ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕವಾಗಲಿ; ಸೋನಿಯಾಗೆ ಸಿದ್ದರಾಮಯ್ಯ ಪತ್ರ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು ಮುಂದಿನ ಅಧ್ಯಕ್ಷರು ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಕಾಡಿದೆ. ಹೀಗಿರುವಾಗ ರಾಹುಲ್ ಗಾಂಧಿ ಪರ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದ್ದಾರೆ.
ಬೆಂಗಳೂರು (ಆಗಸ್ಟ್ 24): ನಾಯಕತ್ವ ಬದಲಾವಣೆಯ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಮಧ್ಯಂತರ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಅವರು ಇಂದುಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿಯಲ್ಲಿದ್ದಾರೆ ಎನ್ನುವ ಮಾತು ಕೇಳಿ ಬಂದಿದೆ. ಈ ಬೆನ್ನಲ್ಲೇ ಸೋನಿಯಾ ಗಾಂಧಿಗೆ ಪತ್ರ ಬರೆದಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕವಾಗಲಿ ಎಂದು ಕೋರಿದ್ದಾರೆ.
ಕೆಲವು ವಾರಗಳ ಹಿಂದೆ ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿಗಳು, ಮಾಜಿ ಸಂಸದರು ಸೇರಿದಂತೆ ಹಲವು ನಾಯಕರು ಪಕ್ಷದ ನಾಯಕತ್ವ ಬದಲಾವಣೆ ಮಾಡುವಂತೆ ಕೋರಿ ಬರೆದ ಪತ್ರ ಪಕ್ಷದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುತ್ತಿದ್ದು ಮುಂದಿನ ಅಧ್ಯಕ್ಷರು ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಕಾಡಿದೆ. ಹೀಗಿರುವಾಗ ರಾಹುಲ್ ಗಾಂಧಿ ಪರ ಸಿದ್ದರಾಮಯ್ಯ ಬ್ಯಾಟಿಂಗ್ ಮಾಡಿದ್ದಾರೆ.
"ಗಾಂಧಿ ಕುಟುಂಬದವರಿಂದ ಮಾತ್ರ ಪಕ್ಷ ಉಳಿಸಲು ಸಾಧ್ಯ. ಗಾಂಧಿ ಕುಟುಂಬವೇ ಪಕ್ಷವನ್ನ ಮುನ್ನಡೆಸಬೇಕು. ನೀವೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕು. ನಿಮ್ಮ ಆರೋಗ್ಯ ಸಹಕರಿಸದಿದ್ದರೆ ರಾಹುಲ್ ಗಾಂಧಿ ಅವರಿಗೆ ಜವಾಬ್ದಾರಿ ವಹಿಸಿ. ಎಐಸಿಸಿ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳುವಂತೆ ಮನವೊಲಿಸಿ," ಎಂದು ಸೋನಿಯಾ ಬಳಿ ಕೋರಿದ್ದಾರೆ.
ಮುಂದುವರಿದು, "ದೇಶದಲ್ಲಿ ಅಘೋಷಿತ ಎಮರ್ಜನ್ಸಿ ಎದುರಾಗಿದೆ. 1977 ಮತ್ತು 98 ರಲ್ಲಿ ಕಾಂಗ್ರೆಸ್ಗೆ ಎದುರಾಗಿದ್ದ ಪರಿಸ್ಥಿತಿ ಈಗ ಮತ್ತೆ ಎದುರಾಗಿದೆ. ಅಂದು ಕಾಂಗ್ರೆಸ್ ನಾಯಕತ್ವವನ್ನ ಗಾಂಧಿ ಕುಟುಂಬವೇ ವಹಿಸಿಕೊಂಡು ಪಕ್ಷವನ್ನ ಮೇಲೆತ್ತಿತ್ತು. ಈಗ ಮತ್ತೆ ಗಾಂಧಿ ಕುಟುಂಬವೇ ಪಕ್ಷವನ್ನ ಮೇಲೆತ್ತಬೇಕು," ಎಂದು ಸಿದ್ದರಾಮಯ್ಯ ತಮ್ಮ ಆಶಯವನ್ನು ವ್ಯಕ್ತಪಡಿಸಿದ್ದಾರೆ.
Published by:Rajesh Duggumane
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ