ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Assembly Elections) ಕೇವಲ ಮೂರು ದಿನ ಬಾಕಿ ಉಳಿದಿದೆ. ಈ ನಡುವೆ ಐಟಿ (IT) ದಾಳಿಗಳು ಮುಂದುವರೆದಿದ್ದು, ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ (SM Krishna) ಸಹೋದರಿ (Sister) ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್.ಎಂ ಸುನಿತಾ ನಿವಾಸದ ಮೇಲೆ ದಾಳಿ ಮಾಡಿರುವ ಸುಮಾರು ಎಂಟು ಅಧಿಕಾರಿಗಳ ತಂಡ (Officers Team) ಪರಿಶೀಲನೆ ನಡೆಸಿದೆ. ಬೆಂಗಳೂರಿನ ಕೋರಮಂಗಲ (Koramangala) ಫಸ್ಟ್ ಬ್ಲಾಕ್ ನಲ್ಲಿರುವ ಎಸ್.ಎಂ. ಕೃಷ್ಣ ಸಹೋದರಿ ಅವರ ಬಾಗ್ಮನೆ ನಿವಾಸ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೂ ಐಟಿ ದಾಳಿ
ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಐಟಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದು, ಬೆಂಗಳೂರಿನಲ್ಲಿಯೂ ಐಟಿ ದಾಳಿಗಳು ಮುಂದುವರೆದಿದೆ. ಉಳಿದಂತೆ ರಿಯಲ್ ಎಸ್ಟೇಟ್ ಉದ್ಯಮಿ ಹರಿರೆಡ್ಡಿ ಎಂಬ ವ್ಯಕ್ತಿ ಮನೆಯ ಮೇಲೂ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಬೆಂಗಳೂರಿನ ಕಾಮಾಕ್ಯ ಬಳಿ ಇರುವ ಉದ್ಯಮಿಯ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂರು ಇನೋವಾ ಕಾರುಗಳಲ್ಲಿ ಅಧಿಕಾರಿಗಳು ಆಗಮಿಸಿದ್ದು, ನಿನ್ನೆ ಸಂಜೆಯಿಂದಲೇ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ: Karnataka Polls: ಕಾಂಗ್ರೆಸ್ ನಾಯಕರ ಅತ್ಯಾಪ್ತರ ಮನೆಗಳ ಮೇಲೆ ಐಟಿ ದಾಳಿ; ಕೋಟಿ ಕೋಟಿ ಹಣ ಪತ್ತೆ
ಉಳಿದಂತೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉದಯ್ ಆಪ್ತ ಸುರೇಶ್ ಬಾಬು ಎಂಬುವರ ಮನೆಯಲ್ಲಿ ಎರಡು ಕೋಟಿ ನಗದು ಹಣ ಪತ್ತೆಯಾಗಿದೆ. ಚುನಾವಣಾ ಅಧಿಕಾರಿಗಳು 2 ಕೋಟಿ ಹಣ ಜಪ್ತಿ ಮಾಡಿದ್ದು, ತಪಾಸಣೆ ಮುಂದುವರಿದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಕಾಂಗ್ರೆಸ್ ಮುಖಂಡರಾದ ರಾಜು ಬೋರಾ ಹಾಗೂ ನಗರಸಭೆ ಮಾಜಿ ಅಧ್ಯಕ್ಷ, ಉದ್ಯಮಿ ವೆಂಕಟೇಶ್ ಸಾಕಾ ಮನೆಗಳ ಮನೆಗಳ ಮೇಲೆ ದಾಳಿ ನಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ