2023ರ ವಿಧಾನಸಭಾ ಚುನಾವಣೆಯಲ್ಲಿ (Assembly Election 2023) ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಎಲ್ಲಿ ಸ್ಪರ್ಧೆ ಮಾಡ್ತಾರೆ ಅನ್ನೋದರ ಬಗ್ಗೆ ಕುತೂಹಲ ಮನೆ ಮಾಡಿದೆ. ಕಳೆದ ಕೆಲ ತಿಂಗಳಿನಿಂದ ಸಿದ್ದರಾಮಯ್ಯನವರು ಕ್ಷೇತ್ರದ ಹುಡುಕಾಟದಲ್ಲಿದ್ದಾರೆ. ಇಂದು ಮಂಡ್ಯದ ಮದ್ದೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, ಇದೀಗ ಚಾಮುಂಡೇಶ್ವರಿ (Chamundeshwari) ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ಬಾರಿ ಚಾಮುಂಡೇಶ್ವರಿ ಮತ್ತು ಬಾದಾಮಿ (Badami) ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ನ ಜಿ.ಟಿ.ದೇವೇಗೌಡರ (GT Devegowda) ವಿರುದ್ಧ ಸೋಲು ಕಂಡಿದ್ದರು. ಬಾದಾಮಿಯಲ್ಲಿ ಶ್ರೀರಾಮುಲು (Sriramulu) ವಿರುದ್ಧ ಗೆಲುವು ದಾಖಲಿಸಿದ್ದರು.
ನನಗೆ ಈಗಾಗಲೇ ನಾಲ್ಕೈದು ಕ್ಷೇತ್ರದಿಂದ ನಿಲ್ಲಲು ಹೇಳುತ್ತಿದ್ದಾರೆ. ಆದ್ರೆ ನಾನು ಈವರೆಗೂ ಎಲ್ಲಿ ನಿಲ್ಲಬೇಕು ಎಂದು ತೀರ್ಮಾನ ಮಾಡಿಲ್ಲ. ಈ ಬಗ್ಗೆ ಯೋಚನೆ ಮಾಡಿ ತೀರ್ಮಾನ ಮಾಡುತ್ತೇನೆ. ಆದ್ರೆ ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ ಎಂದು ಹೇಳಿದರು.
ಅಗವಧಿಗೂ ಮುನ್ನ ಚುನಾವಣೆ ಬಂದ್ರೆ ನಾವ್ ಸಿದ್ಧ
ನನ್ನ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಬರಲ್ಲ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಯಿ, ಯಡಿಯೂರಪ್ಪ, ಸಿಟಿ ರವಿ ಸೇರಿದಂತೆ ಹಲವರು ಹೇಳಿದ್ದಾರೆ. ಅವಧಿಗೂ ಮುನ್ನ ಯಾಕಾಗಿ ಚುನಾವಣೆ ಮಾಡ್ತಾರೆ. ಏಪ್ರಿಲ್ ನಲ್ಲಿ ಚುನಾವಣೆ ಇರೋದು ಇದೆಲ್ಲ ಊಹಾಪೋಹಗಳು. ಅವಧಿಗೂ ಮುನ್ನ ಚುನಾವಣೆ ಬಂದ್ರೆ ನಾವು ಸಿದ್ಧರಿದ್ದೇವೆ. ಜನರು ನಮ್ಮ ಪರವಾಗಿದ್ದಾರೆ ಎಂದರು.
ಇದನ್ನೂ ಓದಿ: Deve Gowda: "ಕಾಂಗ್ರೆಸ್ನಿಂದ ಕಹಿ ಅನುಭವ ಆಗಿದೆ, ಮತ್ತೆ ಸಹವಾಸವೇ ಬೇಡ" ಎಂದ ದೇವೇಗೌಡ! ಮಾಜಿ ಪ್ರಧಾನಿ Exclusive ಮಾತು
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ತಾರೆ
ಪಂಚರಾಜ್ಯ ಚುನಾವಣೆ ನಂತರ ಕಾಂಗ್ರೆಸ್ ಜೆ.ಡಿ.ಎಸ್ ಶಾಸಕರು ಬಿಜೆಪಿಗೆ ಬರುತ್ತಾರೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಗೆ ಎಷ್ಟು ಜನ ಬರುತ್ತಾರೆ ಕಾದು ನೋಡಿ. ಕಾಂಗ್ರೆಸ್ ತೊರೆದು ಯಾರು ಬಿಜೆಪಿ ಸೇರಲ್ಲ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದು ಮತ್ತೆ ಪುನರುಚ್ಚರಿಸಿದರು.
ಪಕ್ಷ ತೊರೆಯುತ್ತಿರೋದರಿಂದ ಇಬ್ರಾಹಿಂ ಆರೋಪ
ಒಲ್ಲದ ಗಂಡನಿಗೆ ಮೊಸರಲ್ಲು ಕಲ್ಲು ಅಂತಾರಲ್ಲ ಆ ರೀತಿ ಇಬ್ರಾಹಿಂ ಆರೋಪ ಮಾಡುತ್ತಿದ್ದಾರೆ. ಪಕ್ಷದಿಂದ ಬಿಡ್ತಾ ಇರೋದ್ರಿಂದ ಆರೋಪ ಮಾಡ್ತಿದ್ದಾರೆ. ಕಾಂಗ್ರೆಸ್ ಪಕ್ಷ ಇಬ್ರಾಹಿಂಗೆ ಎಲ್ಲವನ್ನು ಕೊಟ್ಟಿದೆ. ಆದ್ರೆ ಮನುಷ್ಯನಿಗೆ ಆಸೆ ಇರಬೇಕು ದುರಾಸೆ ಇರಬಾರದು ಎಂದು ವಾಗ್ದಾಳಿ ನಡೆಸಿದರು.
ಹಾಲಿ ಶಾಸಕ ಸಂಗಮೇಶ್ ಗೆ ಟಿಕೆಟ್ ತಪ್ಪಿಸಿ ಭದ್ರಾವತಿಯಲ್ಲಿ ಇಬ್ರಾಹಿಂ ಟಿಕೆಟ್ ಕೊಟ್ಟಿದ್ದೇವು. ಅಲ್ಲಿಯು ಆತ ಸೋತ. ಅದಾದ ಮೇಲೆ ಎಂಎಲ್ ಸಿ ಮಾಡಿದ್ದೀವಿ. MLCಯನ್ನು ರಿನಿವಲ್ ಮಾಡಿದರೂ, ಪಕ್ಷ ಬಿಟ್ಟು ಹೋಗಿದ್ದಾನೆ. ನಾನು ಪಕ್ಷ ಬಿಡಬೇಡ ಅಂತ ಫೋನ್ ಮಾಡಿ ಹೇಳಿದ್ದೀವಿ. .ಆದ್ರೆ ವಿರೋಧ ಪಕ್ಷ ನಾಯಕನ ಸಿಗಲಿಲ್ಲ ಅಂತ ಪಕ್ಷ ಬಿಟ್ಟಿದ್ದಾರೆ. ರಾಜಕಾರಣದಲ್ಲಿ ಆಸೆಗಳಿರಬೇಕು ಆದ್ರೆ ದುರಾಸೆ ಇರಬಾರದು ಎಂದು ಸಿಎಂ ಇಬ್ರಾಹಿಂ ವಿರುದ್ಧ ಆಕ್ರೋಶ ಹೊರ ಹಾಕಿದರು.
ಜೆಡಿಎಸ್, ಬಿಜೆಪಿ ಮೈತ್ರಿ ಮಾಡಿಕೊಂಡ್ರೆ ನಮಗೆ ಚಿಂತೆ ಇಲ್ಲ
ಜಿ.ಟಿ.ದೇವೆಗೌಡರು ನನ್ನ ಜೊತೆ ಮಾತಮಾಡಿದ್ದಾರೆ. ಅವರು ಮತ್ತು ಅವರ ಮಗನಿಗೆ ಟಿಕೆಟ್ ಕೇಳಿದ್ದಾರೆ. ನಾನು ಇನ್ನು ಈ ಬಗ್ಗೆ ಹೈಕಮಾಂಡ ಜೊತೆ ಮಾತನಾಡಿಲ್ಲ ಎಂದರು. ಬಿಜೆಪಿ ಜೆ.ಡಿ.ಎಸ್ ಮೈತ್ರಿಯಾದ್ರೂ ಮಾಡ್ಕೊಳ್ಳಿ ಅಥವಾ ಹೊಂದಾಣಿಕೆಯಾದ್ರೂ ಮಾಡಿಕೊಳ್ಳಲಿ. ಅವರು ಯಾರ ಜೊತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡ್ರೂ ನಾವು ತಲೆ ಕೆಡಿಸಿಕೊಳ್ಳಲ್ಲ ಎಂದು ಹೇಳಿದರು.
ಇದನ್ನೂ ಓದಿ: ಮಹಾತ್ಮ ಗಾಂಧೀಜಿ ಅವರ ಮಾತನ್ನ Rahul Gandhi ಕಾರ್ಯರೂಪಕ್ಕೆ ತಂದಿದ್ದಾರೆ: Pralhad Joshi ವ್ಯಂಗ್ಯ
ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ನಾನು ಕಾಂಗ್ರೆಸ್ ನಲ್ಲಿ ನೆಮ್ಮದಿಯಾಗಿದ್ದೇನೆ ಎಂದು ಹೇಳುವ ಮೂಲಕ ಪಕ್ಷ ತೊರೆಯುವ ಬಗ್ಗೆ ಹರಿದಾಡುತ್ತಿರುವ ಊಹಪೋಹಕ್ಕೆ ತೆರೆ ಎಳೆದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ