಬಂದಂತೆ ಕಲಬುರ್ಗಿಗೆ ಬಂದು ಹೋಗಿದ್ದಾರೆ. ಇನ್ನು ಸಿಎಂ ಮೇಲಿಂದ ಹಾರಾಟ ಮಾಡಿ ಹೋಗಿದ್ದಾರೆ. ಮೇಲಿಂದ ಅವರಿಗೆ ಏನು ಕಂಡಿತೋ ಗೊತ್ತಿಲ್ಲ. ಒಬ್ಬನೇ ಒಬ್ಬ ಸಂತ್ರಸ್ಥರ ಕಷ್ಟ ಸಿಎಂ ಆಲಿಸಿಲ್ಲ. ಸಿಎಂ ಮತ್ತು ಮಂತ್ರಿಗಳ ನಡೆಯಿಂದ ಅಧಿಕಾರಿಗಳಿಗೆ ಲಂಗು ಲಗಾಮು ಇಲ್ಲದಂತಾಗಿದೆ. ಪ್ರವಾಹದಿಂದ ಜನ ಸಂಕಷ್ಟದಲ್ಲಿದ್ರೂ ರಾಜ್ಯ ಮತ್ತು ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ. ನೆರೆ ಸಂಕಷ್ಟ ನಿಭಾಹಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕೇಂದ್ರ ಸರ್ಕಾರ ನಿರಂತರವಾಗಿ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಏನೇ ಕೇಳಿದರೂ ಯಡಿಯೂರಪ್ಪ ದುಡ್ಡಿಲ್ಲ ಅಂತ ಹೇಳ್ತಾರೆ. ಪ್ರವಾಹ, ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚೆ ಮಾಡಲು ವಿಶೇಷ ಅಧಿವೇಶನ ಕರೆಯಲು ನಾನು ಡಿಮ್ಯಾಂಡ್ ಮಾಡ್ತೇನೆ. ರಾಜ್ಯ ಸರ್ಕಾರ ಯಾವುದೆ ನೆಪ ಹೇಳದೆ ಕೂಡಲೆ ನೆರೆ, ಅತಿವೃಷ್ಟಿ ಪರಿಹಾರ ಕೊಡಬೇಕು. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಜಿಲ್ಲೆಯಲ್ಲಿ ಬಂದು ಕುಳಿತುಕೊಳ್ಳಬೇಕು. ನೆರೆ ಸಂತ್ರಸ್ತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಸಿದ್ದರಾಮಯ್ಯ ಆಗ್ರಹಿಸಿದರು.
Published by: Sushma Chakre
First published: October 26, 2020, 12:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories