ಸಿಎಂ ಸ್ಥಾನದ ಫ್ರಂಟ್ ರನ್ನರ್ ಅಲ್ವೇ ಅಲ್ಲ ಎಂದ ಜೋಶಿ - ದೆಹಲಿಗೆ ಹೋಗಿದ್ದು ಅದಕ್ಕಾಗಿ ಅಲ್ಲವೆಂದ ಶೆಟ್ಟರ್

ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ನಡುವೆ ಏನು ಮಾತುಕತೆ ನಡೆದಿದೆಯೋ ಗೊತ್ತಿಲ್ಲ. ಏನೇ ಮಾತುಕತೆ ನಡೆದಿದ್ದರು, ಯಡಿಯೂರಪ್ಪ ಹಾಗು ಕೇಂದ್ರ ನಾಯಕರಿಗೆ ಮಾತ್ರ ಗೊತ್ತು. ನನ್ನನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಬಗ್ಗೆ ಯಾರು ನನ್ನ ಜೊತೆ ಚರ್ಚೆ ಮಾಡಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ, ನರೇಂದ್ರ ಮೋದಿ‌ ಇದ್ದಾರೆ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

  • Share this:
ಹುಬ್ಬಳ್ಳಿ - ನಾಯಕತ್ವ ಬದಲಾವಣೆ ವಿಚಾರ ಬಿಜೆಪಿಯಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗೆ ಎಡೆಮಾಡಿಕೊಟ್ಟಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬಹುದು ಎಂಬ ಲೆಕ್ಕಾಚಾರ ನಡೆದಿರುವಾಗಲೇ ಯಾರು ಆ ಸ್ಥಾನ ಅಲಂಕರಿಸಲಿದ್ದಾರೆ ಎಂಬ ಚರ್ಚೆಯೂ ನಡೆದಿದೆ.

ಸಿಎಂ ರೇಸ್ ನಲ್ಲಿ ಕೇಳಿಬರುತ್ತಿರುವ ಹೆಸರುಗಳಲ್ಲಿ ಕೇಂದ್ರಸಚಿವ ಪ್ರಹ್ಲಾದ್ ಜೋಶಿ ಹೆಸರು ಒಂದಾಗಿದೆ. ಆದರೆ ಸಿಎಂ ಸ್ಥಾನದ ಫ್ರಂಟ್ ರನ್ನರ್ ತಾವಲ್ಲ ಎಂದು ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್ ಸಿಎಂ ಸ್ಥಾನದ ಹಿನ್ನೆಲೆಯಲ್ಲಿ ನಾನು ದೆಹಲಿಗೆ ಭೇಟಿ ನೀಡಿರಲಿಲ್ಲ ಎಂದಿದ್ದಾರೆ.

ಸಿಎಂ ಸ್ಥಾನಕ್ಕೆ ಯಾರು ಫ್ರಂಟ್ ಲೈನ್ ನಲ್ಲಿದ್ದಾರೂ, ಯಾರು ಬ್ಯಾಕ್ ನಲ್ಲಿದ್ದಾರೋ ನನಗೆ ಗೊತ್ತಿಲ್ಲ. ನಾನಂತೂ ಯಾವ ಲೈನ್ ಅಲ್ಲಿಯೂ ಇಲ್ಲ ಎಂದು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ಫ್ರಂಟ್ ರನ್ನರ್ ಅನ್ನೋ ಪ್ರಶ್ನೆಯೇ ಬರಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಜತೆ ಚರ್ಚೆ ನಡೆದಿದೆ ಅಂತ ಮಾಧ್ಯಮಗಳಿಂದ ತಿಳಿದಿದೆ. ಅದೇನು ಚರ್ಚೆ ನಡೆದಿದೆಯೋ ನನಗಂತೂ ಗೊತ್ತಿಲ್ಲ. ಹೀಗಾಗಿ ಫ್ರಂಟ್ ರನ್ನರ್ ಅಥವಾ ಬ್ಯಾಕ್ ರನ್ನರ್ ಅನ್ನೋ ಪ್ರಶ್ನೆ ಬರಲ್ಲ ಎಂದು ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಇದಕ್ಕೂ ಮುಂಚೆ ತಮ್ಮ ನಿವಾಸದಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ, ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ಮಧ್ಯೆ ಏನು ಮಾತುಕತೆ ನಡೆದಿದೆಯೋ ನನಗೆ ಗೊತ್ತಿಲ್ಲ. ನನ್ನನ್ನು ಸಿಎಂ ಮಾಡೋದಾಗಿ ಯಾರೂ ಹೇಳಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು. ರಾಜ್ಯ ರಾಜಕಾರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಮುಖ್ಯಮಂತ್ರಿಗಳು ಈಗಾಗಲೇ ತಮ್ಮ ಹೇಳಿಕೆ ನೀಡಿದ್ದಾರೆ.

ಯಡಿಯೂರಪ್ಪ ಮತ್ತು ಕೇಂದ್ರ ನಾಯಕರ ನಡುವೆ ಏನು ಮಾತುಕತೆ ನಡೆದಿದೆಯೋ ಗೊತ್ತಿಲ್ಲ. ಏನೇ ಮಾತುಕತೆ ನಡೆದಿದ್ದರು, ಯಡಿಯೂರಪ್ಪ ಹಾಗು ಕೇಂದ್ರ ನಾಯಕರಿಗೆ ಮಾತ್ರ ಗೊತ್ತು. ನನ್ನನ್ನು ಮುಖ್ಯಮಂತ್ರಿ ಮಾಡುತ್ತಾರೆ ಎಂಬ ಬಗ್ಗೆ ಯಾರು ನನ್ನ ಜೊತೆ ಚರ್ಚೆ ಮಾಡಿಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿದ್ದಾರೆ, ನರೇಂದ್ರ ಮೋದಿ‌ ಇದ್ದಾರೆ ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ.

ಮುಖ್ಯಮಂತ್ರಿ ನೀವು ಆಗ್ತೀರಾ..? ಎಂಬ ಪ್ರಶ್ನೆಗೆ ನೀವೆ ಉತ್ತರ ಹೇಳಬೇಕು ಎಂದು ನಕ್ಕು ಸುಮ್ಮನಾದ ಜೋಶಿ, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ತುಟಿಬಿಚ್ಚಲಿಲ್ಲ. ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸೂಕ್ತ ವ್ಯಕ್ತಿ ಅಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ದೆಹಲಿಗೆ ಹೋಗಿದ್ದು ಅದಕ್ಕಾಗಿ ಅಲ್ಲ ಎಂದ ಶೆಟ್ಟರ್ ....

ಸಿಎಂ ಬದಲಾವಣೆ ವಿಚಾರದಲ್ಲಿ ಈಗಾಗಲೇ ಯಡಿಯೂರಪ್ಪ ಹೇಳಿಕೆ‌ ನೀಡಿದ್ದು, ನಾನೇನು ಹೇಳಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಪಕ್ಷ ಹಾಗು ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ತಾರೆ ಎಂಬುದು ಸ್ಪಷ್ಟತೆ ಇಲ್ಲ. ಈಗ ಕಾದು ನೋಡಬೇಕಷ್ಟೇ, ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದರು.

ಇದನ್ನೂ ಓದಿ:  ICSE- ISE: ಐಸಿಎಸ್‌ಇ 10 ನೇ ತರಗತಿ, 12 ಫಲಿತಾಂಶ ಪ್ರಕಟ

ನಾನು ಯಾವುದೇ ರಾಜಕೀಯ ನಾಯಕರನ್ನು ಭೇಟಿ ಮಾಡಲು ದೆಹಲಿಗೆ ಹೋಗಿರಲಿಲ್ಲ. ಗುಜರಾತ್- ದೆಹಲಿ ಭೇಟಿ ಕೇವಲ ಇಲಾಖೆ ವಿಚಾರಕ್ಕೆ‌ ಹೋಗಿದ್ದು. ರಾಜ್​ನಾಥ್​ ಸಿಂಗ್ ಭೇಟಿ ಮಾಡಿದ್ದು ಸಹ ಇಲಾಖೆ ಕೆಲಸಕ್ಕೆ ಸಂಬಂಧಿಸಿ. ರಕ್ಷಣಾ ಇಲಾಖೆ ಕ್ಲಸ್ಟರ್ ನೀಡುವ ಕುರಿತು ಚರ್ಚಿಸಿದ್ದೇನೆ. ಸಂಪುಟದಿಂದ ಶೆಟ್ಟರ್ ಕೈಬಿಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ನಳಿನ್ ಕುಮಾರ್ ಕಟೀಲ್ ಈಗಾಗಲೇ ಆಡಿಯೋ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಆಡಿಯೋ ಬಗ್ಗೆ ತನಿಖೆ‌ ನಡೆಯುತ್ತಿದೆ, ಈಗಲೇ ನಾನು ಏನನ್ನೂ ಮಾತನಾಡುವುದಿಲ್ಲ ಎಂದರು.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by:HR Ramesh
First published: