ನೆರೆ ಸಂತ್ರಸ್ತರಿಗೆ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್

ಘಟಪ್ರಭಾ ನದಿ ಪ್ರವಾಹಕ್ಕೆ ನಲುಗಿದ ಗೋಕಾಕ್ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಅವರು, ನಿರಾಶ್ರಿತರಿಗೆ ಪುನಃ ಬದುಕು ಕಟ್ಟಿಕೊಡುವುದಾಗಿ ಭರವಸೆ ನೀಡಿದರು.

G Hareeshkumar | news18
Updated:August 29, 2019, 4:07 PM IST
ನೆರೆ ಸಂತ್ರಸ್ತರಿಗೆ ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ : ಲಕ್ಷ್ಮೀ ಹೆಬ್ಬಾಳ್ಕರ್
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
  • News18
  • Last Updated: August 29, 2019, 4:07 PM IST
  • Share this:
ಬೆಳಗಾವಿ (ಆ.29) : ನೆರೆ ಹಾವಳಿಯಿಂದ ಬದುಕು ಕಳೆದುಕೊಂಡಿರುವ ಸಂತ್ರಸ್ತರಿಗೆ  ಭಿಕ್ಷೆ ಬೇಡಿ ಕೇಂದ್ರ ಸರ್ಕಾರದ ಕಣ್ಣು ತೆರೆಸುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್  ಹೇಳಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್‌ ಆಗಿದೆ.

ಪ್ರವಾಹ ಸಂತ್ರಸ್ತರಿಗೆ ಕೇಂದ್ರ ಸರ್ಕಾರದಿಂದ ಒಂದು ರೂಪಾಯಿ ಸಿಕ್ಕಿಲ್ಲ. ಬರಗಾಲ ಹಿನ್ನೆಲೆ ನೆರೆ ಪರಿಹಾರಕ್ಕಾಗಿ ಕೇಂದ್ರ ಸರಕಾರ ನಯಾ ಪೈಸೆ ಸಹ ಬಿಡುಗಡೆ ಮಾಡುತ್ತಿಲ್ಲ. ಬರಗಾಲ ಹಿನ್ನೆಲೆ ಹೆಚ್.ಡಿ ಕುಮಾರಸ್ವಾಮಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರು. ಹೀಗಾಗಿ ಬರ ಪರಿಹಾರ ಬಿಡುಗಡೆ ಮಾಡಲಾಗಿದೆ. ಅದರಲ್ಲಿ 10 ಸಾವಿರ ಕೊಟ್ಟು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ಕೇಂದ್ರ ಸರಕಾರದ ಕಣ್ಣು ತೆರೆಸಲು ನಾನು ಸಂತ್ರಸ್ತರಿಗಾಗಿ ಬೆಂಗಳೂರಿನಲ್ಲಿ ಭಿಕ್ಷೆ ಎತ್ತಲು ತೀರ್ಮಾನಿಸಿದ್ದೇನೆ. ಘಟಪ್ರಭಾ ನದಿ ಪ್ರವಾಹಕ್ಕೆ ನಲುಗಿದ ಗೋಕಾಕ್ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಅವರು, ನಿರಾಶ್ರಿತರಿಗೆ ಪುನಃ ಬದುಕು ಕಟ್ಟಿಕೊಡುವುದಾಗಿ ಭರವಸೆ ನೀಡಿದರು.

ಇದನ್ನೂ ಓದಿ :  ಸಿಎಂ ದೆಹಲಿಗೆ ಹೋಗೋದು, ಬರೋದು ಬಿಟ್ಟರೆ, ಕೇಂದ್ರದಿಂದ ಒಂದು ಪೈಸೆ ತಂದಿಲ್ಲ; ಸಿದ್ದರಾಮಯ್ಯ ವಾಗ್ದಾಳಿ

ಸಾಲ ಮರುಪಾವತಿಸಲು ಯಾರಾದರೂ ನಿಮ್ಮನ್ನ ಒತ್ತಾಯಿಸಿದರೇ ಅವರ ಹೆಸರು ಬರೆದಿಟ್ಟು ವಿಷ ಕುಡಿಯುತ್ತೇನೆ ಎಂದು ಹೇಳಿ ಎಂದು ನೆರೆ ಸಂತ್ರಸ್ತರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಚೋದನೆ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ.

First published:August 29, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ