ಹುಬ್ಬಳ್ಳಿ: ಯಾವುದೇ ಸಂದರ್ಭದಲ್ಲಿ ರಾಜಕೀಯ ನಿವೃತ್ತಿ (Political Retirement) ಹೊಂದೋಕೆ ಸಿದ್ಧ. ಆದ್ರೆ ಗೌರವಯುತವಾಗಿ ಹೊರ ಹೋಗಬೇಕು. ಈ ರೀತಿಯಾಗಿ ಹೋಗೋದಲ್ಲ ಎಂದು ಬಿಜೆಪಿ ಹೈಕಮಾಂಡ್ (BJP High Command) ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಮತ್ತೊಮ್ಮೆ ಅಸಮಾಧಾನ ಹೊರ ಹಾಕಿದ್ದಾರೆ. ದೆಹಲಿಗೆ ತೆರಲುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ರಾಷ್ಟ್ರೀಯ ಅಧ್ಯಕ್ಷರು ಪೋನ್ ಮಾಡಿದ್ದಕ್ಕೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ಪಾಸಿಟಿವ್ ಹೋಪ್‌ನಲ್ಲಿ ನಾನಿದ್ದೇನೆ. ಚರ್ಚೆ ಮಾಡೋಣ ಬನ್ನಿ ಎಂದು ಹೇಳಿದ್ದಾರೆ. ಪಕ್ಷದ ದೃಷ್ಟಿಯಿಂದ ಎಲ್ಲಾ ಒಳ್ಳೆಯದು ಆಗುತ್ತದೆ ಎಂದು ಹೋಗುತ್ತಿರುವೆ ಎಂದು ಹೇಳಿದರು.
ಯಡಿಯೂರಪ್ಪನವರನ್ನ ಭೇಟಿಯಾಗಬೇಕಿತ್ತು. ವಿಮಾನ ತಡವಾಗಿದ್ದರಿಂದ ನೇರವಾಗಿ ದೆಹಲಿಗೆ ಹೋಗುತ್ತಿದ್ದೇನೆ. ದೆಹಲಿಗೆ ಹೋಗಿ ಬಂದ ನಂತರ ಯಡಿಯೂರಪ್ಪ ಅವರನ್ನು ಭೇಟಿ ಮಾಡುತ್ತೇನೆ ಎಂದು ತಿಳಿಸಿದರು.
ನಿವೃತ್ತಿ ಘೋಷಣೆ ಮಾಡಲು ಸಿದ್ಧ
ಯಾವುದೇ ಸ್ಥಾನಮಾನ ಇಲ್ಲದೇ ಎರಡೂ ವರ್ಷದಿಂದ ಪಕ್ಷದಲ್ಲಿದ್ದೇನೆ. ಯಾವುದೇ ಅಧಿಕಾರ ಇಲ್ಲದೆ ಪಕ್ಷ ಸಂಘಟನೆ ಮಾಡಿದ್ದೇನೆ. ಎಷ್ಟೋ ಕೆಲಸಗಳನ್ನ ನಮ್ಮ ಮಂತ್ರಿಗಳ ಮುಖಾಂತರ ಮಾಡಿಸಿದ್ದೇನೆ ಎಂದರು.
ಇದನ್ನೂ ಓದಿ: Jagadish Shettar: ಮೊದಲ ಪಟ್ಟಿಯಲ್ಲಿ ಮಾಜಿ ಸಿಎಂಗೆ ಶಾಕ್; ದೆಹಲಿಯಿಂದ ಬುಲಾವ್!
ವರಿಷ್ಠರ ಬಳಿಕ ನಿರ್ಧಾರ ಪ್ರಕಟ
ರಾಷ್ಟ್ರೀಯ ಅಧ್ಯಕ್ಷರನ್ನ ಭೇಟಿಯಾದ ನಂತರ ನನ್ನ ನಿರ್ಧಾರ ಪ್ರಕಟಿಸುತ್ತೇನೆ. ವರಿಷ್ಠರ ಭೇಟಿ ನಂತರ ಸಕಾರಾತ್ಮಕ ಸ್ಪಂದನೆ ಸಿಗುವ ನಿರೀಕ್ಷೆ ಇದೆ ಎಂದು ಹೇಳಿ ಜಗದೀಶ್ ಶೆಟ್ಟರ್ ದೆಹಲಿಯತ್ತ ಪ್ರಯಾಣ ಬೆಳೆಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ