ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ ಆರೋಪದ ಮೇಲೆ ಬಂಧನಕ್ಕೆ ಈಡಾಗಿರುವ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ನಾನು ಹೇಳಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬಾಂಬ್ ಇಟ್ಟ ಆದಿತ್ಯ ರಾವ್ ಹಿನ್ನೆಲೆಯನ್ನು ಕಲೆ ಹಾಕಲಾಗುತ್ತಿದೆ. ಬಾಂಬ್ ಪತ್ತೆಯಾದ ಬಳಿಕ ಸಿಸಿಟಿವಿ ದೃಶ್ಯ ಕಲೆ ಹಾಕಿ ಮೂರು ತಂಡಗಳನ್ನ ರಚನೆ ಮಾಡಲಾಗಿತ್ತು. ಆದಿತ್ಯರಾವ್ ಮನೆಯವರು ಹಲವು ವಿಚಾರಗಳನ್ನು ಆತನ ಬಗ್ಗೆ ಹೇಳಿದ್ದಾರೆ. ಆದರೆ ಯಾವುದೂ ಕೂಡ ಅಂತಿಮ ನಿರ್ಧಾರಕ್ಕೆ ಬಂದಿಲ್ಲಾ. ಸಮಗ್ರವಾದ ತನಿಖೆ ನಡೆಯದ ಹೊರತು ನಿಖರವಾಗಿ ಏನನ್ನೂ ಹೇಳುವುದಿಲ್ಲ ಎಂದು ಹೇಳಿದರು.
ಎಚ್.ಡಿ. ಕುಮಾರಸ್ವಾಮಿ ಎಫ್ಎಸ್ಎಲ್ ತಜ್ಞರಂತೆ ಮಾತನಾಡುತ್ತಿದ್ದಾರೆ. ಎಚ್‌ಡಿಕೆಗೆ ಸರ್ಟಿಫಿಕೇಟ್ ಕೊಡಲಿಕ್ಕೆ ಬರುತ್ತಾ? ತನಿಖೆಯಿಂದ ಎಲ್ಲವೂ ಹೊರಬರಬೇಕು. ತನಿಖೆ ನಡೆಯುತ್ತಿದೆ. ಬಂಧಿತ ಆರೋಪಿಯ ವಿಚಾರಣೆ ಬಳಿಕ ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ತಿಳಿಯಲಿದೆ. ಕುಮಾರಸ್ವಾಮಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಲ್ಲಿ ಕಾಂಗ್ರೆಸ್ ಜೊತೆ ಪೈಪೋಟಿಗಿಳಿದಿದ್ದಾರೆ. ಕುಮಾರಸ್ವಾಮಿ ಓಲೈಕೆ ರಾಜಕಾರಣ ನಿಲ್ಲಿಸಲಿ.
ಅವರು ಅಧಿಕಾರದಲ್ಲಿದ್ದಾಗ ನೇಮಕವಾದ ಅಧಿಕಾರಿಗಳೇ ಈಗ ತನಿಖೆ ನಡೆಸುತ್ತಿದ್ದಾರೆ ಎಂದು ಎಚ್‌ಡಿಕೆಗೆ ತಿರುಗೇಟು ನೀಡಿದರು.
ಇದನ್ನು ಓದಿ: ಅಣ್ಣನ ಬಗ್ಗೆ ನಮಗೂ ಭಯವಿದೆ; ಮಂಗಳೂರು ಬಾಂಬರ್ ಆದಿತ್ಯ ರಾವ್ ತಮ್ಮ ಅಕ್ಷತ್ ರಾವ್ ಹೇಳಿದ್ದೇನು?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ