ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ; ರಾಹುಲ್ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

ಹರಿಹರದ ಪಂಚಮಸಾಲಿ ಜಾತ್ರೆಯಲ್ಲಿ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ನಡುವೆ ನಡೆದ ಮಾತಿನ ಚಕಮಕಿ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಿರಾಕರಿಸಿದರು.

news18-kannada
Updated:January 15, 2020, 4:55 PM IST
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ; ರಾಹುಲ್ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ
ಸಿದ್ದರಾಮಯ್ಯ
  • Share this:
ನವದೆಹಲಿ: ರಾಹುಲ್ ಗಾಂಧಿ ಅವರಿಗೆ ರಾಜ್ಯದ ವಿದ್ಯಮಾನಗಳ ಬಗ್ಗೆ ಮನವರಿಕೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಬಗ್ಗೆ ನನ್ನ ಅಭಿಪ್ರಾಯ ಹೇಳಿದ್ದೇನೆ. ಈ ಬಾರಿಯೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಇರುತ್ತಾರೆ. ಹೊಸ ನೇಮಕಾತಿ ಆದೇಶ ಯಾವಾಗ ಬರುತ್ತದೆ ಅನ್ನೋದು ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

ನವದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು,  ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕಡಿತ ವಿಚಾರವಾಗಿ ಗರಂ ಆದರು. ಅದು ಬಡವರಿಗೆ ಕೊಡುವ ವಿಚಾರ. 2.34 ಲಕ್ಷ ಕೋಟಿ ಬಜೆಟ್​ನಲ್ಲಿ ನಾಲ್ಕು ಸಾವಿರ ಕೋಟಿ ವೆಚ್ಚ ಮಾಡಲು ಸಾಧ್ಯವಿಲ್ಲವೇ? ಹಾಗೆನಾದರೂ ಅಕ್ಕಿಯನ್ನು ಕಡಿತ ಮಾಡಿದರೆ ಬಡವರು ತಿರುಗಿ ಬೀಳ್ತಾರೆ. ನಮ್ಮ ಸರ್ಕಾರ ಬಂದಿದ್ದರೆ ಬಡವರಿಗೆ 10 ಕೆ.ಜಿ. ಅಕ್ಕಿ ಕೊಡ್ತಾ ಇದ್ವಿ.  ಬಡವರು ಹೊಟ್ಟೆ ತುಂಬಾ ಊಟ ಮಾಡಬೇಕು. ನಮ್ಮ ಅವಧಿಯಲ್ಲಿ ಪ್ರವಾಹ ಬಂದರೂ ಬಡವರು ಗುಳೆ ಹೋಗಲಿಲ್ಲ, ಬರಗಾಲ ಬಂದಾಗಲೂ ಗುಳೇ ಹೋಗಲಿಲ್ಲ. ಬಡವರಿಗೆ ಕೊಡುವ ಅಕ್ಕಿಯಲ್ಲಿ ಏಕೆ ಕಡಿತ ಮಾಡಬೇಕು ಎಂದು ಹೇಳಿದರು.

ಹರಿಹರದ ಪಂಚಮಸಾಲಿ ಜಾತ್ರೆಯಲ್ಲಿ ವಚನಾನಂದ ಸ್ವಾಮೀಜಿ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ನಡುವೆ ನಡೆದ ಮಾತಿನ ಚಕಮಕಿ ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಲು ಸಿದ್ದರಾಮಯ್ಯ ನಿರಾಕರಿಸಿದರು.

ಇದನ್ನು ಓದಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಎಸ್​ಪಿಜಿ-ಬ್ಲಾಕ್​​ ಕಮಾಂಡೋ ಭದ್ರತೆ?

First published:January 15, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading